Vijayapura Panchayat Recruitment 2022: ಪಂಚಾಯಿತ್ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಆಹ್ವಾನ

By Suvarna News  |  First Published Dec 28, 2021, 8:12 PM IST

ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು  ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 


ಬೆಂಗಳೂರು(ಡಿ.28): ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ (Library Supervisor ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 24 ಕೊನೆಯ ದಿನವಾಗಿದೆ.  ಹೆಚ್ಚಿನ ಮಾಹಿತಿಗೆ https://vijayapura.nic.in/ ಗೆ ಭೇಟಿ ನೀಡಿ.

ಶೈಕ್ಷಣಿಕ ವಿದ್ಯಾರ್ಹತೆ: ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತ್ ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Tap to resize

Latest Videos

undefined

ಅರ್ಹತೆಗಳು: ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು.
ನಿಗದಿಪಡಿಸಲಾದ ಮೀಸಲಾತಿಗೆ ಒಳಪಡುವ ಅಭ್ಯರ್ಥಿ ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು. 
ಗ್ರಂಥಾಲಯ ವಿಜ್ಞಾನದಲ್ಲಿ () ತರಬೇತಿ ಪಡೆದಿದ್ದವರಿಗೆ ಆದ್ಯತೆ ನೀಡಲಾಗುವುದು.

BMCRI RECRUITMENT 2022: ಬೆಂಗಳೂರು ಮೆಡಿಕಲ್​ ಕಾಲೇಜಿನ ಡೈರೆಕ್ಟರ್​ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನ

ವಯೋಮಿತಿ: ಗ್ರಂಥಾಲಯ ನೇಮಕಾತಿಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ18 ವರ್ಷ  ಇರಬೇಕು. ಸಾಮಾನ್ಯ ವರ್ಗದ ಗರಿಷ್ಟ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿ ಯ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿ ಇರಬೇಕು.

ಆಯ್ಕೆ ಪ್ರಕ್ರಿಯೆ: ಅಧಿಸೂಚನೆಯಲ್ಲಿ ಕೇಳಲಾಗಿರುವ ಅರ್ಹತೆಗಳು ಮತ್ತು ಹೆಚ್ಚು ಅಂಕಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಫಾರಂಗಳನ್ನು ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಹಾಗೂ ಕಚೇರಿಯಲ್ಲಿ ಬೆಳಿಗ್ಗೆ  10 ರಿಂದ ಸಂಜೆ 5:30ರೊಳಗೆ ಪಡೆಯಬಹುದು. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 24,2022ರೊಳಗೆ ಸಲ್ಲಿಸಲು ಕೋರಲಾಗಿದೆ.

ಕಚೇರಿ ವಿಳಾಸ: ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ.

NTPC Recruitment 2022: ಸಹಾಯಕ ಕಾನೂನು ಅಧಿಕಾರಿಗಳ ಹುದ್ದೆಗೆ ಅರ್ಜಿ

ಹಟ್ಟಿ ಚಿನ್ನದ ಗಣಿಯಲ್ಲಿ 1 ಲಕ್ಷಕ್ಕೂ ಅಧಿಕ ವೇತನದ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ: ರಾಯಚೂರಿನ (Raichur) ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್ (Hutti Gold Mines Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ  ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (Manager), ಡಿಜಿಎಂ, ಜನರಲ್ ಮ್ಯಾನೇಜರ್ (General Manager) ಹೀಗೆ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಬಿಇ, ಪಿಎಚ್​.ಡಿ. ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ (Application) ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​ಲೈನ್ (Offline)​ ಮೂಲಕ ಅರ್ಜಿ ಸಲ್ಲಿಸಲು ಜನವರಿ 21, 2022 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಂಪೆನಿಯ https://huttigold.karnataka.gov.in/ ಗೆ ಭೇಟಿ ನೀಡಿ ವಿವರಣೆ ಪಡೆದುಕೊಳ್ಳಬಹುದು. 

ಅರ್ಜಿ ಸಲ್ಲಿಸುವ ವಿಳಾಸ ಮತ್ತು ವಿಧಾನ: ಅಭ್ಯರ್ಥಿಗಳು  ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಂಡ ವಿಳಾಸಕ್ಕೆ ಕಳುಹಿಸಿ
I/c ಎಕ್ಸಿಕ್ಯೂಟಿವ್ ಡೈರೆಕ್ಟರ್
ಹಟ್ಟಿ ಗೋಲ್ಡ್​ ಮೈನ್ಸ್​ ಕಂಪನಿ ಲಿಮಿಟೆಡ್​
PO ಹಟ್ಟಿ- 584115
ರಾಯಚೂರು ಜಿಲ್ಲೆ
ಕರ್ನಾಟಕ

C.V. Raman Hospital Recruitment 2022: ಖಾಲಿ ಇರುವ Pharmacist ಮತ್ತು Staff Nurse ಹುದ್ದೆ

click me!