ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳ ಇನ್ನಷ್ಟು ಮಾಹಿತಿ ತಿಳಿಯಲು ಮುಂದೆ ಓದಿ.
ರಾಯಚೂರು, [ನ.01]: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
13 ಬೋಧಕ ಹುದ್ದೆಗಳನ್ನು ಭರ್ತಿ ಪ್ರಕಟಣೆ ಹೊರಡಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ ನವೆಂಬರ್ 23,2019 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಕರ್ನಾಟಕ ಪೊಲೀಸ್ ನೇಮಕಾತಿ: ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು PhD ಪೂರ್ಣಗೊಳಿಸಿರಬೇಕು.
ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಅರ್ಹರು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು 2ಎ,2ಬಿ,3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿದೆ.
ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವೇತನ ಶ್ರೇಣಿ: 57,700 ರಿಂದ 1,82,400 ರೂ ತಿಂಗಳಿಗೆ.
ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 1000 ರೂ ಮತ್ತು ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 500 ರೂ ನಿಗದಿಪಡಿಲಾಗಿದ್ದು, ನವೆಂಬರ್ 22,2019 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