ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ವಿವಿಧ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಜೂ.10 ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು (ಮೇ.27): ಆಕಾಶವಾಣಿಯ (Akashavani ) ಬೆಂಗಳೂರು (Bengaluru) ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ವಿವಿಧ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಶಿವಮೊಗ್ಗ, ಹಾಸನ, ವಿಜಯನಗರ, ದಕ್ಷಿಣಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅರೆಕಾಲಿಕ ವರದಿಗಾರರ (Reporter) ಹುದ್ದೆ ಖಾಲಿ ಎಂದು ಆಲ್ ಇಂಡಿಯಾ ರೇಡಿಯೋದ ಉಪ ನಿರ್ದೇಶಕರಾದ ಟಿ.ಬಿ.ನಂಜುಂಡಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೈಕ್ಷಣಿಕ ವಿದ್ಯಾರ್ಹತೆ: ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗ ಅಧಿಸೂಚನೆ ಹೊರಡಿಸಿರುವ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪಿ.ಜಿ ಡಿಪ್ಲೊಮಾ/ಪತ್ರಿಕೋದ್ಯಮ ಸಮೂಹ ಮಾಧ್ಯಮದಲ್ಲಿ ಪದವಿ ಹಾಗೂ ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಹೊಂದಿರಬೇಕು.
undefined
ವಯೋಮಿತಿ: ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗ ಅಧಿಸೂಚನೆ ಹೊರಡಿಸಿರುವ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 24 ರಿಂದ 45 ವರ್ಷದ ಒಳಗಿರಬೇಕು.
ಮನೆ ಬಾಗಿಲಿಗೆ ಶಾಲೆ ಯೋಜನೆಗೆ BBMP ಚಾಲನೆ
ಇತರ ಅರ್ಹತೆಗಳು: ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗ ಅಧಿಸೂಚನೆ ಹೊರಡಿಸಿರುವ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇತರ ಪ್ರಮುಖ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಅವುಗಳೆಂದರೆ
ಅಭ್ಯರ್ಥಿಗಳು ಜಿಲ್ಲಾ ಮುಖ್ಯ ಕೇಂದ್ರದಲ್ಲಿ ಅಥವಾ ಜಿಲ್ಲೆಯ ಜಿಲ್ಲಾ ಮುಖ್ಯ ಕೇಂದ್ರ ಪುರಸಭೆ ವ್ಯಾಪ್ತಿಯ 10 ಕಿಲೋಮೀಟರ್ ಅಸುಪಾಸಿನ ಪ್ರದೇಶದಲ್ಲಿ ನೆಲೆಸಿರಬೇಕು.
ಕಂಪ್ಯೂಟರ್ ಮತ್ತು ವರ್ಡ್ ಪ್ರಾಸೆಸಿಂಗ್ ತಿಳಿವಳಿಕೆ ಇರಬೇಕು.
ಸುದ್ದಿ ಸಂಗ್ರಹ ಉಪಕರಣಗಳನ್ನು ಹೊಂದಿರಬೇಕು.
ವಿದ್ಯುನ್ಮಾನ ಮಾಧ್ಯಮಕ್ಕೆ ವರದಿಗಾರಿಕೆಯಲ್ಲಿ ಅನುಭವವಿರಬೇಕು.
ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಆದ್ಯತೆ ನೀಡಲಾಗುವುದು.
Tumakuru; ಇಂಗ್ಲಿಷ್ ಓದಲು ಕಷ್ಟವೆಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕ!
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಕಾಶವಾಣಿಯ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗ ಅಧಿಸೂಚನೆ ಹೊರಡಿಸಿರುವ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಅಭ್ಯರ್ಥಿಗಳು ಪೂರ್ಣ ವಿವರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಹಾಗೂ ಅರ್ಜಿ ಶುಲ್ಕದ ಬ್ಯಾಂಕ್ ಡ್ರಾಫ್ಟ್‍ನ್ನು ಒಳಗೊಂಡ ಅರ್ಜಿಗಳನ್ನು, ರಿಜಿಸ್ಟರ್ಡ್ ಅಂಚೆ ಮೂಲಕ ಅಥವಾ ಖುದ್ದಾಗಿ ಜೂ.10ರೊಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ:
The Deputy Director General (E) & HOO)
Attn: Regional News Unit,
All India Radio,
Raj Bhavan Road,
Bengaluru 560 001
ಹೆಚ್ಚಿನ ಮಾಹಿತಿಗೆ ಮೊ.8317466729, 9448159726, 9482169168 ಅಥವಾ ದೂ.080-22356344/22373000 ಗೆ ಸಂಪರ್ಕಿಸಬಹುದು ಎಂದು ಟಿ.ಬಿ.ನಂಜುಂಡಸ್ವಾಮಿ ತಿಳಿಸಿದ್ದಾರೆ.
SSLCಯಲ್ಲಿ ಶೂನ್ಯ ಸಾಧನೆಗೈದ BBMP ಶಾಲೆಗಳ ಶಿಕ್ಷಕರ ವಜಾ!
ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್‌ಗಳಿಗೆ ಅಧಿಸೂಚನೆ: ಭಾರತೀಯ ಸೇನೆಯು (Indian Army) ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್‌ಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. 136ನೇ ಬ್ಯಾಚ್ ನ ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್‌ಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಒಟ್ಟು 40 ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 9, 2022 ಆಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್, joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಹೊರತು ಬೇರೆ ಯಾವುದೇ ಮಾದರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. 136ನೇ ಬ್ಯಾಚ್ ನ ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್ 2023ನೇ ಇಸವಿಯ ಜನವರಿಯಲ್ಲಿ ಪ್ರಾರಂಭವಾಗಲಿದೆ.