ಆರ್ಥಿಕ ಇಲಾಖೆ ಅನುಮತಿ, ಶೈಕ್ಷಣಿಕ ವರ್ಷ ಆರಂಭಗೊಂಡ ನಂತರ ನೇಮಕಾತಿ ಆದೇಶ| ನೇಮಕಾತಿ ಬಾಕಿ ಇರುವ 173 ಬೋಧಕ ಹುದ್ದೆಗಳು ಮತ್ತು ಪ್ರೌಢ ಶಿಕ್ಷಣ ಇಲಾಖೆಯ 257 ಬೋಧಕ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಸರ್ಕಾರ ಅನುಮೋದನೆ|
ಬೆಂಗಳೂರು(ಮಾ.01): ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಂತದಲ್ಲಿ ನೇಮಕಾತಿ ಪ್ರಕ್ರಿಯೆ ಬಾಕಿ ಇದ್ದ ಒಟ್ಟು 430 ಬೋಧಕ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭಗೊಂಡ ನಂತರ ನೇಮಕಾತಿ ಆದೇಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
2015ರ ಡಿ.31ರ ಅಂತ್ಯಕ್ಕೆ ನಿವೃತ್ತಿ, ಮರಣ, ರಾಜೀನಾಮೆ ಇತರೆ ಕಾರಣಗಳಿಂದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಆಗಿರುವ ಹುದ್ದೆಗಳ ಪೈಕಿ ಈಗಾಗಲೇ ಸರ್ಕಾರದಿಂದ ಅನುಮೋದನೆಗೊಂಡು ಇಲಾಖಾ ಹಂತದಲ್ಲಿ ನೇಮಕಾತಿ ಬಾಕಿ ಇರುವ 173 ಬೋಧಕ ಹುದ್ದೆಗಳು ಮತ್ತು ಪ್ರೌಢ ಶಿಕ್ಷಣ ಇಲಾಖೆಯ 257 ಬೋಧಕ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಸರ್ಕಾರ ಅನುಮೋದನೆ ನೀಡಿದೆ.
undefined
ಪ್ರವಾಸೋದ್ಯಮದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ: ಯೋಗೇಶ್ವರ್
2021-22ನೇ ಶೈಕ್ಷಣಿಕ ವರ್ಷ ಪ್ರಾರಂಭಗೊಂಡ ನಂತರ (ಜೂನ್ ಅಥವಾ ಜುಲೈ-2021) ಈ ನೇಮಕಾತಿ ಆದೇಶ ನೀಡಲು ತಿಳಿಸಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.