ಆಯ್ಕೆಯಾಗಿದ್ದ 100 ಅಭ್ಯರ್ಥಿಗಳು ಬಂದಿರಲಿಲ್ಲ. ಹಾಗಾಗಿ ಅವರ ಸ್ಥಾನಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 100 ಜನ ಹೆಚ್ಚುವರಿ ಅಭ್ಯರ್ಥಿಗಳನ್ನು ಪಡೆದು ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಇನ್ನೊಂದು ತಿಂಗಳಲ್ಲಿ ಅಥವಾ ಈ ವರ್ಷಾಂತ್ಯದೊಳಗೆ 1500 ಹುದ್ದೆಗಳ ನೇಮಕಾತಿಗೆ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು: ಇಂಧನ ಸಚಿವ ಕೆ.ಜೆ.ಜಾರ್ಜ್
ವಿಧಾನಸಭೆ(ಡಿ.07): ಕೆಪಿಟಿಸಿಎಲ್‌ನ 1500 ವಿವಿಧ ಹುದ್ದೆಗಳ ನೇಮಕಾತಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಆಯ್ಕೆಪಟ್ಟಿಯನ್ನು ಈ ವರ್ಷಾಂತ್ಯದೊಳಗೇ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯ ಎಸ್.ಸುರೇಶ್ ಕುಮಾರ್ ಅವರು ಈ ವಿಷಯ ಪ್ರಸ್ತಾಪಿಸಿ, ಕಳೆದ ಜುಲೈನಲ್ಲೇ ಪರೀಕ್ಷೆ ನಡೆಸಿರುವ 1500 ಹುದ್ದೆಗಳಿಗೆ ನ್ಯಾಯಾಲಯದಲ್ಲಿ ಇದ್ದ ಪ್ರಕರಣ ಮುಕ್ತಾಯವಾಗಿ ನಾಲ್ಕು ತಿಂಗಳಲ್ಲಿ ಆಯ್ಕೆ ಪಟ್ಟಿ ಪ್ರಕಟಿಸಲು ಸೂಚಿಸಿದೆ. ಆದರೂ, ಇಲ್ಲಿಯವರೆಗೆ ಆಯ್ಕೆ ಪಟ್ಟಿ ಪ್ರಕಟಿಸಿಲ್ಲ ಎಂದರು.
5500 ಹೊಸ ಬಸ್, 9000 ಸಿಬ್ಬಂದಿ ನೇಮಕಾತಿ: ಸಚಿವ ರಾಮಲಿಂಗಾರೆಡ್ಡಿ
ಇದಕ್ಕೆ ಉತ್ತರಿಸಿದ ಸಚಿವರು, ಆಯ್ಕೆಯಾಗಿದ್ದ 100 ಅಭ್ಯರ್ಥಿಗಳು ಬಂದಿರಲಿಲ್ಲ. ಹಾಗಾಗಿ ಅವರ ಸ್ಥಾನಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 100 ಜನ ಹೆಚ್ಚುವರಿ ಅಭ್ಯರ್ಥಿಗಳನ್ನು ಪಡೆದು ಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಇನ್ನೊಂದು ತಿಂಗಳಲ್ಲಿ ಅಥವಾ ಈ ವರ್ಷಾಂತ್ಯದೊಳಗೆ 1500 ಹುದ್ದೆಗಳ ನೇಮಕಾತಿಗೆ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು ಎಂದರು.