ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆ ನೇಮಕಾತಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಇನ್ನುಷ್ಟು ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರು, (ಏ.03): ಖಾಲಿಯಿರುವ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ಭರ್ತಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅರ್ಜಿ ಆಹ್ವಾನಿಸಿದೆ.
ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶವರಿಗೆ ಪ್ರತ್ಯೇಕ ಮೀಸಲಾತಿ ವ್ಯವಸ್ಥೆ ಕಲ್ಪಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು 2021 ಮೇ 3 ಕೊನೆ ದಿನವಾಗಿದೆ.
undefined
ಒಟ್ಟು 402 ಹುದ್ದೆಗಳ ಪೈಕಿ 26 ಹುದ್ದೆಗಳು ಕಲ್ಯಾಣ ಕರ್ನಾಟಕಕ್ಕೆ ಮೀಸಲಾಗಿದೆ. ಉಳಿದ 376 ಹುದ್ದೆಗಳಿಗೆ ಕಲ್ಯಾಣ ಕರ್ನಾಟಕದವರೂ ಸೇರಿದಂತೆ ಕರ್ನಾಟಕದ ಯಾವುದೇ ಪ್ರದೇಶದವರು ಅರ್ಜಿ ಸಲ್ಲಿಸಬಹುದು.
ಇನ್ನಷ್ಟು ಉದ್ಯೋಗ ನೇಮಕಾತಿ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಹತೆ: ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಕೋರ್ಸ್ ಮಾಡಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ವಯೋಮಿತಿ: ಸಾಮಾನ್ಯ ಕೆಟಗರಿಯವರಿಗೆ 21ರಿಂದ 30 ವರ್ಷ ಹಾಗೂ ಎಸ್‌ಸಿ, ಎಸ್‌ಟಿ, ಕೆಟಗರಿ-1ರ ಅಭ್ಯರ್ಥಿಗಳಿಗೆ 21ರಿಂದ 32 ವರ್ಷಗಳ ತನಕವೆಂದು ವಯೋಮಿತಿ ನಿಗದಿಪಡಿಸಲಾಗಿದೆ.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಪಿಸಿ, ಎಚ್‌ಸಿ, ಎಎಸ್‌ಐ ಹುದ್ದೆಗಳಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವವರಿಗೆ ವಯೋಮಿತಿ ವಿಭಿನ್ನವಾಗಿದೆ. ಅವರು ಸಾಮಾನ್ಯ ಕೆಟಗರಿಯವರಾಗಿದ್ದರೆ 35 ವರ್ಷದವರೆಗೆ ಹಾಗೂ ಇತರೆ ಕೆಟಗರಿಯವರಾಗಿದ್ದರೆ 40 ವರ್ಷದವರೆಗೆ ವಯೋಮಿತಿ ನಿಗದಿಯಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ ಕೆಟಗರಿ ಹಾಗೂ ಒಬಿಸಿ ಅಭ್ಯರ್ಥಿಗಳು 500 ರೂ. ಮತ್ತು ಎಸ್‌ಸಿ, ಎಸ್‌ಟಿ, ಕೆಟಗರಿ-1ರ ಅಭ್ಯರ್ಥಿಗಳು 250 ರೂ. ಶುಲ್ಕ ನಿಗದಿಪಡಿಸಲಾಗಿದ್ದು, ಅರ್ಜಿ ಶುಲ್ಕವನ್ನು ಪಾವತಿಸಲು ಮೇ 5ರ ಅಂತಿಮ ದಿನವಾಗಿದೆ.
ನೇಮಕಾತಿ ಪ್ರಕ್ರಿಯೆ: ಎರಡು ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಅಭ್ಯರ್ಥಿಗಳು ಮೊದಲು ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಎದುರಿಸಿ, ನಂತರ ಲಿಖಿತ ಪರೀಕ್ಷೆಯನ್ನು ಬರೆಯಬೇಕಿದೆ.
ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