KIMS Koppal Recruitment 2022: ಕೊಪ್ಪಳದ ಕಿಮ್ಸ್ ನಲ್ಲಿ 17 ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

By Suvarna News  |  First Published Dec 19, 2021, 1:05 PM IST
  • ಖಾಲಿ ಇರುವ ಹುದ್ದೆ ಭರ್ತಿಗೆ ಮುಂದಾದ ಕಿಮ್ಸ್ ಕೊಪ್ಪಳ
  • ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 26 ಕೊನೆ ದಿನ
  • ಕಿಮ್ಸ್ ನಲ್ಲಿ ಒಟ್ಟು 17 ಬೋಧಕರ ಹುದ್ದೆ ಖಾಲಿ

ಬೆಂಗಳೂರು(ಡಿ.19): ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (Karnataka Institute of Medical Sciences ) ಕೊಪ್ಪಳದಲ್ಲಿ (Koppala) ಖಾಲಿ ಇರುವ ಬೋಧಕರ ಹುದ್ದೆಯನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಪ್ರೊಫೆಸರ್ (Professor), ಅಸೋಸಿಯೇಟ್ ಪ್ರೊಫೆಸರ್ (Associate Professor) ಮತ್ತು ಅಸಿಸ್ಟೆಂಟ್ ಪ್ರೊಫೆಸರ್ (Assistant Professor) ಒಟ್ಟು 17 ಬೋಧಕ ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಅಲ್ಲಿಸಲು ಕೋರಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು,  ಅರ್ಜಿ ಸಲ್ಲಿಸಲು ಡಿಸೆಂಬರ್ 26 ಕೊನೆಯ ದಿನವಾಗಿದೆ, ಹೆಚ್ಚಿನ ಮಾಹಿತಿಗೆ https://kimskoppal.karnataka.gov.in/  ಗೆ ಭೇಟಿ ನೀಡಲು ಕೋರಲಾಗಿದೆ. 

ಪ್ರೊಫೆಸರ್ -4, ಅಸೋಸಿಯೇಟ್ ಪ್ರೊಫೆಸರ್-5 ಮತ್ತು ಮತ್ತು ಅಸಿಸ್ಟೆಂಟ್ ಪ್ರೊಫೆಸರ್ 8 ಹೀಗೆ ಒಟ್ಟು 17 ಹುದ್ದೆಗಳು ಖಾಲಿ ಇದೆ. KIMS ಕೊಪ್ಪಳದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, M.D, MS ಅನ್ನು ಪೂರ್ಣಗೊಳಿಸಿರಬೇಕು.

Tap to resize

Latest Videos

undefined

ಅನುಭವ: ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವವರು 3 ವರ್ಷಗಳ ಕಾಲ ಕೆಲಸ ಮಾಡಿದ ಅನುಭವದೊಂದಿಗೆ 4 ಸಂಶೋಧನಾ ಲೇಖನ ಪ್ರಕಟಗೊಂಡಿರಬೇಕು. ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸಲು 4 ವರ್ಷಗಳ ಅನುಭವ ಹೊಂದಿರಬೇಕು. 2 ಸಂಶೋಧನಾ ಲೇಖನ ಪ್ರಕಟಗೊಂಡಿರಬೇಕು. ಅಸಿಸ್ಟೆಂಟ್ ಪ್ರೊಫೆಸರ್  ಹುದ್ದೆಗೆ ಮೂರು ವರ್ಷಗಳ ಅನುಭವವಿರಬೇಕು. ಈ ಎಲ್ಲಾ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 45 ವರ್ಷಗಳು ಮತ್ತು ಗರಿಷ್ಠ 55 ವರ್ಷಗಳು ಆಗಿರಬೇಕು.

INDIAN AIR FORCE RECRUITMENT 2022: ವಾಯುಸೇನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಅರ್ಜಿ ಶುಲ್ಕ ಮತ್ತು ವೇತನ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 2500/- ರೂ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಮಿಕ್ಕಂತೆ ಪ್ರೊಫೆಸರ್ ಹುದ್ದೆಗೆ  ತಿಂಗಳಿಗೆ 1,44,200 ರೂ ನಿಂದ 2,18,200/-ರೂ , ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ  1,31,400- ರೂ ನಿಂದ 2,17,100/- ರೂ ಮತ್ತು ಅಸಿಸ್ಟೆಂಟ್ ಪ್ರೊಫೆಸರ್  ಹುದ್ದೆಗೆ 79,800 ರೂ ನಿಂದ 211500/ ರೂ ವರೆಗೂ ವೇತನ ಸಿಗಲಿದೆ.

BMRCL Recruitment 2022: ನಮ್ಮ ಮೆಟ್ರೋದಲ್ಲಿ 144 ಇಂಜಿನಿಯರ್ ಹುದ್ದೆ ಭರ್ತಿಗೆ ಅಧಿಸೂಚನೆ

ಅಭ್ಯರ್ಥಿಗಳು  ಸಂಸ್ಥೆಯ ಅಧಿಕೃತ ವೆಬ್ ಸೈಟ್  https://kimskoppal.karnataka.gov.in/ ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಬಳಿಕ  ಸೂಕ್ತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿರ್ದೇಶಕರು, ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ, ಗಂಗಾವತಿ ರೋಡ್ ಕಿಡದಾಳ ಹತ್ತಿರ -583231 ವಿಳಾಸಕ್ಕೆ ಕಳುಹಿಸಿಕೊಡುವಂತೆ ಸೂಚಿಸಲಾಗಿದೆ.

ಹುಬ್ಬಳ್ಳಿ ಕಿಮ್ಸ್ ನಲ್ಲಿ ಖಾಲಿ ಇರುವ 37 ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ: ಕಿಮ್ಸ್ ಹುಬ್ಬಳ್ಳಿಯಲ್ಲಿ (KIMS Hubballi ) ಖಾಲಿ ಇರುವ ಬೋಧಕರ ಹುದ್ದೆಯನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಪ್ರೊಫೆಸರ್ (Professor), ಅಸೋಸಿಯೇಟ್ ಪ್ರೊಫೆಸರ್ (Associate Professor) ಮತ್ತು ಅಸಿಸ್ಟೆಂಟ್ ಪ್ರೊಫೆಸರ್ (Assistant Professor) ಒಟ್ಟು  37 ಬೋಧಕ ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಅಲ್ಲಿಸಲು ಕೋರಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು,  ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ, ಹೆಚ್ಚಿನ ಮಾಹಿತಿಗೆ https://hubballikims.karnataka.gov.in/ ಗೆ ಭೇಟಿ ನೀಡಲು ಕೋರಲಾಗಿದೆ. ಅಥವಾ http://kimshubballi.org/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. KIMS ಹುಬ್ಬಳ್ಳಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, M.D, MS ಅನ್ನು ಪೂರ್ಣಗೊಳಿಸಿರಬೇಕು.
 

click me!