Open University: ಮುಕ್ತ ವಿವಿ ಪದವೀಧರರಿಗೆ ನೇಮಕಾತಿಯಲ್ಲಿ ತಾರತಮ್ಯ ಆಗದಂತೆ ಕ್ರಮ: ಅಶ್ವತ್ಥ್‌

By Kannadaprabha News  |  First Published Feb 22, 2022, 8:26 AM IST

*  ಎಲ್ಲ ರೀತಿಯ ಉದ್ಯೋಗಕ್ಕೂ ಪರಿಗಣನೆ, ಗೊಂದಲ ನಿವಾರಣೆ
* ಆನ್‌ಲೈನ್‌ ಹಾಗೂ ಡಿಜಿಟಲ್‌ ಕಲಿಕೆ ಉತ್ತೇಜಿಸಲು ನಿಯಮಾವಳಿಗೆ ಗುಣಾತ್ಮಕ ಸುಧಾರಣೆ
*  ಹೊಸ ಕೋರ್ಸ್‌ ಪರಿಚಯಿಸುವುದು ಒಳ್ಳೆಯದು


ಬೆಂಗಳೂರು(ಫೆ.22): ರಾಜ್ಯದ ಮುಕ್ತ ವಿಶ್ವವಿದ್ಯಾಲಯದಲ್ಲಿ(Open University) ಅಧ್ಯಯನ ಮಾಡಿದವರಿಗೆ ಸರ್ಕಾರದ ಯಾವುದೇ ಉದ್ಯೋಗ ನೇಮಕಾತಿಯಲ್ಲಿ ತಾರತಮ್ಯಕ್ಕೆ ಅವಕಾಶ ವಾಗದಂತೆ ಇನ್ನುಮುಂದೆ ನಿಗಾ ಗಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ(CN Ashwathnarayan) ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು(Karnataka State Open University) ಸೋಮವಾರ ನಗರದಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ಮುಕ್ತ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮಾವೇಶವನ್ನು ಉದ್ಘಾಟಿಸಿ ‘ಕೋವಿಡ್‌(Covid-19) ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ(National Education Policy) -2020 ಹಿನ್ನೆಲೆಯಲ್ಲಿ ಆನ್‌ಲೈನ್‌ ಹಾಗೂ ಡಿಜಿಟಲ್‌ ಕಲಿಕೆ ಉತ್ತೇಜಿಸಲು ನಿಯಮಾವಳಿಗೆ ಗುಣಾತ್ಮಕ ಸುಧಾರಣೆ’ ವಿಚಾರ ಕುರಿತು ಮಾತನಾಡಿದರು.

Latest Videos

undefined

ಸದ್ಯದಲ್ಲೇ ಉದ್ಯೋಗದ ಬಗ್ಗೆ ಸ್ವಯಂ ಚಾಲಿತವಾಗಿ ತಿಳಿಸುವ ಕೃತಕ ಬುದ್ದಿಮತ್ತೆ ಆಧಾರಿತ ತಂತ್ರಜ್ಞಾನ: ಅಶ್ವತ್ಥನಾರಾಯಣ

ಇತ್ತೀಚೆಗೆ ನಡೆದ ಕರ್ನಾಟಕ ಹಾಲು ಒಕ್ಕೂಟದ(KMF) ನೇಮಕಾತಿಯೊಂದರಲ್ಲಿ ಮುಕ್ತ ವಿವಿ ಅಭ್ಯರ್ಥಿಗಳಿಗೆ ಅವಕಾಶವಿಲ್ಲ ಎಂಬ ನಿಬಂಧನೆ ವಿಧಿಸಿದ್ದನ್ನು ಕುಲಪತಿಯೊಬ್ಬರು ಗಮನಕ್ಕೆ ತಂದಾಗ ಪ್ರತಿಕ್ರಿಯೆ ನೀಡಿದ ಸಚಿವರು, ವಿಶ್ವವಿದ್ಯಾಲಯ ಧನಸಹಾಯ ಆಯೋಗ(UGC) ಮಾನ್ಯತೆ ಇರುವ ಮುಕ್ತ ವಿಶ್ವವಿದ್ಯಾಲಯಗಳ ಪದವಿಗಳು ಕೂಡ ಇತರ ವಿ.ವಿ.ಗಳ ಪದವಿಗಳ ಹಾಗೆ ಎಲ್ಲ ರೀತಿಯ ಉದ್ಯೋಗಕ್ಕೂ ಪರಿಗಣನೆಯಾಗಬೇಕು. ಈ ಸಂಬಂಧ ಮುಖ್ಯಮಂತ್ರಿಯವರ ಗಮನಕ್ಕೂ ತಂದು ಇನ್ಮುಂದೆ ಯಾವುದೇ ನೇಮಕಾತಿಯಲ್ಲಿ(Recruitment) ತಾರತಮ್ಯ ಆಗದಂತೆ ಗೊಂದಲ ನಿವಾರಿಸಲಾಗುವುದು ಎಂದು ಹೇಳಿದರು.

