ಖಾಲಿ ಇರುವ ವಿವಿಧ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ಸಖತ್ ಸಂಬಳ

By Suvarna News  |  First Published Jul 28, 2021, 12:58 PM IST

ಕೇಂದ್ರ ಸರ್ಕಾರ ನಾನಾ ಇಲಾಖೆಯ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನುಆರಂಭಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 12 ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯನ್ನು ಕೇಂದ್ರ ಲೋಕ ಸೇವಾ ಆಯೋಗ ನಡೆಸಿಕೊಡಲಿದೆ. 


ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿ ಹುದ್ದೆಗಳು ಖಾಲಿಯಾಗುತ್ತಿರುತ್ತಿವೆ. ಹೀಗೆ ಖಾಲಿಯಾಗುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‌ಸಿ) ವಹಿಸಲಾಗುತ್ತದೆ. ಅದರಂತೆ ಈ ಬಾರಿಯೂ ಕೇಂದ್ರ ಸರ್ಕಾರದ ಹಲವು ಇಲಾಖೆಗಳಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಯುಪಿಎಸ್‌ಸಿ ನಡೆಸಿಕೊಡಲಿದೆ.

ಖಾಲಿ ಇರುವ ಹುದ್ದೆಗಳಿಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯ (ಐ ಮತ್ತು ಬಿ), ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ಮತ್ತು ಕೃಷಿ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ 46 ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಯುಪಿಎಸ್ಸಿಯ ಅಧಿಕೃತ ವೆಬ್ಸೈಟ್ upsc.gov.in. ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಸಂಬಂಧ ಹೊರಡಿಸಲಾಗಿರುವ ಅಧಿಸೂಚನೆಯ ಬಗ್ಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

Latest Videos

undefined

ಸೇನೆಯ ನಾನ್ ಡಿಪಾರ್ಟಮೆಂಟಲ್ ಆಫೀಸರ್‌ ನೇಮಕಾತಿ, ತಿಂಗಳಿಗೆ 1,77,500 ರೂ.ವರೆಗೆ ಸಂಬಳ    

7ನೇ ವೇತನ ಆಯೋಗದಡಿ ಈ ಹುದ್ದೆಗಳಿಗೆ ವೇತನ ನಿಗದಿಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆಗಸ್ಟ್ 12 ರೊಳಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.  ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ೧.೫ಲಕ್ಷ ರೂ.ವರೆಗೆ ವೇತನ ಪಡೆಯಬಹುದಾಗಿದೆ.

ಎಲ್ಲಾ 46 ಹುದ್ದೆಗಳಿಗೆ  ನಿರ್ದಿಷ್ಟವಾದ ಅರ್ಹತೆಯನ್ನ ಹೊಂದಿರಬೇಕು. ಸಂದರ್ಶನದ ಸುತ್ತಿನಲ್ಲಿ ಸಂಪೂರ್ಣವಾಗಿ ಭರ್ತಿ ಮಾಡಿದ ಸರಿಯಾದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ  ನಮೂನೆಯನ್ನು ಸಲ್ಲಿಸುವಾಗ ಅವರು ಎಲ್ಲಾ ದಾಖಲೆಗಳನ್ನು ಎಚ್ಚರಿಕೆಯಿಂದ ಅಪ್‌ಲೋಡ್ ಮಾಡಬೇಕು. ಅಭ್ಯರ್ಥಿಗಳು ಸಂದರ್ಶನಕ್ಕೆ ಕರೆದಾಗ, ಅವರೊಂದಿಗೆ ಸಲ್ಲಿಸಿದ ಅರ್ಜಿ ನಮೂನೆಯ ಮುದ್ರಣವನ್ನು ಕಡ್ಡಾಯವಾಗಿ ತೋರಿಸಬೇಕಾಗುತ್ತದೆ.

