ಟಿಇಟಿ ಪರೀಕ್ಷೆ: ಶೇ.90ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಹಾಜರು

Kannadaprabha News   | Asianet News
Published : Aug 23, 2021, 08:14 AM IST
ಟಿಇಟಿ ಪರೀಕ್ಷೆ: ಶೇ.90ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಹಾಜರು

ಸಾರಾಂಶ

*  ರಾಜ್ಯಾದ್ಯಂತ 400ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆದ ಪರೀಕ್ಷೆ *  1,38,455 ಅಭ್ಯರ್ಥಿಗಳು ಹಾಜರು, 11,096 ಮಂದಿ ಗೈರು *  ಕೊರೋನಾ ನಿಯಮ ಪಾಲಿಸಿ ಪರೀಕ್ಷೆ ಬರೆಯಲು ಅವಕಾಶ    

ಬೆಂಗಳೂರು(ಆ.23):  ಭಾನುವಾರ ರಾಜ್ಯಾದ್ಯಂತ 400ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆ-ಟಿಇಟಿ) ಸುಸೂತ್ರವಾಗಿ ನಡೆದಿದೆ. ಪತ್ರಿಕೆ-1ರಲ್ಲಿ ಶೇ.91 ಮತ್ತು ಪತ್ರಿಕೆ-2ರಲ್ಲಿ ಶೇ.93 ಅಭ್ಯರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.

ಪತ್ರಿಕೆ-1ಕ್ಕೆ 1,02,281 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 93,151 ಹಾಜರಾಗಿದ್ದು, 9130 ಗೈರು ಹಾಜರಾಗಿದ್ದಾರೆ. ಪತ್ರಿಕೆ-2ಕ್ಕೆ 1,49,551 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, 1,38,455 ಅಭ್ಯರ್ಥಿಗಳು ಹಾಜರಾಗಿದ್ದು, 11,096 ಗೈರು ಹಾಜರಾಗಿದ್ದಾರೆ. ಎಲ್ಲ ಕೇಂದ್ರಗಳಲ್ಲೂ ಕೊರೋನಾ ನಿಯಮಗಳನ್ನು ಪಾಲಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿಲಾಗಿತ್ತು.

ಶಿಕ್ಷಕರಿಗೆ ಗುಡ್‌ನ್ಯೂಸ್: TET ಸರ್ಟಿಫಿಕೇಟ್‌ಗೆ ಲೈಫ್‌ಟೈಂ ವಾಲಿಡಿಟಿ ಘೋಷಿಸಿದ ಕೇಂದ್ರ

ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ಈ ರೀತಿಯ ಘಟನೆಗಳು ನಡೆದಿಲ್ಲ ಎಂದು ಇಲಾಖೆ ತಿಳಿಸಿದೆ. ಪ್ರಶ್ನೆ ಪತ್ರಿಕೆ ಸುಲಭವಾಗಿದ್ದು, ಗೊಂದಲ ಪ್ರಶ್ನೆ, ಪಠ್ಯಕ್ರಮ ಹೊರತಾದ ಪ್ರಶ್ನೆಗಳು ಇರಲಿಲ್ಲವೆಂದು ಅಭ್ಯರ್ಥಿಗಳು ತಿಳಿಸಿದ್ದಾರೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
 

PREV
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!