ಶೀಘ್ರ 10,000 ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

By Kannadaprabha News  |  First Published Nov 15, 2024, 8:51 AM IST

ರಾಜ್ಯದ ಸರ್ಕಾರ ಶಾಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ


ಬೆಂಗಳೂರು(ನ.15):  ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪ್ರತಿಯಾಗಿ ಸದ್ಯ ಮೊದಲ ಹಂತವಾಗಿ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 

ಮಾಜಿ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರ 135ನೇ ಜಯಂತಿ ಹಾಗೂ ಮಕ್ಕಳ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಸರ್ಕಾರಿ ಶಾಲಾ ಮಕ್ಕಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು. 

Tap to resize

Latest Videos

undefined

ಪಿಯು ಪಾಸಾದವರಿಗೆ ಕರ್ನಾಟಕ ಲೋಕಾಯುಕ್ತದಲ್ಲಿ ಉದ್ಯೋಗ; ತಿಂಗಳಿಗೆ 67 ಸಾವಿರ ಸಂಬಳ

ಜೋಗುಪಾಳ್ಯದ ಬಾಲಕರ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿ ರಿಚರ್ಡ್ ಕೇಳಿದ ಪ್ರಶ್ನೆಗೆ ಮೊದಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಉತ್ತರ ನೀಡಿದ ಬಳಿಕ, ಸಚಿವ ಮಧು ಬಂಗಾರಪ್ಪ ಕೂಡ ವಿವರಣೆ ನೀಡಿದರು. 
'ರಾಜ್ಯದ ಸರ್ಕಾರ ಶಾಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಶಿಕ್ಷಕರ ಅಭಾವವಿದ್ದು, ಈ ಸಂಬಂಧ 13,000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ 10,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದೇವೆ' ಎಂದು ತಿಳಿಸಿದರು. 

'ಸರ್ಕಾರಿ ಶಾಲೆಯಲ್ಲಿ ಅತ್ಯುತ್ತಮ ಶಿಕ್ಷಕರಿದ್ದಾರೆ. ಎಲ್ಲಾ ಶಿಕ್ಷಕರು ಮೆರಿಟ್ ಆಧಾರದಲ್ಲಿ ನೇಮಕಗೊಂಡವರು. ಹೀಗಾಗಿ ನಮ್ಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಸಾಧನೆ ಮಾಡುವವರೆಲ್ಲಾ ಸರ್ಕಾರಿ ಶಾಲೆಯ ಮಕ್ಕಳೇ ಆಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವ, ಶಿಕ್ಷಕರ ಕೊರತೆ ಇರುವುದು ನಿಜ. ಅದನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು.

click me!