KSP Recruitment 2022: ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Suvarna News  |  First Published Dec 30, 2021, 6:18 PM IST
  •  ರಾಜ್ಯ ಪೊಲೀಸ್ ಇಲಾಖೆಯು ಸಶಸ್ತ್ರ ಮೀಸಲು ಪಡೆಯಲ್ಲಿ  71 ಸಬ್ ಇನ್‌ಸ್ಪೆಕ್ಟರ್  ಹುದ್ದೆ
  • ಪದವಿ ಅಥವಾ ತತ್ಸಮಾನ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 27

ಬೆಂಗಳೂರು(ಡಿ.30): ಕರ್ನಾಟಕ ರಾಜ್ಯ ಪೊಲೀಸ್ (Karnataka State Police ) ಇಲಾಖೆಯು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 71 ಸಬ್ ಇನ್‌ಸ್ಪೆಕ್ಟರ್  ಹುದ್ದೆಗಳು ಖಾಲಿಯಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಪದವಿ ಅಥವಾ ತತ್ಸಮಾನ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು,  ಆಸಕ್ತರು ಆನ್‌ಲೈನ್  ಮೂಲಕ ಜನವರಿ 27ರ ಒಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ತಾಣ http://rec21.ksp-online.in/ ಗೆ ಅಥವಾ https://ksp.karnataka.gov.in/ ಗೆ ಭೇಟಿ ನೀಡಿ. 

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಸಶಸ್ತ್ರ ಮೀಸಲು ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯು.ಜಿ.ಸಿ ಯಿಂದ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿಯನ್ನು  ಪೂರೈಸಿರಬೇಕು.

Tap to resize

Latest Videos

undefined

ವಯೋಮಿತಿ: ಸಶಸ್ತ್ರ ಮೀಸಲು ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 27, 2022ರ ಅನ್ವಯ ಕನಿಷ್ಠ 21 ರಿಂದ ಗರಿಷ್ಠ 26 ವಯಸ್ಸಿನವರಾಗಿರಬೇಕು. ಇನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ (SC,ST,CAT-01, 2A,2B,3A & 3B) ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು, ಅದರಂತೆ ಗರಿಷ್ಠ 28 ವರ್ಷ ವಯೋಮಿತಿಯೊಳಗಿನವರು ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

KSP Recruitment 2022: ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ಕೊಟ್ಟ ಕರ್ನಾಟಕ, ಇಂದೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಗುಣಮಟ್ಟದ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ನಿಯಾಮಾನುಸಾರ ವೇತನ ನಿಗದಿಯಾಗಿದೆ.

ಅರ್ಜಿ ಶುಲ್ಕ: ಸಶಸ್ತ್ರ ಮೀಸಲು ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 500 ಪಾವತಿಸಬೇಕು. ಎಸ್‌ಸಿ, ಎಸ್‌ಟಿ, ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 250 ರೂ. ಪಾವತಿಸಬೇಕು.

ಅರ್ಜಿ ಸಲ್ಲಿಸುವ ಮಾಹಿತಿ: ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://rsi21.ksponline.co.in/ ಗೆ ಭೇಟಿ ನೀಡಿ, ಅಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ  ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅರ್ಜಿ ಸಲ್ಲಿಸಿ. ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 27, ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ ಜನವರಿ 29, 2022.

KSP Recruitment 2022: ರಾಜ್ಯ ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಹ್ವಾನ

ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಹ್ವಾನ: ಕರ್ನಾಟಕ ಪೊಲೀಸ್ ಇಲಾಖೆಯ ( Karnataka State Police  ) ಅಧೀನದಲ್ಲಿ ಬರುವಂತ ನ್ಯಾಯ ವಿಜ್ಞಾನ ಪ್ರಯೋಗಾಲಯ ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವಂತ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ( Scene of Crime Officer - SOCO ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮಡಿವಾಳ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದದ 206 ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (ಸೀನ್ ಆಫ್ ಕ್ರೈಂ ಆಫೀಸರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು  ಜನವರಿ  15 ಕೊನೆಯ ದಿನವಾಗಿರುತ್ತದೆ.  ಹೆಚ್ಚಿನ ಮಾಹಿತಿಗೆ https://recruitment.ksp.gov.in/ ಗೆ ಭೇಟಿ ನೀಡಲು ಕೋರಲಾಗಿದೆ.

click me!