ಸರ್ಕಾರಿ ನೌಕರರಿಗೆ ಮಹತ್ವದ ಸೂಚನೆ ಹೊರಡಿಸಿದ ಮುಖ್ಯ ಕಾರ್ಯದರ್ಶಿ

By Suvarna NewsFirst Published Mar 17, 2021, 7:38 PM IST
Highlights

ಸರ್ಕಾರಿ ನೌಕರರಿಗೆ ಮುಖ್ಯ ಕಾರ್ಯದರ್ಶಿ ಮಹತ್ವದ ಸೂಚನೆ ಹೊರಡಿಸಿದ್ದಾರೆ.  ಸರ್ಕಾದ ಎಲ್ಲ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಎಲ್ಲ ಜಿಲ್ಲಾಧಿಕಾರಿಗಳು, ಎಲ್ಲ ಪ್ರಾದೇಶಿಕ ಆಯುಕ್ತರಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ.

ಬೆಂಗಳೂರು, (ಮಾ.17): ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿಗಳು, ನೌಕರರು ಮತ್ತು ಸಿಬ್ಬಂದಿ ಕೆಲಸದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಅವರು ಸರ್ಕಾದ ಎಲ್ಲ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಎಲ್ಲ ಜಿಲ್ಲಾಧಿಕಾರಿಗಳು, ಎಲ್ಲ ಪ್ರಾದೇಶಿಕ ಆಯುಕ್ತರಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ.

ಖಾಸಗಿ, ಸರ್ಕಾರಿ ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 ಈಗಾಗಲೇ ರಾಜ್ಯ ಸರ್ಕಾರದ ಎಲ್ಲ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಆಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿತ್ತು. ಆದರೆ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಚೇರಿಗಳ ಅಧಿಕಾರಿ, ನೌಕರರು ಗುರುತಿನ ಚೀಟಿ ಧರಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. 

ಕಾರಣ ಸಾರ್ವಜನಿಕರಿಗೆ ನಿರ್ದಿಷ್ಟ ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸಿ ಭೇಟಿಯಾಗಲು ಕಷ್ಟವಾಗುತ್ತಿದೆ. ಆದ್ದರಿಂದ, ಕರ್ನಾಟಕ ರಾಜ್ಯ ಸರ್ಕಾರದ ಎಲ್ಲ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನ ನಿಗಮ ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ, ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಸೂಚಿಸಲಾಗಿದೆ.

ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇರುವ ತಪಾಸಣೆ ತಂಡದ ಮೂಲಕ ಗುರುತಿನ ಚೀಟಿ ಧರಿಸದಿರುವವರನ್ನು ಪತ್ತೆ ಹಚ್ಚಿ, ಬಿಗಿ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ.

click me!