ವಿಜಯಪುರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ 7 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಾರ್ಚ್ 3 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು(ಫೆ.7): ವಿಜಯಪುರ ಜಿಲ್ಲೆಯ (Vijayapura District) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 7 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ (Anganwadi Centers) ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 15 ಅಂಗನವಾಡಿ ಕಾರ್ಯಕರ್ತೆ (Anganwadi Workers), ಮತ್ತು 156 ಅಂಗನವಾಡಿ ಸಹಾಯಕಿ (Anganwadi Helpers) ಹುದ್ದೆಗಳು ಖಾಲಿ ಇದ್ದು, ಒಟ್ಟು 171 ಹುದ್ದೆಗಳು ಇದ್ದು, ಆಸಕ್ತರು ಫೆಬ್ರವರಿ 7 ರಿಂದ ಮಾರ್ಚ್ 3 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ https://anganwadirecruit.kar.nic.in/ ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10ನೇ ತರಗತಿ (ಅಂಗನವಾಡಿ ಕಾರ್ಯಕರ್ತೆ), ಕನಿಷ್ಟ 4ನೇ ತರಗತಿ (ಅಂಗನವಾಡಿ ಸಹಾಯಕಿ) ಉತ್ತೀರ್ಣರಾಗಿರಬೇಕು.
undefined
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ anganwadirecruit.kar.nic.in ಅಥವಾ https://vijayapura.nic.in/ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
BANK OF MAHARASHTRA RECRUITMENT 2022: ಖಾಲಿ ಇರುವ 500 ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಆಸಿಡ್ ದಾಳಿಗೊಳಗಾದವರ ಆಯ್ಕೆ: ಆಸಿಡ್ ದಾಳಿಗೆ ಒಳಗಾದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಇತರ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ಮೊದಲ ಅದ್ಯತೆ ಮೇರೆಗೆ ನೇರವಾಗಿ ಅವರನ್ನೇ ಆಯ್ಕೆ ಮಾಡತಕ್ಕದ್ದು.
ಇಲಾಖೆಯ ಸಂಸ್ಥೆಗಳ ನಿವಾಸಿಗಳ ಆದ್ಯತೆ: ಬಾಲ ನ್ಯಾಯ ಕಾಯ್ದೆಯಡಿ ಇಲಾಖೆಯ ಸಂಸ್ಥೆಗಳಲ್ಲಿ / ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದ ಹಾಲಿ /ಮಾಜಿ ನಿವಾಸಿಗಳಿಗೆ ಎರಡನೇ ಆದ್ಯತೆ.
ವಿಧವೆಯರಿಗೆ ಆದ್ಯತೆ: ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಇತರೆ ವಿಧವೆಯರನ್ನು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಿದ ನಂತರ ವಿಧವೆಯರಾದಲ್ಲಿ ಪರಿಗಣಿಸಲಾಗುವುದಿಲ್ಲ. ವಿಧವೆಯರು ತಾವು ಎಲ್ಲಿ ವಾಸವಾಗಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ವಿಧವೆಯರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು.
ESIC Recruitment 2022: ಒಟ್ಟು 3847 ಹುದ್ದೆಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆ
ಅಂಗವಿಕಲ ಅಭ್ಯರ್ಥಿಗಳಿಗೆ ಆದ್ಯತೆ: ಅಂಗನವಾಡಿ ಕಾರ್ಯಕರ್ತೆಯು 3 ರಿಂದ 6 ವರ್ಷದ ಮಕ್ಕಳಿಗೆ ಆಟ ಮತ್ತು ಅಭಿನಯ ಗೀತೆಗಳ ಮೂಲಕ ಶಾಲಾ ಪೂರ್ವ ಶಿಕ್ಷಣವನ್ನು ನೀಡಲಾಗುತ್ತಿದ್ದು, ಚಟುವಟಿಕೆ ವೇಳೆಯಲ್ಲಿ ಮಕ್ಕಳನ್ನು ಹಿಡಿದೆತ್ತಿ ನಿಲ್ಲಿಸಲು ಹಾಗೂ ಅಭಿನಯ ಮಾಡಿ ತೋರಿಸಬೇಕಾಗುತ್ತದೆ. ವೃತ್ತ ಸಭೆ, ತಾಯಂದಿರ ಸಭೆ ಮತ್ತು ಮನೆ ಭೇಟಿ ನಿರ್ವಹಿಸಬೇಕಾಗುತ್ತದೆ. ಆದ ಕಾರಣ ಕಿವುಡರು, ಮೂಕರು, ಬುದ್ಧಿಮಾಂದ್ಯರು, ಮಾನಸಿಕ ಅಸ್ವಸ್ಥರು, ಕಾರ್ಯಕರ್ತೆ ಹುದ್ದೆಗೆ ಅರ್ಹರಿರುವುದಿಲ್ಲ. ಇತರೆ ದೈಹಿಕ ಅಂಗವಿಕಲ್ ಶೇ.60% ಮೀರದಂತೆ ಇರುವವರು ಮತ್ತು ಶಾಲಾಪೂರ್ವ ಶಿಕ್ಷಣ ನಡೆಸಲು ಸಮರ್ಥವಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು. ಈ ಕುರಿತು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು. ಅಂಗವಿಕಲರು ಪ್ರಸ್ತುತ ತಾವು ಎಲ್ಲಿ ವಾಸವಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು. ಅಂಗವಿಕಲ ಅಭ್ಯರ್ಥಿಗಳ ಅಂಗವಿಕಲತೆ ಪ್ರಮಾಣದ ಬಗ್ಗೆ ಸಂಶಯ ಉಂಟಾದಲ್ಲಿ ಪುನರ್ ಪರಿಶೀಲಿಸುವ ಅಧಿಕಾರವನ್ನು ಆಯ್ಕೆ ಸಮಿತಿ ಹೊಂದಿರುತ್ತದೆ. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ಅಂಗವಿಕಲರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ https://anganwadirecruit.kar.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆ 7,2022 ರಿಂದ ಮಾರ್ಚ್ 3 ,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.