ಕೆಎಸ್‌ಆರ್‌ಟಿಸಿ 8 ವರ್ಷದ ಹಿಂದಿನ 2000 ಚಾಲಕ-ಕಂ-ನಿರ್ವಾಹಕರ ನೇಮಕಾತಿ; ಇಂದು ಆದೇಶ ಪತ್ರ ವಿತರಣೆ!

Published : Jun 17, 2025, 01:04 PM IST
KSRTC Driver cum Conductor Jobs

ಸಾರಾಂಶ

ಕೆಎಸ್‌ಆರ್‌ಟಿಸಿಯಲ್ಲಿ 8 ವರ್ಷಗಳ ಬಳಿಕ 2000 ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು. ಮೆರಿಟ್ ಆಧಾರದ ಮೇಲೆ ನೇಮಕಾತಿ ನಡೆದಿದೆ.

ಬೆಂಗಳೂರು (ಜೂ.17): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ನಿಗಮದಲ್ಲಿ 8 ವರ್ಷಗಳ ಬಳಿಕ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೂ.17ರ ಮಂಗಳವಾರ 2000 ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳಿಗೆ ನಿಯೋಜನಾ ಆದೇಶ ಪತ್ರಗಳನ್ನು ವಿತರಣೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ (ವಾಸು), ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಅವರು ಇಂದು ಸಾಂಕೇತಿಕವಾಗಿ 51 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ ಮಾಡಿದರು.

ನಂತರ ಮಾತನಾಡಿದ ಸಾರೊಗೆ ಸಚಿವ ರಾಮಲಿಂಗಾರೆಡ್ಟಿ ಅವರು, ಚಾಲನಾ ಸಿಬ್ಬಂದಿಯ ನೇಮಕಾತಿಯು ಪಾರದರ್ಶಕವಾಗಿ ಮಾಡಿದ್ದು, ಯಾವುದೇ ವ್ಯಕ್ತಿಯ ಹಸ್ತಕ್ಷೇಪ ಇರುವುದಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಗೊಳಿಸಲಾಗಿರುತ್ತದೆ. ಹೊಸದಾಗಿ ನೇಮಕಗೊಂಡಿರುವ ಚಾಲನಾ ಸಿಬ್ಬಂದಿಗಳು ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕರ್ತವ್ಯ ‌ನಿರ್ವಹಿಸಬೇಕು. ಹಾಗೂ ಮಹಿಳಾ ಪ್ರಯಾಣಿಕರೊಂದಿಗೆ, ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ತಿಳಿಸಿದರು. ಅಪಘಾತವು ಸಂಭವಿಸಿದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಲು ಸೂಚಿಸಿದರು.

ರಾಜ್ಯದ 4 ಸಾರಿಗೆ ನಿಗಮಗಳಿಂದ ಸುಮಾರು 1000 ಕ್ಕೂ ಹೆಚ್ಚು ಮೃತರ ಅವಲಂಭಿತರಿಗೆ ನೌಕರಿಯನ್ನು ನೀಡಿದ್ದು, ಸುಮಾರು 9000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಈಗಾಗಲೇ 7500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಂಡಿರುತ್ತದೆ. ಅಪಘಾತದಿಂದ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬವನ್ನು ಆರ್ಥಿಕವಾಗಿ ಸಧೃಡಗೊಳಿಸುವ ಸಲುವಾಗಿ ರೂ.1 ಕೋಟಿ ವಿಮಾ ಯೋಜನೆ, ಸ್ವಾಭಾವಿಕವಾಗಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬಕ್ಕೆ ರೂ.10 ಲಕ್ಷಗಳ ಕಟುಂಬ ಕಲ್ಯಾಣ ಯೋಜನೆ ಅಡಿ ಪರಿಹಾರವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ನಿಗಮದಲ್ಲಿ 8 ವರ್ಷಗಳ ಬಳಿಕ ನೇಮಕಾತಿ ಪೂರ್ಣ

