ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

By Suvarna News  |  First Published Jan 29, 2021, 8:16 PM IST

ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ನೇಮಕಾತಿ ಸಂಬಂಧ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮಹತ್ವದ ಟ್ವೀಟ್ ಮಾಡಿದ್ದಾರೆ. 


ಬೆಂಗಳೂರು, (ಜ.29): ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್ ಸಬ್-ಇನ್ಸ್‍ಪೆಕ್ಟರ್(ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಹುದ್ದೆಗಳಿಗೆ ಅರ್ಜಿ ಆಹ್ವಾನಕ್ಕೆ ಸಿದ್ಧತೆಗಳು ನಡೆದಿವೆ.

ಒಟ್ಟು 545 ಹುದ್ದೆಗಳಿಗೆ ಆಹ್ವಾನಿಸಲಾಗುತ್ತಿದೆ. ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ನೇಮಕಾತಿ ಸಂಬಂಧ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಮಹತ್ವದ ಟ್ವೀಟ್ ಮಾಡಿದ್ದಾರೆ. 

Tap to resize

Latest Videos

undefined

ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 ಪಿಎಸ್ ಐ ನೇಮಕಾತಿ ಸಂಬಂಧ ಮತ್ತೊಂದು ನೇಮಕಾತಿ ಆದೇಶ ಅತಿ ಶೀಘ್ರದಲ್ಲಿಯೇ ಹೊರಬೀಳಲಿದೆ. ನಾವು ಮತ್ತಷ್ಟು ನೇಮಕಾತಿ ಮಾಡಿಕೊಳ್ಳುತ್ತಿದ್ದೇವೆ. ಕಟ್‌ ಅಫ್ ಡೇಟ್‌ ನ್ನು ಏಪ್ರಿಲ್ 1, 2021 ನ್ನು ಪರಿಗಣಿಸಲಾಗುವುದು. ಫೆಬ್ರವರಿ 22 , 2021 ರಂದು ಈ ಕುರಿತ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಪೊಲೀಸ್ ಮಹಾನಿರ್ದೆಶಕರು ಟ್ವೀಟ್ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಹಾಗೂ ಖಾಲಿ ಹುದ್ದೆಗಳ ವರ್ಗೀಕರಣವನ್ನು ಹಾಗೂ ಅರ್ಹತಾ ಷರತ್ತುಗಳಿಗೆ ಅಧಿಕೃತ ವೆಬ್‍ಸೈಟ್ www.recruitment.ksp.gov.in ನಲ್ಲಿನ ಅಧಿಸೂಚನೆ ಗಮನಿಸಬೇಕು.
 

We are recruiting...now!! pic.twitter.com/fpkpDEUL7Z

— DGP KARNATAKA (@DgpKarnataka)
click me!