ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 17 ಪಿಯೋನ್ ಹುದ್ದೆಗಳಿಗೆ ರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇ 05 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಉಡುಪಿ (ಎ.5): ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ (Udupi District Court ) 17 ಹುದ್ದೆಗಳು ಖಾಲಿ ಇದ್ದು, ಜವಾನ (peon) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ: ಜವಾನ (ಪಿಯೋನ್)
ಕರ್ತವ್ಯ ಸ್ಥಳ: ಉಡುಪಿ ಜಿಲ್ಲೆ
ಒಟ್ಟು ಹುದ್ದೆಗಳ ಸಂಖ್ಯೆ: 17
ಶೈಕ್ಷಣಿಕ ಅರ್ಹತೆ: ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ಲಘು ವಾಹನ ಚಾಲನಾ ಲೈಸೆನ್ಸ್ ಐಚ್ಚಿಕ (Optional)
ವಯೋಮಿತಿ: ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.
ವೇತನ: ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950ರೂ ವೇತನ ದೊರೆಯಲಿದೆ.
ವರ್ಗಾವಣೆ ಆದೇಶ ಪ್ರಕಟಿಸಿದ ರಾಜ್ಯ ಕಾಲೇಜು ಶಿಕ್ಷಣ ಇಲಾಖೆ, ಏ.8 ರಂದು ಕೌನ್ಸೆಲಿಂಗ್
ಆಯ್ಕೆ ವಿಧಾನ: 10ನೇ ತರಗತಿ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ 1:10ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ ವಿಧಾನ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಉಡುಪಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
VIMS Bellary Recruitment 2022: ಉಪನ್ಯಾಸಕ ಹುದ್ದೆಗಳಿಗೆ ವಿಮ್ಸ್ ನೇಮಕಾತಿ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 1 ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂ, ಅಂಗವಿಕಲ ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು.
ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಉಡುಪಿ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಸಲು, ಆನ್‌ಲೈನ್ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 05, 2022
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 07, 2022
ಆನ್ಲೈನ್ ಅರ್ಜಿ ಸಲ್ಲಿಕೆಗಾಗಿ: https://ggle.io/4qFq
ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ : https://bityl.co/BcIC