ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿ

By Kannadaprabha News  |  First Published Jun 26, 2024, 11:48 AM IST

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ವಿವಿಧ ಹುದ್ದೆಗಳಾದ ಬೆರಳಚ್ಚುಗಾರರು, ಬೆರಳಚ್ಚು ನಕಲುದಾರರು, ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದೆ.


ಉತ್ತರ ಕನ್ನಡ ಜಿಲ್ಲಾ ಘಟಕದ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಶ್ರೇಣಿಯ ಕುರಿತು ಸಂಪೂರ್ಣ ಮಾಹಿತಿ ಪಡೆದು ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ವಿವರ

Latest Videos

undefined

1.ಬೆರಳಚ್ಚುಗಾರರು: (3)

2.ಬೆರಳಚ್ಚು ನಕಲುದಾರರು: (3)

3.ಆದೇಶ ಜಾರಿಕಾರರ: (3)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :19-07-2024

ಬ್ಯಾಂಕ್‌ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶ, ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆ

ವಿದ್ಯಾರ್ಹತೆ:

ಬೆರಳಚ್ಚುಗಾರರು: ಪಿಯುಸಿ ಅಥವಾ ಡಿಪ್ಲೊಮಾ ಪದವಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್‌ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರರು: ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಪದವಿಯನ್ನು ಉತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್‌ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಆದೇಶ ಜಾರಿಕಾರರು: ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಜೂ 27ರಿಂದ ಜುಲೈ 2ರವರೆಗೆ ಮಡಿಕೇರಿಯಲ್ಲಿ ಅಗ್ನಿವೀರ ನೇಮಕಾತಿ ರ್‍ಯಾಲಿ, ರಾಜ್ಯದ 14 ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ

ವಯೋಮಿತಿ

1. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆ ದಿನಾಂಕಕ್ಕೆ 18 ವರ್ಷ ಪೂರೈಸಿರಬೇಕು. ಪ.ಜಾತಿ ಪ. ಪಂಗಡ, ಪ್ರವರ್ಗ ಅಭ್ಯರ್ಥಿಗಳಿಗೆ 40 ವರ್ಷ

2. ಪ್ರವರ್ಗ: 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 38 ವರ್ಷ

3. ಸಾಮಾನ್ಯ ಅಭ್ಯರ್ಥಿಗಳಿಗೆ: ಗರಿಷ್ಠ 35 ವರ್ಷ

ವೇತನ ಶ್ರೇಣಿ

ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕ ವೇತನ 21, 400-42,000 ನಿಗದಿಪಡಿಸಲಾಗಿದೆ

ಅರ್ಜಿ ಶುಲ್ಕ

ಸಾಮಾನ್ಯ ವರ್ಗ: 2ಎ, 2ಬಿ, 3ಎ,3ಬಿ ಅಭ್ಯರ್ಥಿಗಳು ರು. 200

ಪ.ಜಾತಿ, ಪ.ಪಂಗಡ, ಪ್ರ,ವರ್ಗ:1, ಅಂಗವಿಕಲ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ವಿಧಾನ

ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಅರ್ಹತಾ ಪರೀಕ್ಷೆಗಳಲ್ಲಿನ ಒಟ್ಟು ಅಂಕಗಳಲ್ಲಿನ ಶೇಕಡಾವಾರುವಿನ ಮೊತ್ತದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

ಆದೇಶ ಜಾರಿಕಾರ: ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು. https://uttarakannada.dcourts.gov.in/notice-category/recruitments/

click me!