ಉತ್ತರ ಕರ್ನಾಟಕ ಮತ್ತು ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಮನವಿ ಸ್ವೀಕರಿಸಿದ್ದೇನೆ. ಪ್ರತಿಭಟನಾಕಾರರು ಕೊಟ್ಟಿರುವ ಮನವಿಗಳನ್ನು ಸಿಎಂಗೆ ಕೊಡುತ್ತೇನೆ. ಸರ್ಕಾರ ಕೂಡ ಅವರಿಗೆ ಸ್ಪಂದಿಸುತ್ತದೆ ಎಂದು ಭರವಸೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಳಗಾವಿ(ಡಿ.06): ನಾನು ಸಾರಿಗೆ ಮಂತ್ರಿ ಆಗಿದ್ದಾಗ ನೇಮಕಾತಿ ಆಗಿದ್ದೇ ಕೊನೆ. ಕಳೆದ ಏಳು ವರ್ಷಗಳಲ್ಲಿ 13,888 ಸಿಬ್ಬಂದಿ ನಿವೃತ್ತಿ ಹೊಂದಿದ್ದಾರೆ. ಈಗ 9 ಸಾವಿರ ಜನರನ್ನು ಹೊಸದಾಗಿ ನೇಮಕ ಮಾಡಿಕೊಳ್ಳುತ್ತಿದ್ದು, ಇದಕ್ಕೆ ಅನುಮತಿ ಸಿಕ್ಕಿದೆ. ಜತೆಗೆ 5500 ಹೊಸ ಬಸ್ ಖರೀದಿ ಮಾಡಲಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ನಡೆದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಮತ್ತು ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಮನವಿ ಸ್ವೀಕರಿಸಿದ್ದೇನೆ. ಪ್ರತಿಭಟನಾಕಾರರು ಕೊಟ್ಟಿರುವ ಮನವಿಗಳನ್ನು ಸಿಎಂಗೆ ಕೊಡುತ್ತೇನೆ. ಸರ್ಕಾರ ಕೂಡ ಅವರಿಗೆ ಸ್ಪಂದಿಸುತ್ತದೆ ಎಂದು ಭರವಸೆ ನೀಡಿದರು.
ರಾಜ್ಯದ 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡಿದ ಸರ್ಕಾರ: ಶೀಘ್ರ ದಿನಾಂಕ ಪ್ರಕಟ
ಶಕ್ತಿ ಯೋಜನೆ ಜಾರಿ ಪರಿಣಾಮ ಶಾಲಾ ಮಕ್ಕಳಿಗೆ ಬಸ್ ಸಮಸ್ಯೆ ಆಗುತ್ತಿರುವ ಬಗ್ಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಕಾರ್ಯಕ್ರಮ ಆದಮೇಲೆ ಜನರು ಸರ್ಕಾರಿ ಬಸ್ಗಳಲ್ಲಿ ಹೆಚ್ಚು ಓಡಾಡುತ್ತಿದ್ದಾರೆ. ಮೊದಲು 85 ಲಕ್ಷ ಜನರು ಓಡಾಡುತ್ತಿದ್ದರು. ಈಗ 1 ಕೋಟಿ ಜನರು ಓಡಾಟ ಮಾಡುತ್ತಿದ್ದಾರೆ. ಶಾಲೆಗೆ ಹೋಗುವಾಗ, ಬರುವಾಗ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಮಹಿಳೆಯರ ಓಡಾಟ ಕೂಡ ಹೆಚ್ಚಾಗಿದೆ. ಇದಕ್ಕೆಲ್ಲಾ ಪ್ರಮುಖ ಕಾರಣ ಕಳೆದ ನಾಲ್ಕು ವರ್ಷದಲ್ಲಿ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ. ಹೊಸ ಬಸ್ ತಗೊಂಡು ಹಳೆಯ ಬಸ್ ಸ್ಕ್ಯ್ರಾಪ್ ಮಾಡಬೇಕು. ಹೀಗೆ ಆಗಿದ್ರೆ ಏನು ಸಮಸ್ಯೆ ಆಗುತ್ತಿರಲಿಲ್ಲ ಎಂದು ತಿಳಿಸಿದರು.