ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ -ಸಿ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಈ ಬಗ್ಗೆ ಶೀಘ್ರದಲ್ಲಿಯೇ ಅಧಿಸೂಚನೆ ಪ್ರಕಟಿಸಲಿದೆ.
ಬೆಂಗಳೂರು, (ಡಿ.17) : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1236 ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಮುಂದಾಗಿದೆ.
ಮೈತ್ರಿ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ರದ್ದುಗೊಳಿಸಿದ ಬಿಜೆಪಿ ಸರ್ಕಾರ
undefined
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯಲ್ಲಿ 174, ಕಂದಾಯ ಇಲಾಖೆಯಲ್ಲಿ 177, ವಸತಿ ಶಿಕ್ಷಣ ಇಲಾಖೆಯಲ್ಲಿ 156, ಸಮಗ್ರ ಶಿಶು ಅಭಿವೃದ್ಧಿ ಯೋಜನೆ 102, ಸಬ್ ರಿಜಿಸ್ಟ್ರಾರ್ 107 ಸೇರಿದಂತೆ ವಿವಿಧ ಇಲಾಖೆಗಳ 1236 ಕ್ಕೂ ಹೆಚ್ಚು ಗ್ರೂಪ್-ಸಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ತೀರ್ಮಾನಿಸಿದೆ.
ನಿರುದ್ಯೋಗಿಗಳನ್ನು ಉದ್ಯೋಗಸ್ಥರಾಗಿಸಲು ಕರ್ನಾಟಕ ಸರ್ಕಾರದಿಂದ ಮಹತ್ವದ ಯೋಜನೆ
ಡಿಸೆಂಬರ್ ಕೊನೆಯ ವಾರದಲ್ಲಿ ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗುವ ನಿರೀಕ್ಷೆ ಇದ್ದು, ಜನವರಿ 2 ರಿಂದ ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸಲು ಲೋಕಸೇವಾ ಆಯೋಗ ಸಿದ್ದತೆ ನಡೆಸಿದೆ.
ಇವುಗಳ ಜತೆಗೆ ಲೋಕೋಪಯೋಗಿ ಇಲಾಖೆಯ 870 ಇಂಜಿನಿಯರ್‌ಗಳ ನೇಮಕಾತಿ ನಡೆಯುವ ಸಾಧ್ಯತೆಗಳಿವೆ. ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರದ ಅವಧಿಯಲ್ಲಿ 870 ಇಂಜಿನಿಯರ್‌ಗಳ ನೇಮಕಾತಿಯನ್ನು ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರ ರದ್ದುಗೊಳಿಸಿದ್ದು, ಹೊಸದಾಗಿ ನೇಮಕಾತಿಗೆ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರ ಕೆಪಿಎಸ್‌ಸಿಗೆ ಪತ್ರ ಬರೆದಿದೆ.
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಈ ಹಿನ್ನೆಲೆಯಲ್ಲಿ ಗ್ರೂಪಿ ಸಿ ಹುದ್ದೆಗಳ ಜತೆಗೆ ಇಂಜಿನಿಯರ್ ಹುದ್ದೆಗಳಿಗೂ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಇದರಿಂದ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸಮಯ ಸಿಕ್ಕಾಗೆಲ್ಲ ಕೆಪಿಎಸ್‌ಸಿ ವೆಬ್‌ಸೈಟ್ http://www.kpsc.kar.nic.in/ ಚೆಕ್ ಮಾಡುತ್ತಿರಬೇಕು.