UAS Dharwad Recruitment 2022: ಕೃಷಿ ವಿಶ್ವವಿದ್ಯಾಲಯದ ವಿವಿಧ ಹುದ್ದೆಗೆ ಡಿ.31ರಂದು ನೇರ ಸಂದರ್ಶನ

By Suvarna News  |  First Published Dec 27, 2021, 9:03 PM IST
  • ವಿವಿಧ ಹುದ್ದೆಗಳ ಭರ್ತಿಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯ ಅಧಿಸೂಚನೆ
  • ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಲು ಸೂಚನೆ
  • ಡಿಸೆಂಬರ್ 31,2021ರಂದು ನಡೆಯಲಿರುವ ನೇರ ಸಂದರ್ಶನ

ಬೆಂಗಳೂರು(ಡಿ.27): ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ (University of Agricultural Sciences Dharwad )ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಸಂಶೋಧನಾ ಸಹಾಯಕ (Research Associate), ಹಿರಿಯ ಸಂಶೋಧನಾ ಅಭ್ಯರ್ಥಿ(Senior Research Fellow) ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ (Graduate Assistant) ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://uasd.edu/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಡಿಸೆಂಬರ್ 31,2021ರಂದು  ನೇರ ಸಂದರ್ಶನ ನಡೆಯಲಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸಂಶೋಧನಾ ಸಹಾಯಕ, ಹಿರಿಯ ಸಂಶೋಧನಾ ಅಭ್ಯರ್ಥಿ ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಎಂ.ಎಸ್ಸಿ, ಪಿಹೆಚ್‌.ಡಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

Tap to resize

Latest Videos

undefined

ವಯೋಮಿತಿ ಮತ್ತು ವೇತನ: ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ  ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ. ಸಂಶೋಧನಾ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 40,000/-ರೂ, ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 25,000/-ರೂ ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ 14,000/-ರೂ ವೇತನವನ್ನು ನಿಗದಿಯಾಗಿದೆ.

IT BPM Industry Jobs: ಭಾರತದ ಐಟಿ ವಲಯದಲ್ಲಿ ಮುಂದಿನ ವರ್ಷ 3.75 ಲಕ್ಷ ಉದ್ಯೋಗ ಸೃಷ್ಟಿ

ಸಂದರ್ಶನದ ವಿವರ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಡಿಸೆಂಬರ್ 31,2021ರಂದು ಬೆಳಿಗ್ಗೆ 10:30 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಲು ಈ ಕೆಳಗಿನ ವಿಳಾಸದಲ್ಲಿ ಇರತಕ್ಕದ್ದು,
Office Of The Association,
Director of Research (HQ),
Krishinagar,
Dharwad -580 005,
Karnataka.

NIMHANS RECRUITMENT 2022: MSC ಆದವರಿಗೆ ಕನ್ನಡ ಸ್ಪಷ್ಟವಾಗಿ ಬರೆಯಲು ಬಂದರೆ ನಿಮ್ಹಾನ್ಸ್​​ನಲ್ಲಿ ಉದ್ಯೋಗ

ಭಾರತೀಯ ಸಂಖ್ಯಾಶಾಸ್ತ್ರ ಸಂಸ್ಥೆಯಲ್ಲಿ ಜೂನಿಯರ್ ರಿಸರ್ಚ್​ ಫೆಲೋ ಹುದ್ದೆ: ಭಾರತೀಯ ಸಂಖ್ಯಾಶಾಸ್ತ್ರ ಸಂಸ್ಥೆ (Indian Statistical Institute) ಕೊಲ್ಕತ್ತಾ, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ  ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.  ಒಟ್ಟು 3 ಜೂನಿಯರ್ ರಿಸರ್ಚ್​ ಫೆಲೋ (Junior Research Fellow) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆನ್‌ಲೈನ್ (Online) ಮೂಲಕ ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಎಂಎಸ್ಸಿ, ಎಂಟೆಕ್, ಎಂಇ, ಎನ್​​ಇಟಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು  ಹೆಚ್ಚಿನ ಮಾಹಿತಿಗಾಗಿ web.isical.ac.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ: ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಅಂಗೀಕೃತ ಸಂಸ್ಥೆಯಿಂದ ಕಡ್ಡಾಯವಾಗಿ ಎಂಎಸ್ಸಿ, ಎಂಟೆಕ್, ಎಂಇ, ಎನ್​​ಇಟಿ  ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮೀರಿರಬಾರದು. 

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ  ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000 ವೇತನ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಉದ್ಯೋಗ ನಿರ್ವಹಿಸಬೇಕಾಗುತ್ತದೆ.

click me!