ಖೇಲೋ ಇಂಡಿಯಾ ಯೋಜನೆಯಡಿ ಮೈಸೂರಿನಲ್ಲಿ ಥೆರಪಿಸ್ಟ್ ಹುದ್ದೆ , ಕೋಲಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಹುದ್ದೆ ಖಾಲಿ ಇದ್ದು, ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಕೂಡ ಉದ್ಯೋಗವಕಾಶವಿದೆ. ವಿವರಣೆ ಇಲ್ಲಿದೆ.
ಮೈಸೂರು (ಜೂನ್ .22): ಖೇಲೋ ಇಂಡಿಯಾ ಯೋಜನೆಯಡಿ (khelo india programme ) ರಾಜ್ಯ ಉತ್ಕೃಷ್ಟತಾ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇಲೆ ಥೆರಪಿಸ್ಟ್ ಗ್ರೇಡ್ 2 ಮತ್ತು ಸ್ಪೋರ್ಚ್‌್ಸ ಮಸ್ಯೂರ್ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯ ಉತ್ಕೃಷ್ಟತಾ ಕೇಂದ್ರ ಮತ್ತು ಜಯಪ್ರಕಾಶ್ ನಾರಾಯಣ್ ರಾಷ್ಟ್ರೀಯ ಯುವ ಕೇಂದ್ರದಲ್ಲಿ ಫಿಸಿಯೋಥೆರಪಿಸ್ಟ್ ಗ್ರೇಡ್ 11 ಮತ್ತು ಸ್ಪೋರ್ಚ್‌್ಸ ಮೆಸ್ಯೂರ್ ಹುದ್ದೆಗಳನ್ನು ಮಂಜೂರು ಮಾಡಿದ್ದುಘಿ, ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಸಂಬಂಧಿಸಿದ ದಾಖಲೆಯನ್ನು ದೃಢೀಕರಿಸಿ ಅರ್ಜಿಯನ್ನು ಜೂ. 28 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ. 0821- 2564179 ಸಂಪರ್ಕಿಸಬಹುದು.
ಕೋಲಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಇರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರ, ವಿದ್ಯಾನಗರ, ಬೆಂಗಳೂರು ಅನ್ನು ಉತ್ಕೃಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಿರುತ್ತಾರೆ. ಈ ಕೇಂದ್ರ ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಒಳಾಂಗಣ ಕ್ರೀಡಾಂಗಣ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಂಭಾಗ ಬಂಗಾರಪೇಟೆ ರಸ್ತೆ, ಕೋಲಾರ-563101 ಇಲ್ಲಿ ನಿಗಧಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಜೂನ್ 28 ರೊಳಗೆ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ, ಕೋಲಾರ, ಚಾಮರಾಜನಗರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೋಲಾರದಲ್ಲಿ ಶೀಘ್ರಲಿಪಿಗಾರರ ಹುದ್ದೆಗೆ ಅರ್ಜಿ ಆಹ್ವಾನ: ಕೋಲಾರ ಜಿಲ್ಲಾ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ 27-06-2022 ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ 26-07-2022 ರಾತ್ರಿ 11-59 ಗಂಟೆಯ ವರೆಗೆ ಮಾತ್ರ ಹಾಗೂ ಬ್ಯಾಂಕ್ ಮುಖಾಂತರ ಶುಲ್ಕ ಪಾವತಿಸಲು 28-07-2022 ಕೊನೆಯ ದಿನಾಂಕವಾಗಿದೆ. ವಿದ್ಯಾರ್ಹತೆ, ವಯೋಮಿತಿ, ಹುದ್ದೆಗಳ ವರ್ಗೀಕರಣ ಹಾಗೂ ಹೆಚ್ಚಿನ ವಿವರಗಳಿಗೆ ಕೋಲಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವೆಬ್‌ಸೈಟ್ ವಿಳಾಸದ ಮೂಲಕ ತಿಳಿದುಕೊಳ್ಳಬಹುದು ಎಂದು ಕೋಲಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತಿಳಿಸಿದ್ದಾರೆ.
ಪದ್ಮ ಶ್ರೇಣಿಯ ಪ್ರಶಸ್ತಿಗೆ ಅರ್ಜಿ ಆಹ್ವಾನ:
ಮೈಸೂರು: ಪ್ರಸಕ್ತ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗೆ ಕಲೆ, ಸಮಾಜ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ, ತಂತ್ರಜ್ಞಾನ ಮತ್ತು ಇತರೆ ಗೌರವಾನ್ವಿತ ವೃತ್ತಿಯಲ್ಲಿ ತೊಡಗಿಸಿಕೊಂಡವರು ವಿವರವುಳ್ಳ ಅರ್ಜಿಯನ್ನು ಜೂ. 29 ರೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ. 0821- 2564179 ಸಂಪರ್ಕಿಸಬಹುದು.
ಕೂಲಿ ಕಾರ್ಮಿಕರಿಗೆ ಸಿಗ್ತಿಲ್ಲ ಉದ್ಯೋಗ ಖಾತ್ರಿ ಯೋಜನೆಯ ಕೆಲಸ!
ಮಧ್ಯಸ್ಥಿಕೆದಾರರ ನೇಮಕಾತಿಗೆ ಅರ್ಜಿ ಆಹ್ವಾನ
ಬಾಗಲಕೋಟೆ: ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಮಧ್ಯಸ್ಥಿಕೆದಾರರನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜು.19 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಲಿಂಕ್‌ನ ಮೂಲಕ ಪಡೆದುಕೊಳ್ಳಬಹುದಾಗಿದೆ. ಮಾಹಿತಿಗಾಗಿ ಸಹಾಯಕ ರಿಜಿಸ್ಟ್ರಾರ್ ಹಾಗೂ ಸಹಾಯಕ ಆಡಳಿತಾಕಾರಿಗಳು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಬಾಗಲಕೋಟೆ ದೂ.ಸಂ:08354-235778ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಹಾಗೂ ಆಡಳಿತಾಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.