ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಯ ಕೀ-ಆನ್ಸರ್‌ ಪ್ರಕಟ

Published : Sep 24, 2020, 04:33 PM ISTUpdated : Sep 24, 2020, 04:36 PM IST
ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಯ ಕೀ-ಆನ್ಸರ್‌ ಪ್ರಕಟ

ಸಾರಾಂಶ

2007 ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗೆ ಮೊನ್ನೆ ಪರೀಕ್ಷೆ ನಡೆಸಲಾಗಿತ್ತು. ಇದೀಗ ಅದರ ಕೀ ಉತ್ತರನ್ನು ಸಹ ಪ್ರಕಟಿಸಲಾಗಿದೆ.

ಬೆಂಗಳೂರು, (ಸೆ.24): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗೆ ನಡೆಸಿದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. 

2007 ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ (ಪುರುಷ ಮತ್ತು ಮಹಿಳೆ) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಸೆಪ್ಟೆಂಬರ್ 20,2020 ರಂದು ರಾಜ್ಯದ ಹಲವು ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಿತ್ತು. ಇದೀಗ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಿದೆ.

ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾತ್ಕಾಲಿಕ ಕೀ ಉತ್ತರಕ್ಕೆ ಸಂಬಂಧಿಸಿದಂತೆ ಯಾವುದೇ ಉತ್ತರಗಳಿಗೆ ಆಕ್ಷೇಪಣೆ ಇದ್ದಲ್ಲಿ ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ ವಿಭಾಗ, ಕಾರ್ಲ್ಟನ್ ಹೌಸ್, ಪ್ಯಾಲೇಸ್ ರಸ್ತೆ, ಬೆಂಗಳೂರು-560001 ವಿಳಾಸಕ್ಕೆ ಅಕ್ಟೋಬರ್ 1,2020ರೊಳಗೆ ಆಧಾರ ಸಹಿತ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳು ಪರೀಕ್ಷಾ ತಾತ್ಕಾಲಿಕ ಕೀ-ಉತ್ತರವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

1999 ರಿಂದ ಶುರುವಾದ ನಿರಂತರ ಪ್ರಯತ್ನ, 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕನಾಗಿ ನೇಮಕ
ಲೋಕಾಯುಕ್ತ ದಾಳಿ: 8 ಸರ್ಕಾರಿ ಅಧಿಕಾರಿಗಳ ಮನೇಲಿ ₹23 ಕೋಟಿ ಅಕ್ರಮ ಆಸ್ತಿ ಪತ್ತೆ; ಯಾರ ಬಳಿ ಎಷ್ಟಿದೆ ಗೊತ್ತಾ?