ಮುಕ್ತ ವಿಶ್ವವಿದ್ಯಾಲಯಗಳಿಗೆ ಆನ್‌ಲೈನ್‌ ಶಿಕ್ಷಣ ನೀಡಲು(Online Education) ಅನುಮತಿ ನೀಡುವ ನಿಟ್ಟಿನಲ್ಲಿ ಯುಜಿಸಿ ತನ್ನ ನಿಯಾಮವಳಿಗಳಲ್ಲಿ ಕೆಲವು ಬದಲಾವಣೆ ಮಾಡಬೇಕು. ಮುಕ್ತ ವಿವಿಗಳು ಕೂಡ ಹೆಚ್ಚೆಚ್ಚು ಜನರಿಗೆ ಶಿಕ್ಷಣ ನೀಡಲು ಸಾಧ್ಯವಾಗುವಂತೆ ಪದವಿ ಹಾಗೂ ಸ್ನಾತಕೋತ್ತರ ಪದವಿ ಮಟ್ಟದಲ್ಲಿ ಹೊಸ ಕೋರ್ಸ್‌ಗಳನ್ನು ಪರಿಚಯಿಸುವುದು ಒಳ್ಳೆಯದು ಎಂದು ಸಚಿವರು ಪ್ರತಿಪಾದಿಸಿದರು.

ಯುಜಿಸಿ ಜಂಟಿ ಕಾರ್ಯದರ್ಶಿ ಡಾ.ಅವಿಚಲ್‌ ಕಪೂರ್‌ ಮಾತನಾಡಿ, ಮೊದಲು ಪಠ್ಯಕ್ರಮದ ಶೇ.20ರಷ್ಟನ್ನು ಆನ್‌ಲೈನ್‌ ಮೂಲಕ ಕಲಿಸಲು ಅನುಮತಿ ಇತ್ತು. ಈಗ ಇದನ್ನು ಶೇ.40ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ್‌, ಹೈದರಾಬಾದ್‌ನ ಡಾ.ಬಿ.ಆರ್‌.ಅಂಬೇಡ್ಕರ್‌ ಮುಕ್ತ ವಿ.ವಿ.ಯ ಕುಲಪತಿ ಪ್ರೊ.ಕೆ.ಸೀತಾರಾಮ ರಾವ್‌, ಅಹಮದಾಬಾದ್‌, ಒಡಿಶಾ, ತಮಿಳುನಾಡು, ಪಂಜಾಬ್‌ ಮುಕ್ತ ವಿವಿಗಳ ಕುಲಪತಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಸರಕಾರಿ ಶಾಲೆಯಲ್ಲಿ ನ್ಯಾನೊ ಉಪಗ್ರಹ ನಿರ್ಮಾಣಕ್ಕೆ 1.90 ಕೋಟಿ ರೂ. ಬಿಡುಗಡೆ

ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಅಂಗವಾಗಿ ರಾಜ್ಯದ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ಒಂದು ನ್ಯಾನೊ ಉಪಗ್ರಹವನ್ನು ವಿನ್ಯಾಸಗೊಳಿಸಿ, ಉಡಾಯಿಸುವ ಯೋಜನೆಗೆ 1.90 ಕೋಟಿ ರೂ. ಬಿಡುಗಡೆ ಮಾಡಲು ಆದೇಶಿಸಲಾಗಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದರು.

CET: ವಿದ್ಯಾರ್ಥಿಗಳಿಗೆ ಡಬಲ್‌ ಶುಲ್ಕದ ಹೊರೆ ಈ ವರ್ಷ ಇಲ್ಲ: ಸಚಿವ ಅಶ್ವತ್ಥ ನಾರಾಯಣ

ಈ ಬಗ್ಗೆ ಜ.21 ರಂದು ಪತ್ರಿಕಾ ಪ್ರಕಟಣೆ ನೀಡಿದ್ದ ಅವರು, ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸುವುದು ಈ ಯೋಜನೆಯ ಉದ್ದೇಶವಾಗಿದ್ದು, ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಇದರ ಅಂಗವಾಗಿ ಬೆಂಗಳೂರಿನ ಆಯ್ದ ಒಂದು ಸರಕಾರಿ ಶಾಲೆಯಿಂದ ಪ್ರಾಯೋಗಿಕವಾಗಿ ನ್ಯಾನೊ ಉಪಗ್ರಹವನ್ನು ವಿನ್ಯಾಸಗೊಳಿಸಿ, ಉಡಾವಣೆ ಮಾಡಲಾಗುವುದು ಎಂದಿದ್ದರು. 

ತಾಂತ್ರಿಕ ತಜ್ಞರ ಸಮಿತಿಯು ಯೋಜನೆಯ ಅನುಷ್ಠಾನದ ಉಸ್ತುವಾರಿ ನೋಡಿಕೊಳ್ಳಲಿದ್ದು, ಕೆಜಿಎಸ್3ಸ್ಯಾಟ್ ಯೋಜನೆಯಡಿ ಇದನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಜತೆಗೆ ಕೇಂದ್ರ ಸರಕಾರದ ಬಾಹ್ಯಾಕಾಶ ಇಲಾಖೆಯ `ಇನ್-ಸ್ಪೇಸ್’ ವಿಭಾಗವು ಕೂಡ ಇದಕ್ಕೆ ಅಗತ್ಯ ಸಹಕಾರ ನೀಡಲಿದೆ. 9ರಿಂದ 12 ತಿಂಗಳ ಅವಧಿಯಲ್ಲಿ ನನಸಾಗಲಿರುವ ಯೋಜನೆಗೆ  ಇಸ್ರೋ ಮತ್ತು ಭಾರತೀಯ ತಂತ್ರಜ್ಞಾನ ಕಾಂಗ್ರೆಸ್ ಒಕ್ಕೂಟದ (ಐಟಿಸಿಎ) ಸಹಯೋಗವನ್ನೂ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದರು. 

click me!