NBT Recruitment 2022: ಬೆಂಗಳೂರಿನಲ್ಲಿರುವ ಬುಕ್ ಟ್ರಸ್ಟ್‌ನಲ್ಲಿ ಜಂಟಿ ನಿರ್ದೇಶಕರ ಹುದ್ದೆ

By Suvarna News  |  First Published Nov 11, 2022, 3:28 PM IST

 ಬೆಂಗಳೂರಿನಲ್ಲಿರುವ ನ್ಯಾಷನಲ್‌ ಬುಕ್‌ ಟ್ರಸ್ಟ್‌ ಆಫ್‌ ಇಂಡಿಯಾ ಸಂಸ್ಥೆಯು ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ನೇಮಕಾತಿ ಪ್ರಕಟಣೆ ಹೊರಡಿಸಿದೆ.  ಅರ್ಜಿ ಸಲ್ಲಿಕೆಗೆ ಡಿಸೆಂಬರ್‌ 28 ರಂದು ಕೊನೆಯ ದಿನವಾಗಿದೆ.


ಬೆಂಗಳೂರು (ನ.11): ಬೆಂಗಳೂರಿನಲ್ಲಿರುವ ನ್ಯಾಷನಲ್‌ ಬುಕ್‌ ಟ್ರಸ್ಟ್‌ ಆಫ್‌ ಇಂಡಿಯಾ ಸಂಸ್ಥೆಯು ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ನೇಮಕಾತಿ ಪ್ರಕಟಣೆಯನ್ನು ಈಗಾಗಲೇ ಹೊರಡಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಇದಕ್ಕೆ ಬೇಕಾದ ಮುಖ್ಯ ವಿವರಗಳನ್ನು ಕೆಳಗಡೆ ನೀಡಲಾಗಿದೆ. ಬುಕ್‌ ಟ್ರಸ್ಟ್‌ ಹೊರಡಿಸಿರುವ ಪ್ರಕಟಣೆಯಲ್ಲಿ ಹುದ್ದೆಗಳ ಸಂಖ್ಯೆ ತಿಳಿಸಲಾಗಿದೆ. ಜಂಟಿ ನಿರ್ದೇಶಕರು ಹಾಗೂ ಉಪನಿರ್ದೇಶಕರ ಹುದ್ದೆಗೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗೆ ಸ್ನಾತಕೋತ್ತರ ಪದವಿ, ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಇರಬೇಕಿದೆ. ಅರ್ಜಿ ಸಲ್ಲಿಸಲು ಗರಿಷ್ಟ56 ವರ್ಷದೊಳಗಿರಬೇಕು. ಅರ್ಜಿ ಜೊತೆಗೆ ಆಧಾರ್‌ಕಾರ್ಡು, ಸದರಿ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ ಪ್ರಮಾಣ ಪತ್ರ, ಇತರೆ ಪ್ರಮುಖ ದಾಖಲೆಗಳ ನಕಲು ಪ್ರತಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಆಫ್‌ಲೈನ್‌ನಲ್ಲಿ ಅವಕಾಶ ಇದೆ. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕವಾಗಿ 67,700 ರುಪಾಯಿಯಿಂದ 2,09,200 ರೂಪಾಯಿ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಡಿಸೆಂಬರ್‌ 28 ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದ್ದು, ಅದಕ್ಕೆ ಸಂಬಂಧಿಸಿದ ಲಿಂಕ್‌ ಇಲ್ಲಿದೆ:  https://www.nbtindia.gov.in/aboutus__66__test.nbt 

ಬಿ.ಇಡಿ ಕೋರ್ಸುಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಲ್ಲಿ 2022-23ನೇ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಲಭ್ಯವಿರುವ ಎರಡು ವರ್ಷಗಳ ಬಿ.ಇಡಿ ಸೀಟುಗಳ ಪ್ರವೇಶಕ್ಕೆ ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ಅರ್ಜಿ ಆಹ್ವಾನಿಸಿದೆ. ಮೂರು ಅಥವಾ ನಾಲ್ಕು ವರ್ಷದ ಪದವಿ ವ್ಯಾಸಂಗದಲ್ಲಿ ಕನಿಷ್ಠ ಶೇ.50ರಷ್ಟುಫಲಿತಾಂಶದೊಂದಿಗೆ ಉತ್ತಿರ್ಣರಾಗಿರುವವರು, ವಿಜ್ಞಾನ/ಸಾಮಾಜಿಕ ವಿಜ್ಞಾನ/ಮಾನವಿಕ ವಿಷಯಗಳ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.50ರಷ್ಟುಫಲಿತಾಂಶ ಪಡೆದಿರುವವರು. ಕನಿಷ್ಠ ಶೇ.55ರಷ್ಟುಅಂಕಗಳೊಂದಿಗೆ ಎಂಜಿನಿಯರಿಂಗ್‌ನಲ್ಲಿ ವಿಜ್ಞಾನ ಮತ್ತು ಗಣಿತಶಾಸ್ತ್ರದಲ್ಲಿ ಪರಿಣಿತಿ ಪಡೆದಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು https://sts.karnataka.gov.in/GPSTRHK/ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ನ.30ರವರೆಗೆ ಕಾಲಾವಕಾಶವಿದೆ. ಅರ್ಜಿ ಸಲ್ಲಿಕೆಗೆ ಪರಿಶಿಷ್ಟಜಾತಿ, ಪರಿಶಿಷ್ಟಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 100 ರು., ಇತರೆ ವರ್ಗಗಳ ಅಭ್ಯರ್ಥಿಗಳಿಗೆ 300 ರು. ನಿಗದಿಪಡಿಸಲಾಗಿದೆ. ವಿಶೇಷ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Tap to resize

Latest Videos

BBMP Recruitment 2022: ಖಾಲಿ ಇರುವ 63 ವೈದ್ಯಕೀಯ ಅಧಿಕಾರಿ ಹುದ್ದೆಗೆ ನೇರ ಸಂದರ್ಶನ

ಸಮುದಾಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ: ಇಲ್ಲಿನ ನಗರಸಭೆ ವತಿಯಿಂದ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ದೀನದಯಾಳ್‌ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ(ಡೇ-ನಲ್ಮ್‌)ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮೂರು ಹುದ್ದೆಗಳನ್ನು ಸೃಜಿಸಿ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಸ್ವ ಸಹಾಯ ಸಂಘಗಳ/ ಒಕ್ಕೂಟದ ಮಹಿಳಾ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.

KARNATAKA CHO RECRUITMENT 2022: ಆರೋಗ್ಯ ಇಲಾಖೆಯ 1,048 ಹುದ್ದೆಗಳ ಭರ್ತಿಗೆ ಅಧಿಸೂಚನೆ

ಅರ್ಜಿ ಸಲ್ಲಿಸಲು ನ. 23 ಕೊನೆಯ ದಿನ. ನಗರಸಭೆ ಕಾರ್ಯಾಲಯದ ಡೇ- ನಲ್ಮ್‌ ಯೋಜನೆ ವಿಭಾಗದಿಂದ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿ ಕಾರ್ಯಾಲಯಕ್ಕೆ ಸಲ್ಲಿಸಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ .8000 ಗೌರವಧನ ಹಾಗೂ .2000 ಟಿಎ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18ರಿಂದ 45 ವರ್ಷದ ವಯೋಮಿತಿ ಹೊಂದಿರಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

click me!