ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹಲವಾರು ಸಿಬ್ಬಂದಿ ಕೊರತೆ ಇದ್ದು ಇದನ್ನು ಸರಿಪಡಿಸಲು ಸದ್ಯದಲ್ಲೇ 2 ಸಾವಿರಕ್ಕೂ ಹೆಚ್ಚು ಕಾನ್ಸ್‌ಟೇಬಲ್ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.
ಬೆಂಗಳೂರು(ಏ.23): ಸರಕಾರಿ ಉದ್ಯೋಗ (Government Job) ಪಡೆಯಲು ಬಯಸುತ್ತಿರುವವರಿಗೆ ಸಿಹಿಸುದ್ದಿಯೊಂದಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ (Karnataka State Police Department) ಹಲವಾರು ಸಿಬ್ಬಂದಿ ಕೊರತೆ ಇದ್ದು ಇದನ್ನು ಸರಿಪಡಿಸಲು ಸದ್ಯದಲ್ಲೇ 2 ಸಾವಿರಕ್ಕೂ ಹೆಚ್ಚು ಕಾನ್ಸ್‌ಟೇಬಲ್ ನೇಮಕಾತಿಗೆ (constable recruitment) ಅಧಿಸೂಚನೆ ಬಿಡುಗಡೆ ಮಾಡಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ (DG & IGP of Karnataka Praveen sood) ಹೇಳಿದ್ದಾರೆ.
ಕೋರಮಂಗಲದ (Koramangala) ಕೆಎಸ್ಆರ್ಪಿ (KSRP) ಮೂರನೇ ಬೆಟಾಲಿಯನ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಕವಾಯತು ಸಮಾರಂಭದಲ್ಲಿ ಮಾತನಾಡಿದ ಪ್ರವೀಣ್ ಸೂದ್, ಚುನಾವಣೆ ಇರುವ ಕಾರಣಕ್ಕೆ ಈಗಾಗಲೇ ಕೆಲಸಗಳು ಆರಂಭವಾಗಿದೆ. ರಾಜಕೀಯ ಪಕ್ಷಗಳು ಕೂಡ ಚುನಾವಣೆಯ ತಯಾರಿ ನಡೆಸುತ್ತಿವೆ. ಚುನಾವಣೆ ಸಮಯದಲ್ಲಿ ಹೆಚ್ಚು ಭದ್ರತೆಯ ಅಗತ್ಯವಿದೆ. ಹೀಗಾಗಿ ಇಲಾಖೆ ಕೂಡ ಸಿದ್ದವಾಗಬೇಕಿದೆ. ಇಲಾಖೆಯಲ್ಲಿ ಸಿಬ್ಬಂದಿಯ ಕೊರತೆ ಇದ್ದು, ಈಗಾಗಲೇ 4,000 ಪೊಲೀಸ್ ಕಾನ್ಸ್‌ಟೇಬಲ್ (Police constable) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
Kodagu VA Recruitment 2022: ಗ್ರಾಮಲೆಕ್ಕಿಗರ ಹುದ್ದೆಗೆ ನೇಮಕಾತಿ
ಪ್ರತಿಭಟನೆ, ಎಲೆಕ್ಷನ್, ಹಿಜಾಬ್ ವಿವಾದ ಸೇರಿದಂತೆ ಎಲ್ಲಾ ಕಠಿಣ ಸಮಯದಲ್ಲಿ ಕೆಲಸ ಮಾಡಿದ , ಚುನಾವಣೆ ಹಿನ್ನೆಲೆ ಬೇರೆ ಬೇರೆ ರಾಜ್ಯಗಳಿಗೂ ಹೋಗಿ ಬಂದಿರುವ ಕೆಎಸ್ಆರ್ಪಿ ಸಿಬ್ಬಂದಿ ಸೇರಿದಂತೆ ಎಲ್ಲರ ಕಾರ್ಯವೈಖರಿಯನ್ನು ಹೊಗಳಿದ ಸೂದ್ , ಮುಂದಿನ ವರ್ಷ ಕೂಡ ಇದೇ ರೀತಿ ಸಿದ್ದರಾಗಿ ಎಂದು ಹೇಳಿದರು.
