ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಅರ್ಹ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು, (ಜೂನ್. 20): ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 1222 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
undefined
ಮತ್ತಷ್ಟು ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 20, 2020ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ ಸೇರ್ಪಡೆಯಾಗಿ ಅಮೂಲ್ಯ ಜೀವಗಳನ್ನು ರಕ್ಷಿಸಲು ಇದೊಂದು ಸದಾವಕಾಶವಾಗಿದೆ ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಹತೆ:
* ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗೆ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ವಿಜ್ಞಾನ ಪದವಿ ಅದರಲ್ಲಿ ರಾಸಾಯನಶಾಸ್ತ್ರವನ್ನು ಒಂದು ವಿಷಯವನ್ನಾಗಿ ಅಧ್ಯಯನ ಮಾಡಿರಬೇಕು.
* ಅಗ್ನಿಶಾಮಕ ಚಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್ ಅಥವಾ ತತ್ಸಮಾನ
* ಚಾಲಕ ತಂತ್ರಜ್ಞರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಆಟೋಮೊಬೈಲ್ ವಿಭಾಗದಲ್ಲಿ ಐಟಿಐ ವಿದ್ಯಾರ್ಹತೆ ಪಾಸ್ ಮಾಡಿರಬೇಕು.
ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 250 ರೂ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 100ರೂ. ನಿಗದಿಪಡಿಸಲಾಗಿದ್ದು, ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ಶಾಖೆಗಳಲ್ಲಿ ಬ್ಯಾಂಕಿನ ಕಛೇರಿ ವೇಳೆಯಲ್ಲಿ ಚಲನ್ ನೀಡಿ ಹಣ ಪಾವತಿಸಬೇಕು.
ವಯೋಮಿತಿ: ಅರ್ಜಿಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 20-07-2020 ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 26 ವರ್ಷ ಗರಿಷ್ಠ. ST /SC ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷ.
ನೇಮಕಾತಿ ವಿಧಾನ
* ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೇಹದಾರ್ಡ್ಯತೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಸಿ, ಇವುಗಳಲ್ಲಿ ಅರ್ಹತೆ ಪಡೆದವರಿಗೆ ಲಿಖಿತ ಪರೀಕ್ಷೆಯನ್ನು ಏಕಕಾಲದಲ್ಲಿ ಬೆಂಗಳೂರಿನ ಆಯ್ದ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.
* ಅಭ್ಯರ್ಥಿಗಳು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇರೆಗೆ ಹುದ್ದೆಗಳ ವರ್ಗೀಕರಣಕ್ಕೆ ಅನುಗುಣವಾಗಿ ಒಂದು ಹುದ್ದೆಗೆ ಮೂರು ಅಭ್ಯರ್ಥಿಗಳನ್ನು ಮೌಖಿಕ ಪರೀಕ್ಷೆ 1:3 ಅನುಪಾತದಲ್ಲಿ ಕರೆಯಲಾಗುತ್ತದೆ. ಈ ಮೌಖಿಕ ಪರೀಕ್ಷೆ 10 ಅಂಕ ಹೊಂದಿರುತ್ತದೆ.
* ಲಿಖಿತ ಪರೀಕ್ಷೆ ಮೌಖಿಕ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಕ್ರೋಢೀಕರಿಸಿ ಅಂತಿಮ ತಾತ್ಕಾಲಿಕ ಆಯ್ಕೆಪಟ್ಟಿಯನ್ನು 1:1 ಅನುಪಾತದಲ್ಲಿ ಪ್ರಕಟಿಸಲಾಗುತ್ತದೆ. ನಂತರ ಈ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ, ಮೂಲ ದಾಖಲೆಗಳ ಪರೀಕ್ಷೆ ನಡೆಸಿ, ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ.
ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ www.ksp.gov.in ವೆಬ್‌ಸೈಟ್‌ಗೆ ಭೇಟಿ ಮತ್ತಷ್ಟು ಮಾಹಿತಿ ತಿಳಿದುಕೊಳ್ಳಬಹುದು.