ಗ್ರಾಮಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೇ ನೇರ ನೇಮಕಾತಿ

By Suvarna News  |  First Published Jan 18, 2020, 3:22 PM IST

ಗ್ರಾಮಲೆಕ್ಕಿಗರ ಹುದ್ದೆಗಳನ್ನು ಕರ್ನಾಟಕ ಸಾಮಾನ್ಯ ಸೇವೆಗಳ ನಿಯಮಗಳಡಿ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ. ಹುದ್ದೆಯ ವಿವರ ಈ ಕೆಳಗಿನಂತಿದೆ.


ಶಿವಮೊಗ್ಗ, (ಜ.18): ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ  69 ಗ್ರಾಮಲೆಕ್ಕಿಗರ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.

ನೇರ ನೇಮಕಾತಿ ಇರಲಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕ 15-02-2020ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.

Tap to resize

Latest Videos

undefined

ಪಶ್ಚಿಮ ರೈಲ್ವೆ ವಲಯದಲ್ಲಿ ನೇಮಕಾತಿ: ಅರ್ಜಿ ಹಾಕಿ

ವಿದ್ಯಾರ್ಹತೆ: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ ಅಥವಾ CBSCಯಲ್ಲಿ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. 

* ಇತರೆ ರಾಜ್ಯಗಳಲ್ಲಿ ಶಿಕ್ಷಣ ಪಡೆದಿದ್ದರೆ ಅದನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನ ಹೊಂದಿರತಕ್ಕದ್ದು.

ವಯೋಮಿತಿ: ಕನಿಷ್ಠ 18 ವರ್ಷ ಆಗಿರಬೇಕು. SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯಸ್ಸು. 2A/2B/3A/3B ಅಭ್ಯರ್ಥಿಗಳಿಗೆ 38 ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ಮತ್ತಷ್ಟು ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 200 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 100 ರೂ. ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ:  21400 ರಿಂದ 42000 ರೂ. ತಿಂಗಳಿಗೆ.

ಅರ್ಜಿ ಸಲ್ಲಿಸುವ ವಿಧಾನ: ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ hhh://shivamogga-va.kar.nic.in ಲಾಗಿನ್ ಆಗಿ ಆನ್‌ಲೈನ್ ಮುಖಾಂತರ ಸಲ್ಲಿಸಬೇಕು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಕರ್ನಾಟಕ ಅಂಚೆ ವೃತ್ತದಲ್ಲಿ ವಿವಿಧ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ನೇಮಕಾತಿ ಪ್ರಕ್ರಿಯೆ: ನೇಮಕಾತಿಯು ಸಂಪೂರ್ಣವಾಗಿ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ನಿಯಮಗಳಂತೆ ಪಾರದರ್ಶಕವಾಗಿ ನಡೆಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

* ಈ ಬಗ್ಗೆ ಯಾವುದೇ ಮಾಹಿತಿ ತಿಳಿದುಕೊಳ್ಳಲು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 08182-225410 ಕರೆ ಮಾಡಿ.

* ಅಧಿಕೃತ ಅಧಿಸೂಚನೆಯಲ್ಲಿ ಮತ್ತಷ್ಟು ಮಾಹಿತಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

click me!