545 ಪಿಎಸ್‌ಐ ನೇಮಕಾತಿ ಪಟ್ಟಿ ತಡೆಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ..!

By Kannadaprabha News  |  First Published Sep 26, 2024, 6:00 AM IST

ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿವಿಧ ಪ್ರಾಧಿಕಾರಗಳು ಪಾಲಿಸಬೇಕಾದ ನೇಮಕಾತಿ ವಿಧಿ-ವಿಧಾನಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿರುವ ವಿವಿಧ ಸುತ್ತೋಲೆಗಳಲ್ಲಿ ಗೊಂದಲಗಳಿವೆ. ಹೈಕೋರ್ಟ್ನಲ್ಲಿ ಪ್ರಕರಣ ಬಾಕಿ ಇದೆ ಎಂದು ತಿಳಿಸಿದ ಸಚಿವ ಪ್ರಿಯಾಂಕ್ ಖರ್ಗೆ 


ಕಲಬುರಗಿ(ಸೆ.26):  545 ಪಿಎಸ್‌ಐ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿ ಆಯ್ಕೆಪಟ್ಟಿ ಹಾಗೂ ನೇಮಕಾತಿ ಆದೇಶಗಳನ್ನು ಸೆ.27ರವರೆಗೆ ತಡೆಹಿಡಿಯಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಒಳಾಡಳಿತ ಇಲಾಖೆಗೆ ಪತ್ರ ಬರೆದಿದ್ದಾರೆ. 

545 ಪಿಎಸ್‌ಐ (ಸಿವಿಲ್) ಹುದ್ದೆಗಳ ನೇರ ನೇಮಕಾತಿ ಅಧಿಸೂಚನೆಯನ್ನು 2021ರ ಜ.21ರಂದು ಹೊರಡಿಸಲಾಗಿತ್ತು. ಪರಿಶೀಲನೆಯಲ್ಲಿರುವ 2023 ಫೆ.1ರ ಸರ್ಕಾರದ ಸುತ್ತೋಲೆಗಿಂತ 2 ವರ್ಷ ಮೊದಲೇ ಅಧಿಸೂಚನೆಯಾಗಿದೆ. ಪ್ರಸ್ತುತ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ 2023ರ ಫೆ.1ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆಯ ಸಿಂಧುತ್ವದ ಸಂಬಂಧ ದಾಖಲಾಗಿರುವ ಅರ್ಜಿ ತೀರ್ಪಿನಲ್ಲಿ ಈ ಸುತ್ತೋಲೆ ರದ್ದುಪಡಿಸಲಾಗಿದೆ ಎಂದು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 

Tap to resize

Latest Videos

undefined

ಕೊನೆಗೂ 402 ಪಿಎಸ್ಐ ಪರೀಕ್ಷೆ ಮುಂದೂಡಿಕೆ ಮಾಡಿದ ಸರ್ಕಾರ!

ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿ ಸಂಬಂಧ ನೀಡುವ ತೀರ್ಪಿಗೊಳಪಟ್ಟು ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 2020ರ ಜೂ.6ರಂದು ಹೊರಡಿಸಿದ ಸುತ್ತೋಲೆ ಅನ್ವಯ ಕ್ರಮವಹಿಸುವಂತೆ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ತಿಳಿಸಲಾಗಿದೆ. ಆದರೆ, ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿವಿಧ ಪ್ರಾಧಿಕಾರಗಳು ಪಾಲಿಸಬೇಕಾದ ನೇಮಕಾತಿ ವಿಧಿ-ವಿಧಾನಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿರುವ ವಿವಿಧ ಸುತ್ತೋಲೆಗಳಲ್ಲಿ ಗೊಂದಲಗಳಿವೆ. ಹೈಕೋರ್ಟ್ನಲ್ಲಿ ಪ್ರಕರಣ ಬಾಕಿ ಇದೆ ಎಂದು ತಿಳಿಸಿದ್ದಾರೆ.

click me!