ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಇನ್ನೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗಕ್ಕೆ ವಿದೇಶಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವಿಧಾನಪರಿಷತ್(ಡಿ.30): ಈ ವರ್ಷ 15 ಸಾವಿರ ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗಿದೆ. ಇನ್ನೂ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಪರಿಷತ್‌ನಲ್ಲಿ ಪೂರಕ ಅಂದಾಜು ಮೇಲಿನ ಚರ್ಚೆ ವೇಳೆ ಉತ್ತರಿಸಿದ ಅವರು, ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಇನ್ನೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಉನ್ನತ ವ್ಯಾಸಂಗಕ್ಕೆ ವಿದೇಶಕ್ಕೆ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು. ಕಾಲೇಜುಗಳಲ್ಲಿ ಉಪನ್ಯಾಸಕರ, ಸಹಪ್ರಾಧ್ಯಾಪಕರ, ಪ್ರಾಧ್ಯಾಪಕರ ಬೋಧನಾ ಕಾರ್ಯ ಶೈಲಿಯನ್ನು ಬದಲಿಸಲಾಗುವುದು. ಈ ಬಗ್ಗೆ ಮುಂದಿನ ಬಜೆಟ್‌ನಲ್ಲಿ ಘೋಷಿಸುವುದಾಗಿ ತಿಳಿಸಿದರು.
KPSC RECRUITMENT: 330 ಕಿರಿಯ ಎಂಜಿನಿಯರ್ ಅರ್ಹತಾಪಟ್ಟಿ ಶೀಘ್ರ ಬಿಡುಗಡೆ
ನೆರೆ ಸಂತ್ರಸ್ತರಿಗೆ ಶೀಘ್ರ ಪರಿಹಾರ:
ತಾಂತ್ರಿಕ ದೋಷ ಹಾಗೂ ದಾಖಲೆಗಳ ಸಮಸ್ಯೆಯನ್ನು ಸರಿಪಡಿಸಿ ಶೀಘ್ರವೇ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು. ಈ ಹಿಂದೆ ನಮ್ಮ ರಾಜ್ಯದಲ್ಲಿ ಪ್ರವಾಹದಿಂದ ಬೆಳೆ ಹಾನಿಯಾದರೆ, ಒಂದು ವರ್ಷದ ಬಳಿಕ ರೈತರಿಗೆ ಪರಿಹಾರ ಬರುತ್ತಿತ್ತು. ನಮ್ಮ ಸರ್ಕಾರದ ಬಂದ ಮೇಲೆ ಕೇವಲ ಒಂದು ತಿಂಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಿದ್ದೇವೆ. ಕೇಂದ್ರ ಸರ್ಕಾರ ನೀಡುವ ಪರಿಹಾರದ ಜತೆಗೆ ರಾಜ್ಯ ಸರ್ಕಾರವು ದುಪ್ಪಟ್ಟು ಹಣ ಸೇರಿ ಪರಿಹಾರ ನೀಡಿದೆ. ಕಳೆದ ವರ್ಷ ಸುಮಾರು 14 ಸಾವಿರ ಕೋಟಿ ರು. ನೆರೆ ಪರಿಹಾರ ನೀಡಲಾಗಿದೆ. ಕೆಲವು ತಾಂತ್ರಿಕ ಸಮಸ್ಯೆಗಳಿಂದ ಕೆಲವರಿಗೆ ಪರಿಹಾರ ತಲುಪುವುದು ವಿಳಂಬವಾಗಿರಬಹುದು. ಕೂಡಲೇ ಸಮಸ್ಯೆಗಳನ್ನು ಸರಿಪಡಿಸಿ ಅವರಿಗೂ ಪರಿಹಾರ ನೀಡುವುದಾಗಿ ಹೇಳಿದರು.