ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ ಹುದ್ದೆ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಆಹ್ವಾಸಲಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಇಂಜಿನಿಯರ್ ಮತ್ತು 14 ಪ್ರಥಮ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಹ ಆಸಕ್ತ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾಸಲಾಗಿದೆ.
ಹುದ್ದೆಯ ವಿವರ
undefined
1. ಸಹಾಯಕ ಇಂಜಿನಿಯರ್ (ಸಿವಿಲ್) : 50 ಹುದ್ದೆ
2. ಪ್ರಥಮ ದರ್ಜೆ ಲೆಕ್ಕ ಸಹಾಯಕ ( ಗ್ರೂಪ್ - ಸಿ) :14 ಹುದ್ದೆ
ಪ್ರಮುಖ ದಿನಾಂಕಗಳು
1. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-02-2024
2. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-03-2024
ಅರ್ಜಿ ಶುಲ್ಕ
ಸಾಮಾನ್ಯ/ 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ : ರೂ. 750
ಎಸ್ ಸಿ/ ಎಸ್ ಟಿ/ ಪ್ರವರ್ಗ -1/ಮಾಜಿ ಸೈನಿಕರು/ ವಿಕಲಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ : ರೂ.500
ವಯಸ್ಸಿನ ಮಿತಿ
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ: 35 ವರ್ಷಗಳು
2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷಗಳು
ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ : 40 ವರ್ಷಗಳು
ಪ್ರಿಯತಮೆ ದೂರ ಆಗಿದ್ದಕ್ಕೆ ನೊಂದ ದಾವಣಗೆರೆ ಮೂಲದ ಪ್ರಿಯಕರ ಬೆಂಗಳೂರಿನಲ್ಲಿ ಸಾವು!
ಶೈಕ್ಷಣಿಕ ವಿದ್ಯಾರ್ಹತೆ
1. ಸಹಾಯಕ ಇಂಜಿನಿಯರ್ (ಸಿವಿಲ್) : ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಬಿ.ಇ/ಬಿ-ಟೆಕ್ ಇಂಜಿನಿಯರಿಂಗ್
ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಡೆದಿರಬೇಕು.
(ಸೂಚನೆ: ಅಂಚೆ ಮತ್ತು ದೂರ ಶಿಕ್ಷಣ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.)
2. ಪ್ರಥಮ ದರ್ಜೆ ಲೆಕ್ಕ ಸಹಾಯಕ : ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಬಿ.ಕಾಂ ವಿಭಾಗದಲ್ಲಿ ಪದವಿಯನ್ನು ಪಡೆದಿರಬೇಕು.
ರಂಜಾನ್ ತಿಂಗಳು, ಶಾಲಾ ವೇಳಾಪಟ್ಟಿ ಬದಲಿಸಿ ರಾಜ್ಯ ಸರ್ಕಾರ ಸುತ್ತೋಲೆ
ವೇತನ ಶ್ರೇಣಿ
1. ಸಹಾಯಕ ಇಂಜಿನಿಯರ್ (ಸಿವಿಲ್) : ರೂ.43100 – ರೂ.83900
2. ಪ್ರಥಮ ದರ್ಜೆ ಲೆಕ್ಕ ಸಹಾಯಕ (ಗ್ರೂಪ್ – ಸಿ ) : ರೂ.27650 – ರೂ.52650
ಆಯ್ಕೆ ವಿಧಾನ
ಈ ಮೇಲ್ಕಂಡ ಹುದ್ದೆಗಳಿಗೆ ಆಯೋಗವು ಒಎಂಆರ್ ಮಾದರಿ ಆಫ್‌ಲೈನ್ ಪರೀಕ್ಷೆಯನ್ನು ನಡೆಸುತ್ತದೆ.
1. ಸಹಾಯಕ ಇಂಜಿನಿಯರ್ (ಸಿವಿಲ್ ) ಹುದ್ದೆಗೆ
ಇಲ್ಲಿ ಸಾಮಾನ್ಯ ಪತ್ರಿಕೆ -1 ಮತ್ತು ನಿರ್ದಿಷ್ಟ ಪತ್ರಿಕೆ -2 ಇರುತ್ತದೆ.
ಪತ್ರಿಕೆ -1: ಇದು ಸಾಮಾನ್ಯ ಪತ್ರಿಕೆಯಾಗಿದ್ದು, ಪ್ರಚಲಿತ ವಿದ್ಯಮಾನಗಳು, ಸಾಮಾನ್ಯ ವಿಜ್ಞಾನ, ಕರ್ನಾಟಕ ಇತಿಹಾಸ, ಭಾರತದ ಇತಿಹಾಸ, ಭೂಗೋಳ ಶಾಸ್ತ್ರ, ಸಾಮಾನ್ಯ ಬೌದ್ಧಿಕ ಸಾಮರ್ಥ್ಯದ ವಿಷಯ ಹಾಗೂ ದೈನಂದಿನ ಗ್ರಹಿಕೆಯ ವಿಷಯಗಳಿಗೆ ಸಂಬಂಧಸಿದ 100 ಅಂಕಗಳಿಗೆ 2 ಗಂಟೆಯ ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ.
ಪತ್ರಿಕೆ -2: ಇದು ನಿರ್ದಿಷ್ಟ ಪತ್ರಿಕೆಯಾಗಿದ್ದು ಇಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಬೆಳಗಾವಿ ಅವರು ಬಿ.ಇ (ಸಿವಿಲ್) ಪದವಿಗೆ ನಿಗದಿಪಡಿಸಿದ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ 100 ಅಂಕಗಳಿಗೆ 2 ಗಂಟೆಯ ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ.
2. ಪ್ರಥಮ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ
ಪತ್ರಿಕೆ -೧ : ಪ್ರಚಲಿತ ಘಟನೆಗಳಿಗೆ ಸಂಬಂಧಿಸಿದ ವಿಷಯಗಳ ಸಾಮಾನ್ಯ ಜ್ಞಾನ, ಭೂಗೋಳ ಶಾಸ್ತ್ರ, ಸಾಮಾನ್ಯ ಬೌದ್ಧಿಕ ಸಾಮರ್ಥ್ಯದ ವಿಷಯ, ಭಾರತದ ಸಂವಿಧಾನ, ಇತಿಹಾಸ ವಿಷಯಗಳು, ಕರ್ನಾಟಕದ ಅರ್ಥ ವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳ ಮೇಲೆ 100 ಅಂಕಗಳಿಗೆ 2 ಗಂಟೆಯ ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ.
ಪತ್ರಿಕೆ -೨ : ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್, ಕಂಪ್ಯೂಟರ್ ಜ್ಞಾನಕ್ಕೆ ಸಂಬಂಧಿಸಿದಂತೆ 100 ಅಂಕಗಳಿಗೆ 2 ಗಂಟೆಯ ಅವಧಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ.
ಅರ್ಹತಾ ನಿಯಮಗಳು
1. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ಶೇಕಡಾ 35 ರಷ್ಟು ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ.
2. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
ಪರೀಕ್ಷಾ ಕೇಂದ್ರಗಳ ಮಾಹಿತಿ: ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರು, ಧಾರವಾಡ, ದಾವಣಗೆರೆ ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ: https://kuwsdb.org/