KSRTC ನೇಮಕಾತಿ: 3745 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

By Suvarna News  |  First Published Feb 18, 2020, 7:32 PM IST

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.


ಬೆಂಗಳೂರು, (ಫೆ.18): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ ಖಾಲಿ ಇರುವ ಚಾಲಕ ಮತ್ತು ಚಾಲಕ ಕಮ್ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 

1200 ಚಾಲಕ ಹಾಗೂ 2545 ಚಾಲಕ ಕಮ್ ಕಂಡಕ್ಟರ್ ಒಟ್ಟು 3745 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ 20 ಮಾರ್ಚ್ 2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Latest Videos

undefined

ಗ್ರಾಮಲೆಕ್ಕಿಗ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ& ಇತರೆ ಅರ್ಹತೆಗಳು
* SSLC ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
* ಭಾರಿ ಸರಕು ಸಾಗಾಣಿಕೆ ವಾಹನ ಚಾಲನಾ ಪರವಾನಗಿ ಹೊಂದಿ ಕನಿಷ್ಠ ಎರಡು ವರ್ಷಗಳಾಗಿರಬೇಕು. 
* ಪ್ರಯಾಣಿಕರ ಭಾರಿ ವಾಹನ ಚಾಲನಾ ಪರವಾನಗಿ ಹಾಗೂ ಕರ್ನಾಟಕ ಪಿ. ಎಸ್. ವಿ ಬ್ಯಾಡ್ಜ್ ಹೊಂದಿರಬೇಕು.
* ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಮಾತ್ರ ಚಾಲ್ತಿಯಲ್ಲಿರುವ ನಿರ್ವಾಹಕ ಪರವಾನಗಿ ಮತ್ತು ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು.

ವಯೋಮಿತಿ: 
* ಸಾಮಾನ್ಯ ವರ್ಗ-35 ವರ್ಷಗಳು
* 2A/2B/3A/3B-38 ವರ್ಷ
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ 1-40 ವರ್ಷಗಳು

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 500 ರೂ., ST/SC /ಪ್ರವರ್ಗ-1/ಮಾಜಿ ಸೈನಿಕರಿಗೆ 250 ರೂ.ಗಳ ಶುಲ್ಕ ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ಚಾಲಕ ಹುದ್ದೆಗೆ ಮಾಸಿಕವಾಗಿ 10,000 ಹಾಗೂ ಚಾಲಕ ಕಂ-ನಿರ್ವಹಕ ಹುದ್ದೆಗೆ 9,100. ಇನ್ನು 2 ವರ್ಷ ತರಬೇತಿ ಪೂರ್ಣಗೊಳಿಸಿದ ನಂತರ ಇಲಾಖೆ ಅನುಸಾರವಾಗಿ ವೇತನ ದೊರೆಯಲಿದೆ.

.ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!