* ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
* ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಮೆರಿಟ್ ಆಧಾರದ ಮೇಲೆ ನೇಮಕ
* ಯುಜಿಸಿ ವೇತನ ಶ್ರೇಣಿ 57700 ರು.- 1,82,400 ರು.
ಬೆಂಗಳೂರು(ಆ.29): ರಾಜ್ಯದ ಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.
undefined
2015ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿಗಳಿಲ್ಲದೆ ಭರ್ತಿಯಾಗದೆ ಉಳಿದಿದ್ದ 145 ಹುದ್ದೆಗಳು, ಪ್ರಸ್ತುತ ಭರ್ತಿ ಮಾಡಬೇಕಿರುವ 1097 ಹುದ್ದೆಗಳು ಸೇರಿ ಒಟ್ಟು 1242 ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ಆಯ್ಕೆ ಪ್ರಾಧಿಕಾರವನ್ನಾಗಿ ಆಯ್ಕೆ ಮಾಡಲಾಗಿದೆ.
ನಾವಲ್ ಶಿಪ್ ರಿಪೇರ್ ಯಾರ್ಡ್ ನೇಮಕಾತಿ: 230 ಅಪ್ರೆಂಟಿಸ್‌ಗೆ ಅರ್ಜಿ ಆಹ್ವಾನ
ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಮೆರಿಟ್ ಆಧಾರದ ಮೇಲೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಸೂಚಿಸಿದೆ. ಯುಜಿಸಿ ವೇತನ ಶ್ರೇಣಿ 57700 ರು.- 1,82,400 ರು. ಅಡಿ ನೇರ ನೇಮಕಾತಿ ಮಾಡಲು ಸೂಚಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಸ್ಥಳೀಯ ವೃಂದ ಹಾಗೂ ಮಿಕ್ಕುಳಿದ ವೃಂದವಾರು ಹುದ್ದೆಗಳ ವಿವರಗಳನ್ನು ಉನ್ನತ ಶಿಕ್ಷಣ ಇಲಾಖೆ ಅಧಿಸೂಚನೆಯಲ್ಲಿ ಪ್ರಕಟಿಸಿದೆ.