ವಿಶೇಷ ನೇಮಕದಡಿ ಆಯುಷ್‌ ವೈದ್ಯರ ನಿಯೋಜನೆ: ಆರೋಗ್ಯ ಸಚಿವ ಸುಧಾಕರ್‌

By Kannadaprabha News  |  First Published Dec 23, 2022, 12:39 PM IST

ಆಯುಷ್‌ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಕಾಯಂಗೊಳಿಸುವುದು ಕಷ್ಟ. ಆದರೆ, ಅವರನ್ನು ವಿಶೇಷ ನೇಮಕಾತಿಯಡಿ ನಿಯೋಜನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.


ಬೆಂಗಳೂರು (ಡಿ.23): ಆಯುಷ್‌ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಕಾಯಂಗೊಳಿಸುವುದು ಕಷ್ಟ. ಆದರೆ, ಅವರನ್ನು ವಿಶೇಷ ನೇಮಕಾತಿಯಡಿ ನಿಯೋಜನೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ ಸದಸ್ಯ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಲೋಪತಿ ವೈದ್ಯರನ್ನು ವಿಶೇಷ ನೇಮಕಾತಿಯಡಿಯಲ್ಲಿ ನಿಯೋಜನೆಗೆ ಕ್ರಮ ಕೈಗೊಂಡಂತೆ ಆಯುಷ್‌ ಇಲಾಖೆಯಲ್ಲಿ ಗುತ್ತಿಗೆ ವೈದ್ಯರ ನಿಯೋಜನೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ವರ್ಷ ಒಂದು ಗ್ರೇಸ್‌ ಅಂಕ ನೀಡಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವೈದ್ಯರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಆಯುಷ್‌ ಇಲಾಖೆಗೆ ಸರ್ಕಾರವು ಹೆಚ್ಚು ಉತ್ತೇಜನ ನೀಡಲಾಗುತ್ತಿದ್ದು, 903 ಹುದ್ದೆಗಳು ಮಂಜೂರಾಗಿವೆ. ಈಪೈಕಿ 694 ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲಾಗಿದೆ. 209 ಹುದ್ದೆಗಳು ಖಾಲಿ ಇವೆ. ಇದರಲ್ಲಿ 44 ಹುದ್ದೆಗಳಿಗೆ ಗುತ್ತಿಗೆ ಆಧಾರ ಮೇಲೆ ವೈದ್ಯರನ್ನು ನಿಯೋಜನೆ ಮಾಡಲಾಗಿದೆ. ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗುವುದು. ಇದಲ್ಲದೇ, ರಾಜ್ಯದಲ್ಲಿ 2011-12ನೇ ಸಾಲಿನಿಂದ ಕೇಂದ್ರ ಪುರಸ್ಕೃತ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿ 2011-12ನೇ ಸಾಲಿನಲ್ಲಿ 109 ವೈದ್ಯರು ಮತ್ತು 2018-19ನೇ ಸಾಲಿನಲ್ಲಿ 22 ವೈದ್ಯರನ್ನು ನೇಮಕ ಮಾಡಲಾಗಿದ್ದು, ಒಟ್ಟು 131 ವೈದ್ಯರು ಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

