ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗೆ ನೇಮಕಾತಿ

By Suvarna NewsFirst Published Mar 9, 2020, 3:55 PM IST
Highlights

ರಾಯಚೂರು  ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಹುದ್ದೆಗಳ ಬಗೆಗಿನ ವಿವರ ಈ ಕೆಳಗಿನಂತಿದೆ ನೋಡಿ.

ರಾಯಚೂರು, (ಮಾ.09): ರಾಯಚೂರು ಜಿಲ್ಲಾ ಪ್ರಧಾನ  ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ 24 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

12  ಶೀಘ್ರಲಿಪಿಗಾರ, 6 ಬೆರಳಚ್ಚುಗಾರರು,  2 ಬೆರಳಚ್ಚು ನಕಲುಗಾರರು, 4  ಆದೇಶ ಜಾರಿಕಾರ ಒಟ್ಟು   24 ಹುದ್ದೆಗಳು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ: ಅರ್ಜಿ ಹಾಕಿ

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 12,2020ರೊಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು. 

* ಶೀಘ್ರಲಿಪಿಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಕನ್ನಡ ಮತ್ತು ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು. 

ಗ್ರಾಮ ಲೆಕ್ಕಿಗರ ನೇರ ನೇಮಕಾತಿ 2020: ಅರ್ಜಿ ಹಾಕಿ

* ಬೆರಳಚ್ಚುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ಪೂರ್ಣಗೊಳಿಸಿರಬೇಕು

* ಬೆರಳಚ್ಚುಗಾರ ನಕಲುಗಾರ ಹುದ್ದೆಗಳಿಗೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ ಹೊರಡಿಸಿದ ದಿನಾಂಕದ ಅನ್ವಯ ಕನಿಷ್ಠ 18 ವರ್ಷ ವಯಸ್ಸು  ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ-2A,ಪ್ರವರ್ಗ-2B,ಪ್ರವರ್ಗ-3A ಮತ್ತು ಪ್ರವರ್ಗ 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

ಅರ್ಜಿ ಸಲ್ಲಿಕೆ ವಿವರ: ರಾಯಚೂರು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/raichur-onlinerecruitment ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಚ್ 09ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!