  • ನಿಗಮದಲ್ಲಿ 2020ನೇ ಸಾಲಿನಲ್ಲಿ ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಮಾಡಲು ಅಧಿಸೂಚನೆ ಹೊರಡಿಸಲಾಗಿತ್ತು.
  • ಸದರಿ ನೇಮಕಾತಿ ಪ್ರಕ್ರಿಯೆಗಳು ಚಾಲನೆಯಲ್ಲಿದ್ದಾಗ ಕೋವಿಡ್-19 ರ ಹಿನ್ನಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ನೇಮಕಾತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಲಾಗಿತ್ತು.
  • ಸರ್ಕಾರವು ದಿನಾಂಕ: 13-10-2023 ರಂದು 300 ತಾಂತ್ರಿಕ ಸಹಾಯಕ ಹಾಗೂ 2000 ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ಭರ್ತಿಮಾಡಲು ಅನುಮತಿ ನೀಡಿತು.
  • ಅದರಂತೆ, ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಜನವರಿ-2024 ರ ಮಾಹೆಯಲ್ಲಿ ವಿಭಾಗ /ಘಟಕಗಳಿಗೆ ಹಂಚಿಕೆ ಮಾಡಲಾಯಿತು.
  • 2000 ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಒಟ್ಟು 25,494 ಅರ್ಜಿಗಳು ಸ್ವೀಕೃತಗೊಂಡಿರುತ್ತದೆ. ದಾಖಲಾತಿ ಪರಿಶೀಲನೆಗೆ ಹಾಜರಾದ ಅಭ್ಯರ್ಥಿಗಳ ಪೈಕಿ13954 ಅಭ್ಯರ್ಥಿಗಳು ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಅರ್ಹರಾಗಿದ್ದರು.
  • ಅಭ್ಯರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹುಮ್ನಾಬಾದ್ ಚಾಲನಾ ತರಬೇತಿ ಕೇಂದ್ರ ಮತ್ತು ಕರಾರಸಾ ನಿಗಮದ ಹಾಸನ ಚಾಲನಾ ತರಬೇತಿ ಕೇಂದ್ರಗಳಲ್ಲಿ ಪರೀಕ್ಷೆ ಪಡೆಯುಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ 2672 ಅಭ್ಯರ್ಥಿಗಳು ಹುಮ್ನಾಬಾದ್ ಹಾಗೂ 11,282 ಅಭ್ಯರ್ಥಿಗಳು ಹಾಸನ ತರಬೇತಿ ಕೇಂದ್ರಗಳಲ್ಲಿ ಚಾಲನಾವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿರುತ್ತಾರೆ.
  • ಚಾಲನಾ ವೃತ್ತಿ ಪರೀಕ್ಷೆಯು ಸಂಪೂರ್ಣ ಗಣಕೀಕೃತವಾಗಿದ್ದು, ಮೊದಲ ಬಾರಿಗೆ ಚಾಲನಾ ವೃತ್ತಿಪರೀಕ್ಷೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.
  • ಚಾಲನಾ ವೃತ್ತಿ ಪರೀಕ್ಷೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳಲ್ಲಿ ಮೆರಿಟ್/ಮೀಸಲಾತಿ ಅನುಸಾರ 2000 ಹುದ್ದೆಗಳಿಗೆ ದಿನಾಂಕ:05-06-2025 ರಂದು ಸಂಭವನೀಯ ಆಯ್ಕೆಪಟ್ಟಿ ಪ್ರಕಟಿಸಿ, ಅಭ್ಯರ್ಥಿಗಳಿಂದ ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಲಾಗಿತ್ತು.
  • ದಿನಾಂಕ:12-06-25 ರಂದು ಅಂತಿಮ ಆಯ್ಕೆ ಪಟ್ಟಿಯನ್ನು ನಿಗಮದ ವೆಬ್-ಸೈಟ್ ನಲ್ಲಿ ಪ್ರಕಟಿಸಲಾಯಿತು
  • ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳನ್ನು ಜೇಷ್ಠತೆ/ಮೆರಿಟ್ ಆಧಾರದಲ್ಲಿ ಗಣಕೀಕೃತ ಕೌನ್ಸಿಲಿಂಗ ಮೂಲಕ ವಿಭಾಗ/ಘಟಕಗಳಿಗೆ ನೇರವಾಗಿ ನಿಯೋಜಿಸಲಾಗುತ್ತಿದೆ.
  • ಈ ಸಂಬಂಧ ದಿನಾಂಕ: 16-06-2025 ರಿಂದ 19-06-2025 ರವರೆಗೆ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುತ್ತಿದ್ದು, ವಿಭಾಗ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ದಿನಾಂಕ: 05-7-2025 ರೊಳಗಾಗಿ ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ.
  • ದಿನಾಂಕ: 16-06-2025 ರಂದು ಕೌನ್ಸಿಲಿಂಗ್ ನಲ್ಲಿ ವಿಭಾಗ ಆಯ್ಕೆಮಾಡಿಕೊಂಡ ಅಭ್ಯರ್ಥಿಗಳ ಪೈಕಿ 50/50 ಅಂಕಗಳಿಸಿರುವ ಅಭ್ಯರ್ಥಿಗಳಿಗೆ ದಿನಾಂಕ: 17-06-2025 ರಂದು ಕೇಂದ್ರ ಕಚೇರಿಯಲ್ಲಿ ನಿಯೋಜನಾ ಆದೇಶ ವಿತರಣೆ ಮಾಡಲಾಯಿತು.
  • ನಿಗಮದಲ್ಲಿ ಅನುಕಂಪದ ಆಧಾರದ ಮೇಲೆ ಕಳೆದ ಒಂದು ವರ್ಷದ ಅವಧಿಯಲ್ಲಿ 209 ಮೃತಾವಲಂಬಿತರಿಗೆ ನೌಕರಿ ನೀಡಲಾಗಿದೆ.
  • ನಾಲ್ಕು ಸಾರಿಗೆ ನಿಗಮದಲ್ಲಿ 1,000 ಮೃತಾವಲಂಭಿತರಿಗೆ ನೇಮಕಾತಿ ನೀಡಲಾಗಿದೆ
  • ಒಟ್ಟಾರೆ ನಿಗಮದಲ್ಲಿ ಕಳೆದ ಒಂದುವರೆ ವರ್ಷದಲ್ಲಿ 2500 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ.

PREV
Read more Articles on
click me!

Recommended Stories

ಮಂಗಳೂರು: 'ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಐವನ್, ಮಿಥುನ್‌ಗೆ ನೋಟಿಸ್?
ಸೋಶಿಯಲ್ ಮೀಡಿಯಾದಿಂದ ದೂರವಿದ್ದು 10 ಸರ್ಕಾರಿ ನೌಕರಿ ಪಡೆದು ಸ್ಫೂರ್ತಿಯಾದ ಸಾಧಕ!