ಕೆಪಿಟಿಸಿಎಲ್‌ನ 902 ಹುದ್ದೆ ಭರ್ತಿಗೆ ನೇಮಕಾತಿ

By Kannadaprabha News  |  First Published May 25, 2024, 10:54 AM IST

ರಾಜ್ಯಾದ್ಯಂತ ಪರಿಣಾಮಕಾರಿ ವಿದ್ಯುತ್ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗುತ್ತಿದೆ: ಇಂಧನ ಸಚಿವ ಕೆ.ಜೆ. ಜಾರ್ಜ್ 


ಬೆಂಗಳೂರು(ಮೇ.25):  ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು (ಕೆಪಿಟಿಸಿಎಲ್) ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿ ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮೊದಲು ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್(ವಿದ್ಯುತ್), 17 ಸಹಾಯಕ ಇಂಜಿನಿರ್ಯ(ಸಿವಿಲ್), 15 ಮಂದಿ ಕಿರಿಯ ಇಂಜಿನಿರ್ಯ(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ.

ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿರ್ಯ) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್‌ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು. ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ ದಿನವಾಗಿದೆ.

Tap to resize

Latest Videos

undefined

ಪಿಎಸ್ಐ ಸೇರಿ ಸರಕಾರದ ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಪ್ರಕಟ

ಈ ಬಗ್ಗೆ ಪ್ರತಿಕ್ರಿಯಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್, ರಾಜ್ಯಾದ್ಯಂತ ಪರಿಣಾಮಕಾರಿ ವಿದ್ಯುತ್ ಪ್ರಸರಣ ಸೇವೆ ಒದಗಿಸುವುದು ನಮ್ಮ ಬದ್ಧತೆ. ಈ ನಿಟ್ಟಿನಲ್ಲಿ ಪಾರದರ್ಶಕವಾಗಿ ನೇಮಕ ಪ್ರಕ್ರಿಯೆ ನಡೆಸಿ, ಅಭ್ಯರ್ಥಿಗಳಿಗೆ ಕೆಲಸದ ಆದೇಶ ನೀಡಲಾಗುತ್ತಿದೆ ಎಂದರು.

click me!