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಲ್ಲಿ ಕೇಂದ್ರ ರಸಗೊಬ್ಬರ ಗುಣಮಟ್ಟ ನಿಯಂತ್ರಣ ಮತ್ತು ತರಬೇತಿ ಸಂಸ್ಥೆಯಲ್ಲಿ ಮೂರು ಸಹಾಯಕ ಕೃಷಿ ನಿರ್ದೇಶಕರ ಹುದ್ದೆ, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಸಸ್ಯ ಸಂರಕ್ಷಣಾ ನಿರ್ದೇಶನಾಲಯದಲ್ಲಿ ಒಂದು ಸಹಾಯಕ ನಿರ್ದೇಶಕರ ಹುದ್ದೆ ಕೇಂದ್ರ ಗೃಹ ಸಚಿವಾಲಯದಲ್ಲಿ 8 ಸಂಶೋಧನಾ ಅಧಿಕಾರಿ ಹುದ್ದೆಗಳು ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಭಾರತೀಯ ಮಾಹಿತಿ ಸೇವೆಯ ಹಿರಿಯ ಶ್ರೇಣಿಯ 34 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ITI ಪಾಸಾದವರಿಗೆ ಅವಕಾಶ: NPCILನಲ್ಲಿ 173 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ    

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದು, ಕಡ್ಡಾಯವಾಗಿ ಹಿಂದಿ ಹಾಗೂ ಇಂಗ್ಲೀಷ್ ಭಾಷೆ ಅಥವಾ ಮಾಧ್ಯಮದಲ್ಲಿ ಅಭ್ಯಾಸ ಮಾಡಿರಬೇಕು.

ಹಿಂದಿ, ಇಂಗ್ಲಿಷ್, ಪಂಜಾಬಿ, ಒಡಿಯಾ, ತೆಲುಗು, ಬಂಗಾಳಿ, ಮರಾಠಿ, ಗುಜರಾತಿ, ಅಸ್ಸಾಮೀಸ್ ಮತ್ತು ಮಣಿಪುರ -ಹೀಗೆ 10 ಭಾಷೆಗಳಲ್ಲಿ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯೋಮಿತಿ ೩೦ ವರ್ಷ ಆಗಿರಲಿದೆ. ಈ ಎಲ್ಲಾ ಹುದ್ದೆಗಳ ಅರ್ಹತಾ ಮಾನದಂಡಗಳು ವಿಭಿನ್ನವಾಗಿರುತ್ತವೆ. ಅಧಿಕೃತ ಅಧಿಸೂಚನೆಯಲ್ಲೂ ಈ ಬಗ್ಗೆ ವಿವರಿಸಲಾಗಿದ್ದು, ಅಭ್ಯರ್ಥಿಗಳು ಪರಿಶೀಲಿಸಬಹುದು.  
 

ಅಭ್ಯರ್ಥಿಗಳು 25 ರೂ. ಅರ್ಜಿ ಶುಲ್ಕವನ್ನು ಎಸ್‌ಬಿಐನ ಯಾವುದೇ ಶಾಖೆಯಲ್ಲಿ ನಗದು ಮೂಲಕ ಅಥವಾ ಎಸ್‌ಬಿಐನ ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನು ಬಳಸಿಕೊಂಡು ಅಥವಾ ವೀಸಾ / ಮಾಸ್ಟರ್ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿ ಹಣವನ್ನು ರವಾನಿಸುವ ಮೂಲಕ ಪಾವತಿಸಬಹುದು.  ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಬಿಡಿ / ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಪುರುಷ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ವಿನಾಯಿತಿ ಇರುವುದಿಲ್ಲ.  ಅವರು ಪೂರ್ಣ ಪ್ರಮಾಣದ ನಿಗದಿತ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಕೂಡಲೇ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮೀರುವ ಮುನ್ನವೇ ಅರ್ಜಿ ಸಲ್ಲಿಸಬಹುದು.

ಆಗಸ್ಟ್ 8ಕ್ಕೆ CAPF ಅಸಿಸ್ಟಂಟ್ ಕಮಾಂಡೆಂಟ್ಸ್ ಎಕ್ಸಾಂ: ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿಕೊಳ್ಳಿ    

ಆಯ್ಕೆಯಾದ ನಂತರ ಸಂಶೋಧನಾ ಅಧಿಕಾರಿಗಳು ಎಂಟು ಪ್ರಾದೇಶಿಕ ಕಚೇರಿಗಳ (ದೆಹಲಿ, ಗಾಜಿಯಾಬಾದ್, ಭೋಪಾಲ್, ಮುಂಬೈ, ಕೋಲ್ಕತಾ, ಗುವಾಹಟಿ, ಬೆಂಗಳೂರು, ಮತ್ತು ಕೊಚ್ಚಿನ್) ಪೈಕಿ  ಯಾವುದೇ ಒಂದು ಕಚೇರಿಯಲ್ಲಿ ಸೇವೆ ಸಲ್ಲಿಸಬೇಕಾಗುತ್ತದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. 

click me!