KUD Recruitment 2022: ಖಾಲಿ ಇರುವ ಬೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ ಕೆಯುಡಿ

By Suvarna News  |  First Published Dec 23, 2021, 6:02 PM IST
  • ಬೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ ಕೆಯುಡಿ
  • ಆಫ್‌ಲೈನ್  ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 28
  • ನೆಟ್/ಸ್ಲೆಟ್/ಪಿಹೆಚ್‌.ಡಿ ಪದವಿ ವಿದ್ಯಾರ್ಹತೆ ಹೊಂದಿರಬೇಕು
     

ಬೆಂಗಳೂರು(ಡಿ.23): ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ (Karnatak University Dharwad) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 6 ಬೋಧನಾ ಸಹಾಯಕರ (Teaching Assistant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ  ಮತ್ತು ಆಸಕ್ತ  ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಫ್‌ಲೈನ್ (Offline) ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ರಸಾಯನ ಶಾಸ್ತ್ರದ (CHEMISTRY) ವಿಭಾಗಕ್ಕೆ ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಡಿಸೆಂಬರ್ 28,2021 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.  ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ ತಾಣ https://www.kud.ac.in/ ಗೆ ಭೇಟಿ ನೀಡಿ.

ವಿದ್ಯಾರ್ಹತೆ ಮತ್ತು ವಯೋಮಿತಿ: ಕೆಯುಡಿ ನೇಮಕಾತಿಯ ಬೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೆಟ್/ಸ್ಲೆಟ್/ಪಿಹೆಚ್‌.ಡಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Tap to resize

Latest Videos

undefined

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಬೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುತ್ತದೆ.

UPSC NDA NOTIFICATION 2022: 400 ಹುದ್ದೆಗಳ ನೇಮಕಾತಿ ಪರೀಕ್ಷೆ ಅಧಿಸೂಚನೆ ಹೊರಡಿಸಿದ UPSC

ಅರ್ಜಿ ಶುಲ್ಕ: ಬೋಧನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಡಿ.ಡಿ ಮೂಲಕ ಪಾವತಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ISI Recruitment 2022: ಭಾರತೀಯ ಸಂಖ್ಯಾಶಾಸ್ತ್ರ ಸಂಸ್ಥೆಯಲ್ಲಿ ಜೂನಿಯರ್ ರಿಸರ್ಚ್​ ಫೆಲೋ

ಅರ್ಜಿ ಸಲ್ಲಿಸುವ ವಿಳಾಸ:
Chairman
PG Department of Chemistry
Karnatak University Dharwad
Dharwad, Karnataka
ಹೆಚ್ಚಿನ ಮಾಹಿತಿಗೆ: https://kud.ac.in/viewitems.aspx?type=News&id=U0001-7202112201717553

ಭಾರತೀಯ ಸಂಖ್ಯಾಶಾಸ್ತ್ರ ಸಂಸ್ಥೆಯಲ್ಲಿ ಜೂನಿಯರ್ ರಿಸರ್ಚ್​ ಫೆಲೋ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ: ಭಾರತೀಯ ಸಂಖ್ಯಾಶಾಸ್ತ್ರ ಸಂಸ್ಥೆ (Indian Statistical Institute) ಕೊಲ್ಕತ್ತಾ, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ  ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.  ಒಟ್ಟು 3 ಜೂನಿಯರ್ ರಿಸರ್ಚ್​ ಫೆಲೋ (Junior Research Fellow) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆನ್‌ಲೈನ್ (Online) ಮೂಲಕ ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಎಂಎಸ್ಸಿ, ಎಂಟೆಕ್, ಎಂಇ, ಎನ್​​ಇಟಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು  ಹೆಚ್ಚಿನ ಮಾಹಿತಿಗಾಗಿ web.isical.ac.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಬೆಂಗಳೂರಿನ ರಾಮನ್​ ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ: ರಾಮನ್​ ಸಂಶೋಧನಾ ಸಂಸ್ಥೆ (Raman Research Institute) ಬೆಂಗಳೂರಿನಲ್ಲಿ ಖಾಲಿ ಇರುವ ಒಂದು ಟೆಕ್ನಿಕಲ್ ಅಸಿಸ್ಟೆಂಟ್(Technical Assistant) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಬಿಇ, ಬಿ.ಟೆಕ್, ಬಿಎಸ್ಸಿ, ಬಿಸಿಎ, ಡಿಪ್ಲೋಮಾ ಪದವಿ ಪೂರ್ಣಗೊಳಿಸಿರುವ ಒಂದು ವರ್ಷಗಳ ಅನುಭವ ಹೊಂದಿರುವ  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಆನ್‌ಲೈನ್ ಮೂಲಕ ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂರ್ಸತೆಯ ಅಧಿಕೃತ ವೆಬ್​​ಸೈಟ್ www.rri.res.in ಗೆ ಭೇಟಿ ನೀಡಿ.

ರಾಮನ್​ ಸಂಶೋಧನಾ ಸಂಸ್ಥೆ ನೇಮಕಾತಿಯ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ. ಮತ್ತು ಮಾಸಿಕ ವೇತನ 23,500 ರೂ ಇರಲಿದೆ. ದಾಖಲಾತಿ ಪರಿಶೀಲನೆ ಮಗತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.

click me!