ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ನೇರ ನೇಮಕಾತಿ : ಅರ್ಜಿ ಹಾಕಿ

By Suvarna NewsFirst Published Mar 19, 2020, 2:40 PM IST
Highlights

ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಬಗೆಗಿನ ಮಾಹಿತಿಯನ್ನ ಈ ಕೆಳಗಿಂತಿದೆ.

ಮಂಡ್ಯ, (ಮಾ.19): ಮಂಡ್ಯ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 54 ಗ್ರಾಮಲೆಕ್ಕಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

 ನೇರ ನೇಮಕಾತಿ ಮೂಲಕ ಭರ್ತಿ ಮಾಡಲು  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್ ಮೂಲಕ ಏಪ್ರಿಲ್ 18,2020ರೊಳಗೆ ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

KPSC ನೇಮಕಾತಿ: 1080 ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಸಿಬಿಎಸ್ಸಿ ಅಥವಾ ಐಸಿಎಸ್ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು.

 ವಯೋಮಿತಿ: ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. SC/ST ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

ಕರ್ನಾಟಕ: ಪಿಕಾರ್ಡ್ ಬ್ಯಾಕ್‌ನಲ್ಲಿ ಬ್ಯಾಕ್‌ಲಾಗ್ ಹುದ್ದೆಗಳು, ಅರ್ಜಿ ಹಾಕಿ

ವೇತನ ಶ್ರೇಣಿ: ಗ್ರಾಮಲೆಕ್ಕಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400 ರಿಂದ 42,000 ರೂ. ವೇತನವನ್ನು ನಿಗದಿಪಡಿಲಸಾಗಿದೆ.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಪಿಯುಸಿ ಪರೀಕ್ಷೆ ಅಥವಾ ಸಿ.ಬಿ.ಎಸ್.ಇ ಅಥವಾ ಐ.ಸಿ.ಎಸ್.ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.  

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, 2ಎ,2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂ. ಮತ್ತು ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ನಿಗದಿಪಡಿಸಲಾಗಿದ್ದು, ಏಪ್ರಿಲ್ 22,2020ರೊಳಗೆ ಅರ್ಜಿ ಶುಲ್ಕ ಪಾವತಿಸಬೇಕು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

click me!