ರೇಷ್ಮೆ ಇಲಾಖೆಯ 2004 ಹುದ್ದೆಗಳನ್ನು ರದ್ದುಪಡಿಸುವ ಪ್ರಸ್ತಾವನೆ ಕೈಬಿಡಲು ಒತ್ತಾಯ

By Suvarna News  |  First Published Oct 8, 2022, 3:40 PM IST

ರೇಷ್ಮೆ ಇಲಾಖೆಯ 2004 ಹುದ್ದೆಗಳನ್ನು ರದ್ದುಪಡಿಸುವ ಪ್ರಸ್ತಾವನೆಯನ್ನು ರಾಜ್ಯ ಸರಕಾರ  ಕೈಬಿಡಬೇಕೆಂದು. ವಿಧಾನ ಪರಿಷತ್ತು ಸದಸ್ಯ ಮರಿತಿಬ್ಬೇಗೌಡ ಅವರು  ಆಗ್ರಹಿಸಿದ್ದಾರೆ.


ಮೈಸೂರು (ಅ.8): ರೇಷ್ಮೆ ಇಲಾಖೆಯ 2004 ಹುದ್ದೆಗಳನ್ನು ರದ್ದುಪಡಿಸುವ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ವಿಧಾನಪರಿಷತ್ತು ಸದಸ್ಯ ಮರಿತಿಬ್ಬೇಗೌಡ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿರುವ ಅವರು, ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ರೇಷ್ಮೆ ಬೇಸಾಯವನ್ನು ವಿಸ್ತರಿಸುವ ಯೋಜನೆ ಹಾಗೂ ಸುಧಾರಣೆ ತರುವ ಅಗತ್ಯವಿದೆ. ಇಲಾಖೆಯಲ್ಲಿ ಬಹಳ ಹಿಂದೆ ಮಂಜೂರಾದ ಹುದ್ದೆಗಳ ಒಟ್ಟು ಸಂಖ್ಯೆ 4299, ಭರ್ತಿಯಾಗಿರುವ ಹುದ್ದೆಗಳು 1453 ಹಾಗೂ ಖಾಲಿ ಇರುವ ಹುದ್ದೆಗಳು 2846 ಇದರ ಪೈಕಿ ಸುಮಾರು 2004 ಹುದ್ದೆಗಳನ್ನು ರದ್ದುಪಡಿಸಲು ಇಲಾಖೆ ಶಿಫಾರಸು ಮಾಡಿರುವುದು ತುಂಬಾ ದುಃಖದ ಸಂಗತಿ ಎಂದು ಅವರು ತಿಳಿಸಿದ್ದಾರೆ. ಮಂಜೂರಾಗಿರುವ 4299 ಹುದ್ದೆಗಳ ಅಗತ್ಯತೆ ತುಂಬಾ ಇದೆ. ವಿಶ್ವವಿದ್ಯಾನಿಲಯಗಳಲ್ಲಿ ಎಂ. ಎಸ್ಸಿ (ಸಿರಿಕಲ್ಚರ್‌) ಪದವೀಧರರಿಗೆ ರೇಷ್ಮೆ ಇಲಾಖೆಯಲ್ಲಿ ಕಳೆದ 25 ವರ್ಷಗಳಿಂದ ನೇಮಕಾತಿ ಮಾಡಿಕೊಳ್ಳದೆ ಇರುವುದು ದುರದೃಷ್ಟಕರ ಸಂಗತಿ. ಇದರಿಂದಾಗಿ ಪದವೀಧರರು ನಿರುದ್ಯೋಗಿಗಳಾಗಿ, ರೇಷ್ಮೆ ಬೇಸಾಯವನ್ನು ಅವಲಂಭಿಸುವ ಪರಿಸ್ಥಿತಿ ಬಂದೊಂದಗಿದೆ. ಕೂಡಲೇ ಸದರಿಯವರ ನೇಮಕಾತಿಗೆ ಅವಕಾಶ ಕಲ್ಪಿಸುವಂತೆ ಅವರು ಒತ್ತಾಯಿದ್ದಾರೆ.

ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಸರ್ಕಾರ, 25 ವರ್ಷಗಳಿಂದ ನೇಮಕಾತಿ ಮಾಡಿಕೊಳ್ಳದೆ, ಮಂಜೂರಾದ ಹುದ್ದೆಗಳನ್ನು ಸಹ ಹೆಚ್ಚಿನ ಪ್ರಮಾಣದಲ್ಲಿ ರದ್ದುಪಡಿಸುವುದರಿಂದ ರೈತರಿಗೆ ಸರ್ಕಾರವೇ ವಿಷ ಪ್ರಾಶನ ಮಾಡಿಸಿದಂತಲ್ಲವೇ? ಹುದ್ದೆ ರದ್ದತಿಯಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗುವುದಿಲ್ಲವೇ? ಮಹತ್ತರ ರೇಷ್ಮೆ ಬೇಸಾಯಕ್ಕೆ ತುಂಬಾ ತೊಂದರೆಯುಂಟಾಗುವುದಿಲ್ಲವೇ? ಈ ಎಲ್ಲಾ ಕಾರಣಗಳಿಂದ ಸುಧಾರಣೆಯ, ಉತ್ಪಾದನೆಯ ಹಿನ್ನಲೆಯಲ್ಲಿ ರದ್ದು ಮಾಡಲು ಹೊರಟಿರುವ ಸುಮಾರು 2004 ಹುದ್ದೆಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸದಿರುವಂತೆ ಅವರು ಆಗ್ರಹಿಸಿದ್ದಾರೆ.

Tap to resize

Latest Videos

ಕಲ್ಲುಗಣಿಗಾರಿಕೆ ಧೂಳಿನಿಂದ ರೇಷ್ಮೆ ಬೆಳೆ ನಷ್ಟ 

ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನ
ಚಾಮರಾಜನಗರ: ರೇಷ್ಮೆ ಇಲಾಖೆಯಿಂದ 2021-22ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾ​ಸಿರುವ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ರೇಷ್ಮೆ ಬೆಳೆಗಾರರು ಕನಿಷ್ಠ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿಗಿಂತ ಕಡಿಮೆ ಇರಬಾರದು. ರೇಷ್ಮೆ ಪಾಸ್‌ ಪುಸ್ತಕ, ರೇಷ್ಮೆ ಮೊಟ್ಟೆ, ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿ ಹೊಂದಿರಬೇಕು. ಅರ್ಹ ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾ​ಕಾರಿಗಳು, ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಪಡೆದು ಭರ್ತಿ ಮಾಡಿ ಅ. 10ರೊಳಗೆ ಕಚೇರಿಗೆ ಸಲ್ಲಿಸುವಂತೆ ರೇಷ್ಮೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಅರ್ಜಿ
ಧಾರವಾಡ: ರೇಷ್ಮೆ ಇಲಾಖೆಯು 2021-22ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿದೆ. ಕನಿಷ್ಠ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಮನೆ ಹೊಂದಿರಬೇಕು. 100 ಮೊಟ್ಟಿಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆಜಿ ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್‌ಬುಕ್‌, ರೇಷ್ಮೆ ಮೊಟ್ಟೆ, ಚಾಕಿ, ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿ ಹೊಂದಿರಬೇಕು. ಅರ್ಹರು ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಅ. 10ರೊಳಗೆ ಸಂಪರ್ಕಿಸಬಹುದು.

Ramanagara: ರೇಷ್ಮೆಗೆ ಜಾಗ​ತಿಕ ಮಾರು​ಕಟ್ಟೆ ಸೃಷ್ಟಿ​ಸುವ ಪ್ರಯತ್ನ: ಕೇಂದ್ರ ಸಚಿವೆ ದರ್ಶನ ಜರ್ದೋಶ್‌

ಬಳ್ಳಾರಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನ
ರೇಷ್ಮೆ ಇಲಾಖೆ ವತಿಯಿಂದ 2021-22ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ಅರ್ಹ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿಲಾಗಿದೆ ಎಂದು ಬಳ್ಳಾರಿ/ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯತ್‌ನ ರೇಷ್ಮೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೇಷ್ಮೆ ಬೆಳೆಗಾರರ ಅರ್ಹತೆಗಳು:
ಕನಿಷ್ಠ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆಜಿಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್‌ಬುಕ್‌, ರೇಷ್ಮೆ ಮೊಟ್ಟೆ/ ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿ ಹೊಂದಿರಬೇಕು. ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು/ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ದಾಖಲಾತಿಗಳನ್ನು ಒದಗಿಸಿ ಅರ್ಜಿ ಪಡೆದು,ಭರ್ತಿ ಮಾಡಿದ ಅರ್ಜಿಗಳನ್ನು ಅ. 10ರೊಳಗೆ ಕಚೇರಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

click me!