Latest Videos

undefined

SAI RECRUITMENT 2023: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುತ್ತೂರಿಗೆ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹ: ಹೋರಾಟ ಸಮಿತಿ
ದಕ್ಷಿಣ ಕನ್ನಡ: ಜಿಲ್ಲೆಯಾಗುವತ್ತ ದಾಪುಗಾಲು ಇಡುತ್ತಿರುವ ಪುತ್ತೂರಿಗೆ ಸರ್ಕಾರಿ ಮೆಡಿಲ್‌ ಕಾಲೇಜು ಬೇಕು ಎಂಬುದು ಈ ಭಾಗದ ಜನರ ಬೇಡಿಕೆಯಾಗಿದ್ದು, ಇದೊಂದು ಪಕ್ಷಾತೀತ ಹೋರಾಟವಾಗಿದೆ. ಸರ್ಕಾರದ ವಿರುದ್ಧ ಸಂಘರ್ಷವಲ್ಲ. ಸರ್ಕಾರವನ್ನು ವಿಶ್ವಾಸಕ್ಕೆ ಪಡೆದುಕೊಂಡು ಕಾಲೇಜು ನಿರ್ಮಾಣದ ಅನಿವಾರ್ಯತೆಯ ಬಗ್ಗೆ ಮನದಟ್ಟು ಮಾಡುವುದು ಹಾಗೂ ಹೊಣೆಗಾರಿಕೆಯನ್ನು ನೆನಪಿಸುವುದು ನಮ್ಮ ಉದ್ದೇಶವಾಗಿದೆ ಎಂದು ಮೆಡಿಕಲ್‌ ಕಾಲೇಜು ಹೋರಾಟ ಸಮಿತಿ ಸಂಚಾಲಕ ಲಕ್ಷ್ಮೇ ಗಬ್ಲಡ್ಕ ಮತ್ತು ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ ತಿಳಿಸಿದ್ದಾರೆ.

2.53 ಲಕ್ಷ ಸರ್ಕಾರಿ ಹುದ್ದೆ ಖಾಲಿ, 1 ಲಕ್ಷ ಶೀಘ್ರ ಭರ್ತಿ: ಸಿಎಂ ಬೊಮ್ಮಾಯಿ

ಅವರು ಗುರುವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸರ್ಕಾರಿ ಮೆಡಿಕಲ್‌ ಕಾಲೇಜು ನಿರ್ಮಾಣಕ್ಕಾಗಿ ಸರ್ಕಾರ ಈಗಾಗಲೇ ಪುತ್ತೂರಿನಲ್ಲಿ 40 ಎಕರೆ ಜಾಗ ಮೀಸಲಿಟ್ಟಿದೆ. ಈ ಜಾಗಕ್ಕೆ ಬೇಲಿ ನಿರ್ಮಿಸಿ, ನಾಮಫಲಕ ಅಳವಡಿಸಬೇಕು. ಅನ್ಯ ಕಾರ್ಯಕ್ಕೆ ಈ ಜಾಗವನ್ನು ಬಳಸಿಕೊಳ್ಳಬಾರದು. ಇದಕ್ಕೆ ಪೂರಕವಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಯನ್ನು 300 ಬೆಡ್‌ಗೆ ಮೇಲ್ದರ್ಜೆಗೇರಿಸಿ, ವೈದ್ಯರ ನೇಮಕಾರಿ ಸೇರಿದಂತೆ ಪೂರ್ಣ ವ್ಯವಸ್ಥೆ ಕಲ್ಪಿಸಬೇಕು. ಈ ಬಗ್ಗೆ ಅಧಿವೇಶನದಲ್ಲಿ ಶಾಸಕರು ಪ್ರಸ್ತಾಪಿಸುವಂತೆ ನಮ್ಮ ನಿಯೋಗವು ಬೆಳಗಾವಿಗೆ ಹೋಗಿ ವಿಧಾನಸಭೆ ಮತ್ತು ಪರಿಷತ್‌ನ ಶಾಸಕರೊಂದಿಗೆ ಮಾತುಕತೆ ನಡೆಸಲಾಗುವುದು ಎಂದ ಅವರು, ಪುತ್ತೂರಿನಲ್ಲಿ ಪೂರ್ಣ ಪ್ರಮಾಣದ ಸರ್ಕಾರಿ ಮೆಡಿಕಲ್‌ ಕಾಲೇಜು ನಿರ್ಮಾಣವಾಗಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಅವರ ಬೆಂಬಲಕ್ಕಾಗಿ ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಹೋರಾಟ ಸಮಿತಿಯ ಉಪಾಧ್ಯಕ್ಷ ಝೇವಿಯರ್‌ ಡಿಸೋಜ, ರೂಪೇಶ್‌ ರೈ ಅಲಿಮಾರ್‌ ಮತ್ತು ಡಾ. ವಿಶುಕುಮಾರ್‌ ಇದ್ದರು.

click me!