ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ (Karnataka State Khadi and Village Industries Board) ಯಲ್ಲಿ ಪದವೀಧರರಿಗೆ ಬಂಪರ್ ಆಫರ್ ಇದೆ. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಒಟ್ಟು 29 ಹುದ್ದೆಗಳು ಖಾಲಿ ಇದ್ದು, ಈ ನೇಮಕಾತಿ ಪ್ರಕ್ರಿಯೆ ಮೂಲಕ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ(District Khadi Gramodyoga officer), ಪ್ರಥಮ ದರ್ಜೆ ಸಹಾಯಕರು(First Division Assistant), ತಾಂತ್ರಿಕ ಮೇಲ್ವಿಚಾರಕರು(Technical Supervisor), ತಾಂತ್ರಿಕ ಸಹಾಯಕರು(Technical Assistant) ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 22ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೂ ವಿಸ್ತರಿಸಲಾಗಿದೆ. ಈ ಮೊದಲು ನವೆಂಬರ್24ಕ್ಕೆ ಕೊನೆಯ ದಿನಾಂಕವಾಗಿತ್ತು. ಇದೀಗ ಇನ್ನು ಒಂದು ವಾರ ಕಾಲ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧಿಕೃತ ವೆಬ್ಸೈಟ್ khadi.karnataka.gov.in ಗೆ ಭೇಟಿ ನೀಡಿ ಪರಿಶೀಲಿಸಬಹುದು.
ಆಯಾ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕು. ಸ್ನಾತಕೋತ್ತರ ಪದವಿ, ಪದವಿ, ಡಿಪ್ಲೋಮಾ ಹಾಗೂ ಐಟಿಐ ಪಾಸಾಗಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ- 2 ಹುದ್ದೆಗಳು, ಪ್ರಥಮ ದರ್ಜೆ ಸಹಾಯಕರು(FDA)- 9 ಹುದ್ದೆಗಳು, ತಾಂತ್ರಿಕ ಮೇಲ್ವಿಚಾರಕರು- 5 ಹುದ್ದೆಗಳು, ತಾಂತ್ರಿಕ ಸಹಾಯಕರು- 13 ಹುದ್ದೆಗಳು ಸೇರಿ ಒಟ್ಟು -29 ಹುದ್ದೆಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು.
undefined
ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ- ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಪ್ರಥಮ ದರ್ಜೆ ಸಹಾಯಕರು(FDA)- ಯಾವುದೇ ಪದವಿ ಪಡೆದಿರಬೇಕು. ತಾಂತ್ರಿಕ ಮೇಲ್ವಿಚಾರಕರು- ಬಿಎಸ್ಸಿ ಅಥವಾ ಡಿಪ್ಲೋಮಾ ಪಾಸಾಗಿರಬೇಕು. ತಾಂತ್ರಿಕ ಸಹಾಯಕರು- ಯಾವುದೇ ಟ್ರೇಡ್ನಲ್ಲಿ ಐಟಿಐ ಪಾಸಾಗಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
State Government Jobs: ಹೈಕೋರ್ಟ್‌ನ 150 ಟೈಪಿಸ್ಟ್ ಹುದ್ದೆ, ನ.27 ಅರ್ಜಿ ಸಲ್ಲಿಸಲು ಕೊನೆ ದಿನ
ಸಾಮಾನ್ಯ ವರ್ಗ/ ಹಿಂದುಳಿದ ವರ್ಗದ ಅಭ್ಯರ್ಥಿಗಳು 800 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1/ ಮಾಜಿ ಸೈನಿಕ ಅಭ್ಯರ್ಥಿಗಳು 400 ರೂ. ಅರ್ಜಿ ಶುಲ್ಕ ಪಾವತಿಸಬೇಕು. ವಿಶೇಷ ಚೇತನ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿಯಿದೆ.
ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಅದೇ ರೀತಿ ಗರಿಷ್ಠ 38 ವರ್ಷ ಮೀರಿರಬಾರದು. ಸಾಮಾನ್ಯ ಅಭ್ಯರ್ಥಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್ಸಿ/ಎಸ್ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗೆ ಮಾಸಿಕ ₹ 45,300-88,300 ರೂ. ವೇತನ ಸಿಗಲಿದೆ. ಪ್ರಥಮ ದರ್ಜೆ ಸಹಾಯಕರು(FDA)ಹುದ್ದೆಗೆ ಮಾಸಿಕ ₹ 27,650-52,650 ರೂ. ವೇತನ, ತಾಂತ್ರಿಕ ಮೇಲ್ವಿಚಾರಕರಿಗೆ ಮಾಸಿಕ ₹ 27,650-52,650 ರೂ.ವೇತನ, ತಾಂತ್ರಿಕ ಸಹಾಯಕರು ಹುದ್ದೆಗೆ ಮಾಸಿಕ ₹ 21,400-42,000 ರೂ. ವೇತನ ದೊರೆಯಲಿದೆ.
Jobs Opportunity: ನೌಕರರ ರಾಜ್ಯ ವಿಮಾ ನಿಗಮದಲ್ಲಿ ಪ್ರೊಫೆಸರ್ ಹುದ್ದೆಗಳಿಗೆ Walk-in-interview
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಬೆಂಗಳೂರು, ಮಂಗಳೂರು, ಮಂಡ್ಯ, ಮೈಸೂರು, ಶಿವಮೊಗ್ಗ, ಉಡುಪಿ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಬೆಳಗಾವಿ, ದಾವಣಗೆರೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧಿಕೃತ ವೆಬ್ಸೈಟ್ https://khadi.karnataka.gov.in ಗೆ ಭೇಟಿ ನೀಡಿ.