RDPR Karnataka Recruitment 2022: ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ

By Suvarna NewsFirst Published Dec 17, 2021, 4:42 PM IST
Highlights
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಾಬ್ ನೋಟಿಫಿಕೇಶನ್‌
  • 35 ಜಿಲ್ಲಾ ಮತ್ತು ತಾಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆ ಭರ್ತಿಗೆ ಕರೆ
  • ಜನವರಿ 5,2022ರೊಳಗೆ ಅರ್ಜಿಯನ್ನು ಸಲ್ಲಿಸಲು ಸೂಚನೆ

ಬೆಂಗಳೂರು(ಡಿ17): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ( Rural Development and Panchayat Raj ) ಮಹಾತ್ಮಾಗಾಂಧಿ ರಾಷ್ಟ್ರೀಯ ಯೋಜನೆ (MGNREGA) ನರೇಗಾದ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ 35 ಜಿಲ್ಲಾ ಮತ್ತು ತಾಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಅಗತ್ಯ ಮಾಹಿತಿಯನ್ನು ತುಂಬಿ. ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಅರ್ಜಿಯನ್ನು ಜನವರಿ 5,2022ರೊಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ. ಅರ್ಜಿಯನ್ನು ತಲುಪಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ಕಡ್ಡಾಯವಾಗಿ ಬರೆದಿರಬೇಕು.

ಜನವರಿ 5ರ ನಂತರ ಅಥವಾ ಅಪೂರ್ಣ ಮಾಹಿತಿಯುಳ್ಳ ಅರ್ಜಿಯನ್ನು ಯಾವುದೇ ಕಾರಣಕ್ಕೆ ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.  ಹೆಚ್ಚಿನ ಮಾಹಿತಿಗೆ  ಇಲಾಖೆಯ ಅಧಿಕೃತ ವೆಬ್ ಸೈಟ್ www.rdpr.karnataka.gov.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. 

ವಿದ್ಯಾರ್ಹತೆ , ವಯೋಮಿತಿ ಮತ್ತು ಅನುಭವ: ಆರ್‌ಡಿಪಿಆರ್ ಯಲ್ಲಿ ಖಾಲಿ ಇರುವ ಜಿಲ್ಲಾ ಮತ್ತು ತಾಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಜೊತೆಗೆ ಸೇವಾನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 

RDPR Recruitment 2022: ಪಂಚಾಯತ್ ರಾಜ್ ಇಲಾಖೆಯಲ್ಲಿನ ಒಂಬುಡ್ಸ್ ಮನ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ವೇತನ: ಆರ್‌ಡಿಪಿಆರ್ ನೇಮಕಾತಿಯ ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 24,000 ರೂ ಮತ್ತು ತಾಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000 ರೂ ವೇತನ ನಿಗದಿಯಾಗಿದೆ.

ಆಯ್ಕೆ ಪ್ರಕ್ರಿಯೆ: ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಮತ್ತು ತಾಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಭಾರತೀಯ ಮೂಲದ ಜಗದೀಪ್‌ಗೆ QUANTUMSCAPE ಭರ್ಜರಿ ಆಫರ್, ಹಲವರ ವಿರೋಧ

ವಯೋಮಿತಿ ಮತ್ತು ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಮಾತ್ರವಲ್ಲ ಯಾವುದೇ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು  ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ ಹೇಗೆ?: ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಇಲಾಖೆಯ ಅಧಿಕೃತ ವೆಬ್‌ಸೈಟ್ rdpr.karnataka.gov.in ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ. ಮಾಹಿತಿಯನ್ನು ತುಂಬಿಕೊಳ್ಳಿ ಬಳಿಕ ಅಗತ್ಯ ದಾಖಲೆಯೊಂದಿಗೆ ಈ ಕೆಳಗಿರುವ ವಿಳಾಸಕ್ಕೆ ಕಳುಹಿಸಿ. 
ನಿರ್ದೇಶಕರು,
ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ,
ಮೊದಲನೇ ಮಹಡಿ, ಅಭಯ ಕಾಂಪ್ಲೆಕ್ಸ್,
ಕೊಳಗೇರಿ ಅಭಿವೃದ್ಧಿ ಮಂಡಳಿ ಕಟ್ಟಡ,
ನಂ.55 ರಿಸಲ್ದಾರ್ ರಸ್ತೆ,
ಶೇ‍ಷಾದ್ರಿಪುರಂ,
ಬೆಂಗಳೂರು-560 020.

BMRCL Recruitment 2022: ನಮ್ಮ ಮೆಟ್ರೋದಲ್ಲಿ ಕೆಲಸ ಖಾಲಿ ಇದೆ, ಇಂದೇ ಅರ್ಜಿ ಹಾಕಿ

ಪಂಚಾಯತ್ ರಾಜ್ ಇಲಾಖೆಯಲ್ಲಿನ ಒಂಬುಡ್ಸ್ ಮನ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ: ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಬೆಳಗಾವಿ, ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ, ಶಿವಮೊಗ್ಗ, ಚಿತ್ರದುರ್ಗ, ಬೀದರ್, ಹಾಸನ, ಕೊಡಗು, ಕೊಪ್ಪಳ ಮತ್ತು ವಿಜಯಪುರದಲ್ಲಿ ಖಾಲಿ ಇರುವಂತ ಒಂಬುಡ್ಸ್ ಮನ್ ಹುದ್ದೆಗಳ ಭರ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.  ಆಸಕ್ತಿ ಇರೋ ವ್ಯಕ್ತಿಗಳು www.rdpr.karnataka.gov.in ಜಾಲತಾಣದ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 080 - 22342163 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯುವಂತೆ ತಿಳಿಸಿದೆ. ಸಂಬಂಧಪಟ್ಟಂತ ದಾಖಲೆಗಳೊಂದಿಗೆ ಅರ್ಹ ಅಭ್ಯರ್ಥಿಗಳು ಜನವರಿ 14, 2022ರೊಳಗೆ ಆಯುಕ್ತರು, ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂ.1234, ಕೆ ಎಸ್ ಐ ಐ ಸಿ ಕಟ್ಟಡ, ಐಟಿ ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ, ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು-560044ಗೆ ಅರ್ಜಿಯನ್ನು ಕಳುಹಿಸುವಂತೆ ತಿಳಿಸಿದೆ.  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 66 ವರ್ಷ ವಯೋಮಿತಿಯೊಳಗಿರಬೇಕು. 

click me!