ಯಾದಗಿರಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇರ ನೇಮಕಾತಿಗಾಗಿ, ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರುವರಿ 16 ಕೊನೆಯ ದಿನ.
ಯಾದಗಿರಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇರ ನೇಮಕಾತಿಗಾಗಿ, ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದ್ದು, ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಯ ವಿವರ: ಜವಾನ: 21 ಹುದ್ದೆ
undefined
ಪ್ರಮುಖ ದಿನಾಂಕಗಳು :
ಆನ್ ಲೈನ್ ಮೂಲಕ ಅಪ್ಲಿಕೇಷನ್‌ಗೆ ಕೊನೆಯ ದಿನಾಂಕ: 16-02-2024
ವಯಸ್ಸಿನ ಮಿತಿ :
ಕನಿಷ್ಠ ವಯಸ್ಸಿನ ಮಿತಿ: 19 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: ರು.200
ಪ್ರವರ್ಗ- 2ಎ, 2ಬಿ, 3ಎ/ಬಿ ಅಭ್ಯರ್ಥಿಗಳಿಗೆ : ರು.100
ಎಸ್ ಸಿ/ ಎಸ್ ಟಿ, ಪ್ರವರ್ಗ-1
ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ವೇತನ ಶ್ರೇಣಿ: ರು.17000 - 28950
ಶೈಕ್ಷಣಿಕ ವಿದ್ಯಾರ್ಹತೆ:
1. ಅಭ್ಯರ್ಥಿಗಳು ಮಾನ್ಯತೆ ಪಡೆದ ಪರೀಕ್ಷಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
2. ಲಘು ವಾಹನ ಚಾಲನಾ ಪರವಾನಿಗೆ ಪತ್ರ ಹೊಂದಿರಬೇಕು. ಆದರೆ, ಇದು ಕಡ್ಡಾಯವಲ್ಲ.
ಆಯ್ಕೆ ವಿಧಾನ
ಕರ್ನಾಟಕ ಅಧೀನ ನ್ಯಾಯಾಲಯಗಳ ನಿಯಮಗಳು 1982 ಮತ್ತು ನಿಯಮಗಳು 2007 ರನ್ವಯ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1:10 ಅನುಪಾತದಲ್ಲಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನುಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಸೂಚನೆ: ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ.