ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

Published : Sep 12, 2020, 10:08 PM IST
ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಸಾರಾಂಶ

ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ  ಮುಖ್ಯ ಮಾಹಿತಿ ಇಲ್ಲಿದೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ಹೊರಡಿಸಿದೆ.

ಬೆಂಗಳುರು, (ಸೆ.12): ಇದೇ ಸೆ.20 ರಂದು ಪೊಲೀಸ್‌ ಕಾನ್ ಸ್ಟೇಬಲ್ ಹುದ್ದೆಗೆ  ನಗರದ 69 ಪರೀಕ್ಷಾ ಕೇಂದ್ರದಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.

ಸಿವಿಲ್ ಪೊಲೀಸ್ ಕಾನ್‍ಟೇಬಲ್ ಪುರುಷ ಮತ್ತು ಮಹಿಳಾ ಹಾಗೂ ಸಿವಿಲ್ ಪೊಲೀಸ್ ಕಾನ್‍ಸ್ಟೆಬಲ್ ಪುರುಷ ಮತ್ತು ಮಹಿಳಾ)( ಕಲ್ಯಾಣ ಕರ್ನಾಟಕ) ಹುದ್ದೆಗಳ ಭರ್ತಿಯ ಸಂಬಂಧ ಸುಮಾರು 37,640 ಅಭ್ಯರ್ಥಿಗಳಿಗೆ ಸೆ.20ರಂದು ಪರೀಕ್ಷೆ ನಡೆಯಲಿದೆ. 

ಅಂಚೆ ಇಲಾಖೆಯಲ್ಲಿ ನೇಮಕಾತಿ: ವಿದ್ಯಾರ್ಹತೆ 10ನೇ ತರಗತಿ

ನಗರದ 69 ಪರೀಕ್ಷಾ ಕೇಂದ್ರದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಆಯುಕ್ತರ ಕಚೇರಿ ಪಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.ksp.gov.in ವೆಬ್ ಸೈಟ್ ವೀಕ್ಷಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಕರೆಪತ್ರವನ್ನು ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ.

PREV
click me!

Recommended Stories

ಹಂತ ಹಂತವಾಗಿ 1.88 ಲಕ್ಷ ಸರ್ಕಾರಿ ಹುದ್ದೆ ಭರ್ತಿ : ಸಿದ್ದರಾಮಯ್ಯ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!