ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮದ ಕಾರ್ಯನಿರ್ವಹಣಾ ನಿರ್ದೇಶಕರು, ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರು, (ಜ.21): ಕರ್ನಾಟಕ ಪ್ರವಾಸೋದ್ಯಮ ಇಲಾಖೆ 38 ಡಿಟಿಸಿ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಜನವರಿ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಹತೆ: ಎಂಬಿಎ / ಬಿಇ / ಬಿ.ಟೆಕ / ಎಂಟಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ: ಕನಿಷ್ಟ 25 ರಿಂದ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ: ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000 ರೂ. ರಿಂದ 50,000 ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಇದರ ಸ್ಕ್ಯಾನ್ ಕಾಪಿ ಮತ್ತು ಶೈಕ್ಷಣಿಕ ಅರ್ಹತೆಗಳ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿ, ಇ-ಮೇಲ್ ವಿಳಾಸ ktilrecruitment@gmail.com ಗೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.
ಇತರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸ - ಮಲ್ಲಿಕಾರ್ಜುನ್, ಎಕ್ಸಿಕ್ಯೂಟಿವ್ ಡೈರೆಕ್ಟರ್, ಕರ್ನಾಟಕ ಟೂರಿಸಂ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್, ಗವರ್ನಮೆಂಟ್ ಆಫ್ ಕರ್ನಾಟಕ (ಆಫೀಸರ್ ನಂಬರ್ - 080-22352727).