Bengaluru: ಇಂದು ಮಲ್ಲೇಶ್ವರಂನಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ: ಆಸಕ್ತರು ಪಾಲ್ಗೊಳ್ಳಿ

Published : Feb 11, 2023, 01:50 AM IST
Bengaluru: ಇಂದು ಮಲ್ಲೇಶ್ವರಂನಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ: ಆಸಕ್ತರು ಪಾಲ್ಗೊಳ್ಳಿ

ಸಾರಾಂಶ

'ಸರ್ವರಿಗೂ ಉದ್ಯೋಗ' ನೀತಿಯಡಿ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಮಲ್ಲೇಶ್ವರದ 18ನೇ ಅಡ್ಡರಸ್ತೆಯಲ್ಲಿ ಇರುವ  ಪ್ರಥಮ ದರ್ಜೆ ಮತ್ತು ಪದವಿಪೂರ್ವ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ. 

ಬೆಂಗಳೂರು (ಫೆ.11): 'ಸರ್ವರಿಗೂ ಉದ್ಯೋಗ' ನೀತಿಯಡಿ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಮಲ್ಲೇಶ್ವರದ 18ನೇ ಅಡ್ಡರಸ್ತೆಯಲ್ಲಿ ಇರುವ  ಪ್ರಥಮ ದರ್ಜೆ ಮತ್ತು ಪದವಿಪೂರ್ವ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಕೌಶಲ್ಯಾಭಿವೃದ್ಧಿ ಸಚಿವ ಮತ್ತು ಕ್ಷೇತ್ರದ ಶಾಸಕರೂ ಆಗಿರುವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು  ಮೇಳಕ್ಕೆ ಚಾಲನೆ ನೀಡಲಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಇಲಾಖೆಯು, ಮೇಳದಲ್ಲಿ ಜೆ.ಪಿ.ಮೋರ್ಗನ್, ಐಸಿಐಸಿಐ, ಕಾನ್ಸಂಟ್ರಿಕ್ಸ್, ಎಸ್ ಬಿ ಐ ಲೈಫ್, ಪೇಟಿಎಂ, ಎಲ್ಐಸಿ ಮುಂತಾದ 125ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ. ಒಟ್ಟು 28 ಸಾವಿರ ಉದ್ಯೋಗಾವಕಾಶಗಳಿದ್ದು, ಯುವಜನರಿಗೆ ಇದು ಉತ್ತಮ ವೇದಿಕೆಯಾಗಿದೆ ಎಂದಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಎಂಜಿನಿಯರಿಂಗ್ ಮತ್ತು ಯಾವುದೇ ಪದವಿ ಪಡೆದಿರುವವರು ಮೇಳದಲ್ಲಿ ಭಾಗವಹಿಸಬಹುದು. ಮೇಳವು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5ರವರಗೆ ನಡೆಯಲಿದೆ. ಈಗಾಗಲೇ ಇಲಾಖೆಯ ಸ್ಕಿಲ್ ಕನೆಕ್ಟ್ ಪೋರ್ಟಲ್ ನಲ್ಲಿ 2,500 ಆಸಕ್ತರು ನೋಂದಾಯಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Bengaluru: ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಬ್ರೋಕರ್‌ಗಳ ಬಂಧನ

15ರಂದು ಉದ್ಯೋಗ ಮೇಳ ಆಯೋಜನೆ: ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿ ಕೇಂದ್ರ ಹಾಗೂ ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಎನ್‌ಸಿಎಸ್‌ಪಿ ಅಡಿ ಕೊರಟಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 15 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಮೇಳದಲ್ಲಿ ಭಾಗವಹಿಸಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಕೊಡಗಿಗೆ ಬರಲು ಹೆದರಿದ್ರಾ ಸಿದ್ದು, ಡಿಕೆಶಿ ಜೋಡಿಯ ಪ್ರಜಾಧ್ವನಿ ಯಾತ್ರೆ!

ಉದ್ಯೋಗ ಮೇಳದಲ್ಲಿ ಬೆಂಗಳೂರು ಮತ್ತು ತುಮಕೂರಿನ ಹೆಸರಾಂತ ಕಂಪನಿಗಳು ಭಾಗವಹಿಸಲಿದ್ದು, ಆಸಕ್ತ ಎಸ್‌ಎಸ್‌ಎಲ್‌ಸಿ, ಪಿಯುಸಿ, ಯಾವುದೇ ಪದವಿ, ಬಿ.ಇ., ಎಂಸಿಎ, ಎಂಬಿಎ ಹಾಗೂ ಇನ್ನಿತರ ಸ್ನಾತಕೋತ್ತರ ಪದವಿ ಮತ್ತು ಐಟಿಐ, ಡಿಪ್ಲೊಮಾ ಎಲ್ಲಾ ಟ್ರೇಡ್‌ ಪಾಸಾದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಉದ್ಯೋಗದಾತರು/ನಿಯೋಜಕರು ವೆಬ್‌ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, ಮೊ.ಸಂ. 9880455484, 9945751254, 812328455, 8792669410ಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

PREV
Read more Articles on
click me!

Recommended Stories

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!
ಮಂಗಳೂರು: 'ಡಿಕೆಶಿ ಮುಂದಿನ ಸಿಎಂ’ ಘೋಷಣೆ ಕೂಗಿದ ಐವನ್, ಮಿಥುನ್‌ಗೆ ನೋಟಿಸ್?