Telangana Govt Job Announcements: ತೆಲಂಗಾಣದಲ್ಲಿ 80 ಸಾವಿರ ಸರ್ಕಾರಿ ಉದ್ಯೋಗ ನೇಮಕಾತಿಗೆ ಕೆಸಿಆರ್ ಕರೆ

By Suvarna News  |  First Published Mar 9, 2022, 9:26 PM IST

ತೆಲಂಗಾಣ ರಾಜ್ಯ ಸರ್ಕಾರವು  ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 80,039 ಹುದ್ದೆಗಳಿಗೆ ಇಂದಿನಿಂದ ಅಧಿಸೂಚನೆಯನ್ನು ನೀಡಲು ನಿರ್ಧರಿಸಿದೆ. 11,103 ಗುತ್ತಿಗೆ ನೌಕರರನ್ನು ಕಾಯಂಗೊಳಿಸುವ ಕ್ರಮ ಇದರಲ್ಲಿ ಸೇರಿದೆ.


ಹೈದರಾಬಾದ್: ತೆಲಂಗಾಣ ರಾಜ್ಯ ಸರ್ಕಾರವು 11,103 ಗುತ್ತಿಗೆ ನೌಕರರನ್ನು ಕಾಯಂಗೊಳಿಸುವ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 80,039 ಹುದ್ದೆಗಳಿಗೆ ಇಂದಿನಿಂದ ಅಧಿಸೂಚನೆಯನ್ನು ನೀಡಲು ನಿರ್ಧರಿಸಿದೆ.

ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಬುಧವಾರ ರಾಜ್ಯ ವಿಧಾನಸಭೆಯಲ್ಲಿ ಈ ಕುರಿತು ಹೇಳಿಕೆ ನೀಡಿದ್ದು, ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 91,142 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವಿನ 9 ಮತ್ತು 10 ನೇ ಶೆಡ್ಯೂಲ್ ಸಂಸ್ಥೆಗಳ ವಿವಾದಗಳು ಬಗೆಹರಿದ ನಂತರ ಇನ್ನೂ 20,000 ಉದ್ಯೋಗಗಳನ್ನು ಭರ್ತಿ ಮಾಡಬಹುದು ಎಂದು ಕೆಸಿಆರ್ ಸಭೆಗೆ ಮಾಹಿತಿ ನೀಡಿದರು.

Tap to resize

Latest Videos

KPSC Recruitment 2022: ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ

ಕಳೆದ ಏಳು ವರ್ಷಗಳಲ್ಲಿ ಟಿಆರ್‌ಎಸ್ ಸರ್ಕಾರ 1.56 ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಲು ಅಧಿಸೂಚನೆಗಳನ್ನು ಹೊರಡಿಸಿದ್ದು, ಈ ಪೈಕಿ 1,33,942 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಸಿಎಂ ಹೇಳಿದ್ದಾರೆ. ಉಳಿದ ಉದ್ಯೋಗಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗಳು ಪೂರ್ಣಗೊಳ್ಳುವ ವಿವಿಧ ಹಂತಗಳಲ್ಲಿವೆ. ಹೊಸ ವಲಯ ವ್ಯವಸ್ಥೆ ಹಾಗೂ ರಾಷ್ಟ್ರಪತಿಗಳ ನೂತನ ಆದೇಶದಂತೆ ಶೇ.95ರಷ್ಟು ಸರ್ಕಾರಿ ಉದ್ಯೋಗಗಳು ಸ್ಥಳೀಯ ಯುವಕರಿಗೆ ಮೀಸಲಾಗಲಿವೆ ಎಂದು ಹೇಳಿದ್ದಾರೆ.

