KSOU Mysuru Recruitment 2022: ಫ್ಯಾಕಲ್ಟಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರಾಮುವಿ

By Suvarna News  |  First Published Jan 22, 2022, 9:40 PM IST

ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಖಾಲಿ ಇರುವ ವಿವಿಧ ಫ್ಯಾಕಲ್ಟಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. 32 ಹುದ್ದೆಗಳು ಖಾಲಿ ಇದೆ.


ಬೆಂಗಳೂರು(ಜ.22): ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (Karnataka State Open University - KSOU) ಖಾಲಿ ಇರುವ ವಿವಿಧ ಫ್ಯಾಕಲ್ಟಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 32 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ  https://ksoumysuru.ac.in/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಭೋಧಕರ ಹುದ್ದೆಗೆ ಅರ್ಜಿ  ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಎಚ್​ಡಿ ಪೂರ್ಣಗೊಳಿಸಿರಬೇಕು.

Tap to resize

Latest Videos

undefined

ವಯೋಮಿತಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಭೋಧಕರ ಹುದ್ದೆಗೆ ಅರ್ಜಿ  ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು.

ಆಯ್ಕೆ ಪ್ರಕ್ರಿಯೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಭೋಧಕರ ಹುದ್ದೆಗೆ ಅರ್ಜಿ  ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

NTPC Limited Recruitment 2022: ಜನರಲ್ ಸರ್ಜನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ನೇಮಕಕ್ಕೆ ಅರ್ಜಿ ಆಹ್ವಾನ: ಸಕಾಲ ಮಿಷನ್‌ ಮತ್ತು ಕರ್ನಾಟಕ ಸರ್ಕಾರದ ಇ-ಆಡಳಿತ ಉಪಕ್ರಮಗಳನ್ನು ನಿರ್ವಹಿಸಲು ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ (karnataka Information Technology Consultant ) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯನ್ನು 1 ವರ್ಷದ ಅವಧಿಯವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಫೆಬ್ರವರಿ 1 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ http://www.sakala.kar.nic.in/index ಗೆ ಭೇಟಿ ನೀಡಬಹುದು.

ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಿದವರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. 

ಶೈಕ್ಷಣಿಕ ವಿದ್ಯಾಭ್ಯಾಸ: ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿಇ ಇನ್ ಕಂಪ್ಯೂಟರ್ ಸೈನ್ಸ್‌ (ಎಂಟೆಕ್ ಐಚ್ಛಿಕ) ನಲ್ಲಿ ಪಾಸಾಗಿರಬೇಕು.

ವಯೋಮಿತಿ: ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷ. ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ.

Prasar Bharati Recruitment 2022: ಪ್ರಸಾರ ಭಾರತಿಯಲ್ಲಿನ ವಿವಿಧ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಅನುಭವ ಮತ್ತು ಕೌಶಲ್ಯಗಳು: ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಪ್ರಾಜೆಕ್ಟ್‌ ಮ್ಯಾನೇಜ್ಮೆಂಟ್‌ ಟೂಲ್ಸ್‌ ಮತ್ತು ಪ್ರಾಜೆಕ್ಟ್‌ಗಳ ನಿರ್ವಹಣೆ ಬಗ್ಗೆ ಅನುಭವವಿರಬೇಕು. 5 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.

ವೇತನ ವಿವರ: ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,40,937 ರೂ ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 01-02-2022.
ಸಂದರ್ಶನ ನಡೆಯುವ ದಿನಾಂಕ 7-02-2022 ರ ಬೆಳಿಗ್ಗೆ 11-00 ಗಂಟೆಗೆ.

ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ aosakala@karnataka.gov.in ಗೆ ಇ-ಮೇಲ್‌ ಮೂಲಕ ಕಳುಹಿಸುವುದು. ಇತರೆ ಹೆಚ್ಚಿನ ಮಾಹಿತಿಗಳಿಗೆ ಸಂಪೂರ್ಣ ಅಧಿಸೂಚನೆಗೆ ವೆಬ್‌ಸೈಟ್‌ www.sakala.kar.nic.in ಗೆ ಭೇಟಿ ನೀಡಬಹುದು.

click me!