UAS Dharwad Recruitment 2022: ತಾಂತ್ರಿಕ ಅಧಿಕಾರಿ ಹುದ್ದೆಗೆ ನೇಮಕಾತಿ ಅಧಿಸೂಚನೆ, ಮಾರ್ಚ್ 9ಕ್ಕೆ ನೇರ ಸಂದರ್ಶನ

By Suvarna News  |  First Published Mar 4, 2022, 11:23 PM IST

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ತಾಂತ್ರಿಕ ಅಧಿಕಾರಿ ಅಭ್ಯರ್ಥಿ  ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಮಾರ್ಚ್ 9 ,2022ರಂದು  ನೇರ ಸಂದರ್ಶನ ನಡೆಯಲಿದೆ.


ಬೆಂಗಳೂರು(ಫೆ.5): ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ (University of Agricultural Sciences Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. 1  ತಾಂತ್ರಿಕ ಅಧಿಕಾರಿ (Technical Officer) ಹುದ್ದೆಯನ್ನು ಭರ್ತಿ ಮಾಡಲು ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://uasd.edu/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಮಾರ್ಚ್ 9 ,2022ರಂದು  ನೇರ ಸಂದರ್ಶನ ನಡೆಯಲಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ  ತಾಂತ್ರಿಕ ಅಧಿಕಾರಿ  ಹುದ್ದೆಗಳಿಗೆ  ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ  ಕೃಷಿ ಪವನಶಾಸ್ತ್ರ (Agrometeorology)ದಲ್ಲಿ ಸ್ನಾತಕೋತ್ತರ ಪದವಿ  ಪೂರ್ಣಗೊಳಿಸಿರಬೇಕು.

Tap to resize

Latest Videos

undefined

ವಯೋಮಿತಿ : ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ  ತಾಂತ್ರಿಕ ಅಧಿಕಾರಿ  ಹುದ್ದೆಗೆ   ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ  ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ನಿಗದಿಪಡಿಸಲಾಗಿದೆ. ಸರಕಾರದ ನಿಯಮದ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

YADAGIRI ANGANWADI RECRUITMENT 2022: ಯಾದಗಿರಿ ಜಿಲ್ಲೆಯ ಅಂಗನವಾಡಿ ಹುದ್ದೆಗಳ ನೇಮಕಾತಿ

 ವೇತನ: ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ  ತಾಂತ್ರಿಕ ಅಧಿಕಾರಿ  ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ₹57,700 ರೂ ವೇತನವನ್ನು ನಿಗದಿಯಾಗಿದೆ.

ಆಯ್ಕೆ ಪ್ರಕ್ರಿಯೆ:  ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ  ತಾಂತ್ರಿಕ ಅಧಿಕಾರಿ  ಹುದ್ದೆಗೆ   ನೇರ ಸಂದರ್ಶನದಲ್ಲಿ ಭಾಗವಹಿಸಿದ  ಅಭ್ಯರ್ಥಿಗಳನ್ನು  ಸಂದರ್ಶನದ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಸಂದರ್ಶನದ ವಿವರ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳ ಜೊತೆ ಮಾರ್ಚ್9, 2022 ರಂದು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಲು ಈ ಕೆಳಗಿನ ವಿಳಾಸದಲ್ಲಿ ಇರತಕ್ಕದ್ದು,
ಸಹ ಸಂಶೋಧನಾ ನಿರ್ದೇಶಕರು,
ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ,
ಕೃಷಿ ವಿಶ್ವವಿದ್ಯಾಲಯ,
ವಿಜಯಪುರ
ಕರ್ನಾಟಕ

Coast Guard Recruitment 2022: ಭಾರತೀಯ ಕರಾವಳಿ ಭದ್ರತಾಪಡೆ ನೇಮಕಾತಿ 

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸಿಇಇಆರ್‌ಐ: ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆ (Central Electronics Engineering Research Institute - CEERI) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಜೂನಿಯರ್ ರಿಸರ್ಚ್​​ ಫೆಲೋ (Junior Research Fellow) ಮತ್ತು  ಟೆಕ್ನಿಕಲ್ ಅಸಿಸ್ಟೆಂಟ್ (Technical Assistant) ಹುದ್ದೆಗಳು ಸೇರಿ ಒಟ್ಟು 5 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್ ​(Online) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://www.ceeri.res.in/recruitments/ ಗೆ ಭೇಟಿ ನೀಡಬಹುದು.

ಒಟ್ಟು 5 ಹುದ್ದೆಗಳ ಮಾಹಿತಿ:
ಜೂನಿಯರ್ ರಿಸರ್ಚ್​ ಫೆಲೋ: 04
ಟೆಕ್ನಿಕಲ್ ಅಸಿಸ್ಟೆಂಟ್: 01

ಶೈಕ್ಷಣಿಕ ವಿದ್ಯಾರ್ಹತೆ: ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಎಂಎಸ್ಸಿ, ಬಿಎಸ್ಸಿ, ಡಿಪ್ಲೋಮಾ, ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಯಸ್ಸು 35 ರಿಂದ 50 ವರ್ಷದೊಳಗಿರಬೇಕು.

ವೇತನ:  ಕೇಂದ್ರೀಯ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಹುದ್ದೆಗೆ ಅನುಸಾರ ವೇತನ ದೊರೆಯಲಿದೆ.
ಜೂನಿಯರ್ ರಿಸರ್ಚ್​ ಫೆಲೋ-ಮಾಸಿಕ ₹ 31,000
ಟೆಕ್ನಿಕಲ್ ಅಸಿಸ್ಟೆಂಟ್-ಮಾಸಿಕ ₹ 20,000

click me!