"ತೆಲಂಗಾಣದ ಸ್ಥಳೀಯ ಅಭ್ಯರ್ಥಿಗಳು ತಮ್ಮ ಜಿಲ್ಲೆ, ವಲಯ ಮತ್ತು ಬಹು-ವಲಯಗಳಲ್ಲಿ 95 ಪ್ರತಿಶತ ಮೀಸಲಾತಿಯನ್ನು ಹೊರತುಪಡಿಸಿ ಯಾವುದೇ ಜಿಲ್ಲೆ, ವಲಯ ಅಥವಾ ಬಹು-ವಲಯದಲ್ಲಿ ಐದು ಶೇಕಡಾ ಮುಕ್ತ ಕೋಟಾಕ್ಕೆ ಸ್ಪರ್ಧಿಸಬಹುದು. ತೆಲಂಗಾಣದ ಸ್ಥಳೀಯ ಅಭ್ಯರ್ಥಿಗಳು ಯಾವುದೇ ಜಿಲ್ಲೆ, ವಲಯ ಅಥವಾ ಬಹು-ವಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸ್ಪರ್ಧಿಸಲು ಅನುವು ಮಾಡಿಕೊಡಿ ಎಂದು ಮುಖ್ಯಮಂತ್ರಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

AHVS Karnataka Recruitment 2022: ಎಹೆಚ್‌ವಿಎಸ್‌ 400 ಪಶುವೈದ್ಯಾಧಿಕಾರಿ

ಕನ್ನಡಿಗರಿಗೆ ಆದ್ಯತೆ ನೀಡದ ಕೈಗಾರಿಕೆಗಳಿಗೆ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ: ಹೊಸ ಕೈಗಾರಿಕಾ ನೀತಿ 2020 - 25ರ (2020-25 Industrial Policy) ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ. 100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ (Kannadigas) ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ (Murugesh Nirani) ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಜೆಡಿಎಸ್‍ನ ಸಿ. ಎನ್. ಮಂಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೈಗಾರಿಕಾ ಟೌನ್‍ ಶಿಪ್‍ಗಳ ಬಳಿಯೇ ಜನವಸತಿ ಪ್ರದೇಶಗಳನ್ನು ನಿರ್ಮಾಣ ಮಾಡುವ ಮೂಲಕ ವಾಕ್ ಟು ವರ್ಕ್‍ಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಡಾ. ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ. 85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ( industries) ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದು ಅವರು ಹೇಳಿದರು.

ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ ಶಿಪ್‍ಗಳನ್ನು ಸ್ಥಾಪನೆ ಮಾಡುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.

ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಹೂಡಿಕೆದಾರರಿಗೆ ಸೌಲಭ್ಯಗಳು ಮತ್ತು ರಿಯಾಯ್ತಿಗಳನ್ನು ನೀಡುವುದನ್ನು ಕಡಿಮೆ ಮಾಡಿದ್ದು, ರಾಜ್ಯದ 2ನೇ ಹಂತದ ನಗರಗಳಾದ ತುಮಕೂರು, ಕಲ್ಬುರ್ಗಿ, ಬೆಳಗಾವಿ ಸೇರಿದಂತೆ ವಿವಿಧ ನಗರಗಳಲ್ಲಿ ಹೂಡಿಕೆ ಮಾಡಲು ಮುಂದೆ ಬರುವವರಿಗೆ ಸರ್ಕಾರದಿಂದ ಎಲ್ಲ ರೀತಿಯ ಸಹಾಯ, ನೆರವು, ರಿಯಾಯ್ತಿ ನೀಡಲು ಉದ್ದೇಶಿಸಲಾಗಿದೆ' ಎಂದು ಹೇಳಿದರು.

ಕೋಲಾರದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಕಾರ್ಖಾನೆಯನ್ನು ಖಾಸಗಿ ಕಂಪನಿಗಳಿಗೆ ಹಸ್ತಾಂತರಿಸುವುದಿಲ್ಲ, ಬಿಇಎಂಎಲ್ ಕಾರ್ಖಾನೆ ಕೇಂದ್ರದ ಅಧೀನದಲ್ಲಿದ್ದು, ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದರು.

click me!