Karnataka Teacher Recruitment: 15000 ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಇಂದು ಸಂಜೆ ಪ್ರಕಟ

By Gowthami KFirst Published Nov 18, 2022, 4:09 PM IST
Highlights

ಬಹುನಿರೀಕ್ಷಿತ 15 ಸಾವಿರ ಸರ್ಕಾರಿ ಶಾಲಾ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ತಾತ್ಕಾಲಿಕ ಆಯ್ಕೆಪಟ್ಟಿಯು ಶುಕ್ರವಾರ ಪ್ರಕಟವಾಗಲಿದೆ. 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ಬಿಡುಗಡೆ ಮಾಡಲಿದ್ದಾರೆ.

ಬೆಂಗಳೂರು (ನ.18): ಬಹುನಿರೀಕ್ಷಿತ 15 ಸಾವಿರ ಸರ್ಕಾರಿ ಶಾಲಾ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ತಾತ್ಕಾಲಿಕ ಆಯ್ಕೆಪಟ್ಟಿಯು ಶುಕ್ರವಾರ ಪ್ರಕಟವಾಗಲಿದೆ. 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ಬಿಡುಗಡೆ ಮಾಡಲಿದ್ದಾರೆ. 6ರಿಂದ 8ನೇ ತರಗತಿಗೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತ ತಲುಪುತ್ತಿದೆ. 1:1 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಸಿದ್ಧಪಡಿಸಿದ್ದು, ಇದನ್ನು ಶುಕ್ರವಾರ ಸಂಜೆ 5.30ಕ್ಕೆ ಕೆ.ಆರ್‌.ವೃತ್ತದ ಬಳಿಕ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಪಟ್ಟಿಗೆ ಆಕ್ಷೇಪಣೆ ಸ್ವೀಕರಿಸಿದ ಬಳಿಕ ಅಂತಿಮ ಆಯ್ಕೆಪಟ್ಟಿಪ್ರಕಟಿಸಿ ನಂತರ ಅಂತಿಮಗೊಂಡ ಶಿಕ್ಷಕರ ಸ್ಥಳ ನಿಯುಕ್ತಿಗೆ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

KEA RECRUITMENT 2022: ಪಶುವೈದ್ಯ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಿದ ಕೆಇಎ

19ರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ಬಳ್ಳಾರಿ:ಕರ್ನಾಟಕ ಸರ್ಕಾರವು ಒಂದು ಲಕ್ಷಕ್ಕೂ ಅಧಿಕ ಉದ್ಯೋಗ ಭರ್ತಿಗೆ ಸಿದ್ಧತೆ ನಡೆಸುತ್ತಿರುವುದರಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆಎಎಸ್‌ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ನೀಡಲು ನಿರ್ಧರಿಸಿದೆ. ಆಸಕ್ತರು ನ. 19ರೊಳಗಾಗಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಕಚೇರಿ ದಿನಗಳಂದು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ 0821-2515944ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಡಾ.ಎ.ಖಾದರ್‌ ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುಬಿಡಿಟಿ ಬಗ್ಗೆ ವಿಟಿಯು ಅಸಡ್ಡೆ ವಿರುದ್ಧ ಎಬಿವಿಪಿ ಪ್ರತಿಭಟನೆ

ನಾಳೆ, ನಾಡಿದ್ದು ಡಿಸಿಇಟಿ ಮತ್ತು ಪಿಜಿಸಿಇಟಿ ಪರೀಕ್ಷೆ : ನಿಷೇಧಾಜ್ಞೆ ಜಾರಿಗೊಳಿಸಿದ ಆದೇಶ
ವಿಜಯಪುರ: ನಗರದ 2 ಪರೀಕ್ಷಾ ಕೇಂದ್ರಗಳಲ್ಲಿ ಡಿಸಿಇಟಿ ಮತ್ತು ಪಿಜಿಸಿಇಟಿ ಪರೀಕ್ಷೆಗಳು ನ.19 ಹಾಗೂ 20 ರಂದು ವಿಜಯಪುರ ಜರುಗಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಈ ಪರೀಕ್ಷಾ ಕೇಂದ್ರದ 200 ಪ್ರದೇಶದ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ದಿನದಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ. ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರು ಮೊಬೈಲ್‌ ಫೋನನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಯ ಮುಖ್ಯ ಅಧೀಕ್ಷಕರಿಗೆ ಕ್ಯಾಮೆರಾ ಹೊಂದಿರದ ಸಾಮಾನ್ಯ ಮೊಬೈಲ್‌ ಬಳಸಲು ಅನುಮತಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್‌ ಅಂಗಡಿಗಳು, ಕಂಪ್ಯೂಟರ್‌ ಸೆಂಟರ್‌ಗಳು, ಇಂಟರನೆಟ್‌ ಕೆಫೆಗಳು, ಸೈಬರ್‌ ಕೆಫೆಗಳು, ಕೋಚಿಂಗ್‌ ಕೇಂದ್ರಗಳು ಈ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.

click me!