ಕರ್ನಾಟಕದ ಸರ್ಕಾರದ ಅಧೀನದಲ್ಲಿರುವ ಮೈಸೂರು ಪೇಯೀಂಟ್ಸ್ ಮತ್ತು ವಾರ್ನಿಷ್ ಲಿಮಿಟೆಡ್ ಖಾಲಿ ಇರುವ ಒಟ್ಟು 5 ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 18 ಕೊನೆಯ ದಿನವಾಗಿದೆ.
ಬೆಂಗಳೂರು(ಮಾ.18): ಕರ್ನಾಟಕದ ಸರ್ಕಾರದ ಅಧೀನದಲ್ಲಿರುವ ಮೈಸೂರು ಪೇಯೀಂಟ್ಸ್ ಮತ್ತು ವಾರ್ನಿಷ್ ಲಿಮಿಟೆಡ್ (Mysore Paints and Varnish Limited) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 5 ವಿವಿಧ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 18 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://mysorepaints.karnataka.gov.in/english ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಒಟ್ಟು 5 ಹುದ್ದೆಗಳು ಮಾಹಿತಿ
ಮುಖ್ಯ ವ್ಯವಸ್ಥಾಪಕರು- ತಾಂತ್ರಿಕ(Chief Manager -Technical) 1 ಹುದ್ದೆ
ಮ್ಯಾನೇಜರ್ - ಖಾತೆ (Manager -Accounts): 1 ಹುದ್ದೆ
ಮಾರಾಟ ಅಧಿಕಾರಿ (Sales Officer): 1 ಹುದ್ದೆ
ಸಹಾಯಕ ಕಾರ್ಯ ನಿರ್ವಾಹಕ (Assistant Works Manager) : 1 ಹುದ್ದೆ
ಹಿರಿಯ ರಸಾಯನಶಾಸ್ತ್ರಜ್ಞ (Senior Chemist) : 1 ಹುದ್ದೆ
ಶೈಕ್ಷಣಿಕ ವಿದ್ಯಾರ್ಹತೆ: ಮೈಸೂರು ಪೇಯೀಂಟ್ಸ್ ಮತ್ತು ವಾರ್ನಿಷ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ಹುದ್ದೆಗೆ ಅನುಸಾರ ವಿದ್ಯಾರ್ಹತೆ ಹೊಂದಿರಬೇಕು.
Bengaluru Udyoga Mela 2022: ಬೆಂಗಳೂರಿನಲ್ಲಿ ಮಾರ್ಚ್ 27ರಂದು ಉದ್ಯೋಗ ಮೇಳ
ವಯೋಮಿತಿ: ಮೈಸೂರು ಪೇಯೀಂಟ್ಸ್ ಮತ್ತು ವಾರ್ನಿಷ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ಹುದ್ದೆಗೆ ಅನುಸಾರ ವಯೋಮಿತಿ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ: ಮೈಸೂರು ಪೇಯೀಂಟ್ಸ್ ಮತ್ತು ವಾರ್ನಿಷ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಬೇಕು.
ವೇತನ: ಮೈಸೂರು ಪೇಯೀಂಟ್ಸ್ ಮತ್ತು ವಾರ್ನಿಷ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೇತನ ಪಡೆದಿರಬೇಕು.
ಮುಖ್ಯ ವ್ಯವಸ್ಥಾಪಕರು-ತಾಂತ್ರಿಕ: ₹56800 ರಿಂದ ₹80100
ಮ್ಯಾನೇಜರ್ - ಖಾತೆ : ₹42000 ರಿಂದ ₹72500
ಮಾರಾಟ ಅಧಿಕಾರಿ: ₹22400 ರಿಂದ ₹53900
ಸಹಾಯಕ ಕಾರ್ಯ ನಿರ್ವಾಹಕ : ₹20900 ರಿಂದ ₹51400
ಹಿರಿಯ ರಸಾಯನಶಾಸ್ತ್ರಜ್ಞ : ₹20900 ರಿಂದ ₹51400
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಮೈಸೂರು ಪೇಯೀಂಟ್ಸ್ ಮತ್ತು ವಾರ್ನಿಷ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಎಪ್ರಿಲ್ 18 ಕ್ಕೂ ಮುನ್ನ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ ಕೊಡಬೇಕು.
Managing Director
Mysore Paints & Varnish Limited
New Banni Mantapa Layout
Mysuru, Karnataka
NIMHANS RECRUITMENT 2022: ಪ್ರಾಜೆಕ್ಟ್ ವಿಜ್ಞಾನಿ ಹುದ್ದೆಗೆ ನಿಮ್ಹಾನ್ಸ್ ಅರ್ಜಿ ಆಹ್ವಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Examinations Authority - KEA) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಸೇರಿ ಒಟ್ಟು 76 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ಅಧಿಕೃತ ವೆಬ್‌ತಾಣ https://cetonline.karnataka.gov.in/kea/ ಗೆ ಭೇಟಿ ನೀಡಲು ಕೋರಲಾಗಿದೆ.
ಒಟ್ಟು 76 ಹುದ್ದೆಗಳ ಮಾಹಿತಿ ಇಂತಿದೆ
ಸಹಾಯಕ ಎಂಜಿನಿಯರ್ಸ್ ಗ್ರೇಡ್-I (ಸಿವಿಲ್): 43 ಹುದ್ದೆಗಳು
ಜೂನಿಯರ್ ಎಂಜಿನಿಯರ್‌ಗಳು (ಸಿವಿಲ್): 18 ಹುದ್ದೆಗಳು
ಸಹಾಯಕರು : 15 ಹುದ್ದೆಗಳು
ಶೈಕ್ಷಣಿಕ ವಿದ್ಯಾಭ್ಯಾಸ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಸಿವಿಲ್ ಇಂಜಿನಿಯರಿಂಗ್ ನಲ್ಲಿ B.Tech, ಯಾವುದೇ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ, ಮಾಡಿರಬೇಕು.