* 1.05 ಲಕ್ಷ ಅಭ್ಯರ್ಥಿಗಳ ನೋಂದಣಿ
* ರಾಜ್ಯದ 435 ಕೇಂದ್ರಗಳಲ್ಲಿ ಪರೀಕ್ಷೆ
* ಎಲ್ಲ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ
ಬೆಂಗಳೂರು(ಮೇ.21): ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ (6ರಿಂದ 8ನೇ ತರಗತಿ) ಖಾಲಿ ಇರುವ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಮೇ 21ರ ಶನಿವಾರ ಮತ್ತು ಮೇ 22ರ ಭಾನುವಾರ ರಾಜ್ಯದ 435 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
ರಾಜ್ಯದಲ್ಲಿ ಇತ್ತೀಚಿನ ಪಿಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಂತಹ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಭಾರೀ ಬಿಗಿ ಭದ್ರತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ.
undefined
Dharwad: ಶಿಕ್ಷಕರ ನೇಮಕಾತಿ ಪರೀಕ್ಷೆ: ಜಿಲ್ಲೆಯಲ್ಲಿ 9 ಪರೀಕ್ಷಾ ಕೇಂದ್ರಗಳು ಅಕ್ರಮ ತಡೆಗೆ ಬಿಗಿ ಕ್ರಮ!
ಪ್ರತಿ ಜಿಲ್ಲೆಯಲ್ಲೂ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ಸುಸೂತ್ರವಾಗಿ ಪರೀಕ್ಷೆ ನಡೆಸುವ ಹೊಣೆಯನ್ನು ಆಯಾ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ನೇತೃತ್ವದ ತ್ರಿಸದಸ್ಯ ಸಮಿತಿಗೆ ವಹಿಸಲಾಗಿದೆ.
ಅನಧಿಕೃತ ಪ್ರವೇಶಕ್ಕೆ ಕ್ರಿಮಿನಲ್ ಕೇಸ್:
15 ಸಾವಿರ ಹುದ್ದೆಗಳಿಗೆ ನಡೆಯುವ ಪರೀಕ್ಷೆಗೆ ಒಟ್ಟು 1.05 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ಅಭ್ಯರ್ಥಿಗಳು ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ಕು್ಯಲೇಟರ್, ಕೈಗಡಿಯಾರ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ಕೊಂಡೊಯ್ಯುವಂತಿಲ್ಲ.
ಶಿಕ್ಷಕರ ನೇಮಕಾತಿ ಪರೀಕ್ಷೆ: ಅಕ್ರಮ ತಡೆಯಲು ಮಾಸ್ಟರ್ ಪ್ಲಾನ್ ರೆಡಿ..!
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಆರಂಭಕ್ಕೆ ಒಂದು ಗಂಟೆ ಮುಂಚಿತವಾಗಿಯೇ ಹೋಗಬೇಕು. ಪೊಲೀಸರು ಹಾಗೂ ಪರೀಕ್ಷಾ ಕೊಠಡಿ ಸಿಬ್ಬಂದಿಯಿಂದ ಎರಡು ಹಂತದಲ್ಲಿ ವಿದ್ಯಾರ್ಥಿಗಳ ತಪಾಸಣೆ ನಡೆಯುತ್ತದೆ. ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೊರತುಪಡಿಸಿ ಮತ್ಯಾರಾದರೂ ಅನಧಿಕೃತವಾಗಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸಿದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ.
ಎಲ್ಲ ಪರೀಕ್ಷಾ ಕೇಂದ್ರಗಳ ಆವರಣ ಮತ್ತು ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಡ್ಡಾಯಗೊಳಿಸಿದೆ. ಸೂಕ್ಷ್ಮ ಕೇಂದ್ರಗಳಲ್ಲಿ ಮಾತ್ರ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿದೆ.
ಪೊಲೀಸ್ ಬಂದೋಬಸ್ತ್
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪರೀಕ್ಷೆ ಕೇಂದ್ರವು ಸಾಧಾರಣ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಕೇಂದ್ರಗಳಾಗಿದ್ದಲ್ಲಿ ಅವುಗಳಿಗೆ ಅಗತ್ಯವಿರುವ ಪೊಲೀಸ್ ಸಿಬ್ಬಂದಿಯನ್ನು ಹೆಚ್ಚುವರಿಯಾಗಿ ನಿಯೋಜಿಸುವುದು ಮತ್ತು ಸಿವಿಲ್ ಪೊಲೀಸ್ ಜತೆಗೆ ಮೀಸಲು ಪಡೆಯನ್ನು ನಿಯೋಜಿಸುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಇಲಾಖೆಯಿಂದ ಕಾಲಕಾಲಕ್ಕೆ ಗಸ್ತು ಪಡೆಯನ್ನು ನಿಯೋಜಿಸಿ ಯಾವುದೇ ಅಕ್ರಮ, ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸುವಂತೆ ಸರ್ಕಾರ ಸೂಚಿಸಿದ್ದು ಅದರಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮಾಡಿಕೊಂಡಿದೆ.