ಪಿಎಸ್ಐ ನೇಮಕಾತಿ ಅಕ್ರಮ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಮೊದಲ ಬಾರಿ 545 ಪಿಎಸ್ಐ ನೇಮಕಾತಿ ಅಕ್ರಮ ಎನ್ನಲಾದ ಪ್ರಕರಣ ಸಂಬಂಧ ಮಾಹಿತಿ ಬಂದ ಬಳಿಕ ಒಂದು ತಿಂಗಳು ವಿಚಾರಣೆ ನಡೆಸಲಾಗಿತ್ತು. ವಿಚಾರ ಗಮನಕ್ಕೆ ಬಂದ ನಂತರ ಸಾಕ್ಷಿ ಸಿಕ್ಕ ತಕ್ಷಣ ಎಫ್ಐಅರ್ ದಾಖಲಿಸಲಾಗಿತ್ತು. ಯಾರು ಆಯ್ಕೆಯಾಗಿದ್ದಾರೆ, ಯಾರು ಆಯ್ಕೆಯಾಗಿಲ್ಲ ಎಲ್ಲದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು.
Udupi ಪರೀಕ್ಷೆ ಬರೆಯಲು ಬಂದ ಹಿಜಾಬ್ ಹೋರಾಟಗಾರ್ತಿಯರ ಹೈಡ್ರಾಮಾ
ಇನ್ನು ಎಪ್ರಿಲ್ 17 ರಂದು ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಸಿದ್ದ ಪ್ರವೀಣ್ ಸೂದ್, 545 ಪಿಎಸ್‌ಐ ಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯನ್ನು ದಿನಾಂಕ 03-10-2021ರಂದು ರಾಜ್ಯಾದ್ಯಂತ 92 ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 54,104 ಅಭ್ಯರ್ಥಿಗಳು ಹಾಜರಾಗಿದ್ದರು. ಫಲಿತಾಂಶ ಪ್ರಕಟಣೆಯ ನಂತರ ಕೆಲವು ವ್ಯತ್ಯಾಸಗಳು ವರದಿಯಾದ ಮೇರೆಗೆ ಆಂತರಿಕ ವಿಚಾರಣೆ ನಡೆಸಲಾಯಿತು. ದಿನಾಂಕ 07-04-2022ರಂದು ಕೆಲವು ದುಷ್ಕೃತ್ಯಗಳ ಬಗ್ಗೆ ಪುರಾವೆಗಳು ಕಂಡು ಬಂದಿದ್ದರಿಂದ, ಗೃಹ ಸಚಿವರು ಸ್ವತಹ ಸಂಪೂರ್ಣ ನೇಮಕಾತಿ ಪ್ರಕ್ರಿಯೆ ಮತ್ತು ಅಪಾದಿತ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ಅದೇಶಿಸಿದರು. ಅದರಂತೆ 09-04-2022ರಂದು ಎಫ್‌ಐಆರ್ ದಾಖಲಿಸಲಾಯಿತು ಎಂದು ಹೇಳಿದ್ದರು.
ತನಿಖೆಯನ್ನು ನಿಷ್ಪಕ್ಷಪಾತವಾಗಿ ಮತ್ತು ಸಮಗ್ರವಾಗಿ ಶೀಘ್ರ ಗತಿಯಲ್ಲಿ ಪೂರ್ಣಗೊಳಿಸಲು ಗೃಹ ಸಚಿವರು ಸಿಐಡಿಗೆ ಆದೇಶಿಸಿದ್ದಾರೆ. ತನಿಖೆ ಪೂರ್ಣಗೊಂಡ ನಂತ್ರ, ಅಂತಿಮ ವರದಿ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಯಾವುದೇ ಅಭ್ಯರ್ಥಿಗಳು ಪರೀಕ್ಷಾ ಮೇಲ್ವಿಚಾರಕರು ಮತ್ತು ಸಹಾಯಕ ಸಿಬ್ಬಂದಿ ಭಾಗಿಯಾಗಿದ್ದಲ್ಲಿ, ಕಾನೂನಿನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಪ್ರಕರಣೆ ಮೂಲಕ ಎಚ್ಚರಿಕೆ ನೀಡಿದ್ದರು.
Chikkamagaluru ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳಿಗೆ ಶಿಕ್ಷಣ ಸಚಿವರ ಭೇಟಿ